Homeಮುಖಪುಟ'ಕಣ್ಣು ತೆರೆದ ನ್ಯಾಯ..': ಲೇಡಿ ಜಸ್ಟಿಸ್ ನೂತನ ಪ್ರತಿಮೆ ಅನಾವರಣಗೊಳಿಸಿದ ಸುಪ್ರೀಂ ಕೋರ್ಟ್, ಕತ್ತಿ ಬದಲಿಗೆ...

‘ಕಣ್ಣು ತೆರೆದ ನ್ಯಾಯ..’: ಲೇಡಿ ಜಸ್ಟಿಸ್ ನೂತನ ಪ್ರತಿಮೆ ಅನಾವರಣಗೊಳಿಸಿದ ಸುಪ್ರೀಂ ಕೋರ್ಟ್, ಕತ್ತಿ ಬದಲಿಗೆ ಸಂವಿಧಾನ 

- Advertisement -
- Advertisement -

ನ್ಯಾಯದ ಸಂಕೇತವಾಗಿ ಕೋರ್ಟ್‌ಗಳಲ್ಲಿರುವ ಕಣ್ಣಿಗೆ ಪಟ್ಟಿ ಕಟ್ಟಿದ ‘ಲೇಡಿ ಜಸ್ಟಿಸ್’ ಪ್ರತಿಮೆ ಬಗ್ಗೆ ಬಹುತೇಕ ಗೊತ್ತಿದೆ. ಸಾಮಾನ್ಯವಾಗಿ ನ್ಯಾಯಾಲಯಗಳು, ಚಲನಚಿತ್ರಗಳು ಮತ್ತು ಕಾನೂನು ಕೋಣೆಗಳಲ್ಲಿ ಆ ಪ್ರತಿಮೆಯನ್ನು ಕಣ್ಣುಮುಚ್ಚಿರುವುದನ್ನು ನೋಡಲಾಗುತ್ತದೆ. ಹೊಸ ಭಾರತದಲ್ಲಿ ಈಗ ಅದು ರೂಪಾಂತರಕ್ಕೆ ಒಳಗಾಗಿದೆ. ಸಾಂಕೇತಿಕ ಬದಲಾವಣೆಯಲ್ಲಿ, ಕಣ್ಣಿಗೆ ಬಟ್ಟೆಯನ್ನು ತೆಗೆದುಹಾಕಿ, ಲೇಡಿ ಜಸ್ಟೀಸ್ ಕೈಯಲ್ಲಿದ್ದ ಕತ್ತಿಯನ್ನು ಸಂವಿಧಾನದೊಂದಿಗೆ ಬದಲಾಯಿಸಲಾಗಿದೆ.

ಈ ಬದಲಾವಣೆಯು ದೇಶದಲ್ಲಿ ಇತ್ತೀಚೆಗೆ ನಡೆದ ಬ್ರಿಟಿಷ್ ಕಾಲದ ಕಾನೂನುಗಳ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎನ್ನಲಾಗುತ್ತಿದೆ. ಏಕೆಂದರೆ, ಭಾರತೀಯ ನ್ಯಾಯಾಂಗವು ಹೊಸ ಗುರುತನ್ನು ಸ್ವೀಕರಿಸುತ್ತಿದೆ.

ಸುಪ್ರೀಂ ಕೋರ್ಟ್‌ನ ಲಾಂಛನವನ್ನು ನವೀಕರಿಸಿರುವುದು ಮಾತ್ರವಲ್ಲದೆ, ‘ಲೇಡಿ ಜಸ್ಟೀಸ್’ ಎಂಬ ಐಕಾನಿಕ್‌ನ ಕಣ್ಣು ಪಟ್ಟಿಯನ್ನೂ ತೆಗೆಯಲಾಗಿದೆ. ‘ಕಾನೂನು ಇನ್ನು ಮುಂದೆ ಕುರುಡಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಸುಪ್ರೀಂ ಕೋರ್ಟ್ ರವಾನಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ಕ್ರಮವನ್ನು ಮುನ್ನಡೆಸಿದ್ದಾರೆ. ಭಾರತೀಯ ನ್ಯಾಯದ ವಿಕಾಸದ ಸ್ವರೂಪವನ್ನು ಒತ್ತಿಹೇಳಿದ್ದು, ಹೊಸ ಪ್ರತಿಮೆಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ಸ್ಥಾಪಿಸಲಾಗಿದೆ.

ಖಡ್ಗದ ಬದಲಿಗೆ ಸಂವಿಧಾನ

ಹಿಂದಿನ ಪ್ರತಿಮೆಯಲ್ಲಿ, ‘ಲೇಡಿ ಜಸ್ಟೀಸ್’ ಒಂದು ಕೈಯಲ್ಲಿ ಶಿಕ್ಷೆಯ ಸಂಕೇತವಾಗಿ ಕತ್ತಿಯನ್ನು ಹಿಡಿದಿದ್ದರೆ, ಇನ್ನೊಂದು ಕೈಯಲ್ಲಿ ನ್ಯಾಯವನ್ನು ಪ್ರತಿನಿಧಿಸುವ ತಕ್ಕಡಿಗಳನ್ನು ಹಿಡಿದಿದ್ದರು. ಹೊಸ ಪ್ರತಿಮೆಯಲ್ಲಿ, ಕತ್ತಿಯನ್ನು ಸಂವಿಧಾನದಿಂದ ಬದಲಾಯಿಸಲಾಗಿದೆ. ಆದರೆ, ತಕ್ಕಡಿ ಬದಲಾಗದೆ ಉಳಿದಿದೆ. ಎಲ್ಲರಿಗೂ ಸಮಾನತೆಯನ್ನು ಖಾತ್ರಿಪಡಿಸುವ ಸಂವಿಧಾನದ ಪ್ರಕಾರ ಭಾರತದಲ್ಲಿ ನ್ಯಾಯವನ್ನು ವಿತರಿಸಲಾಗಿದೆ ಎಂಬುದನ್ನು ಈ ಬದಲಾವಣೆಯು ಸಂಕೇತಿಸುತ್ತದೆ.

ಇದನ್ನೂ ಓದಿ; ಪಂಜಾಬ್‌ | ನಡೆಯುತ್ತಿರುವ ಪಂಚಾಯತ್ ಚುನಾವಣೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...