Homeಮುಖಪುಟಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ...

ಪಶ್ಚಿಮ ಬಂಗಾಳ | 25,000 ಶಿಕ್ಷಕರನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು (ಏಪ್ರಿಲ್ 3) ಎತ್ತಿಹಿಡಿದಿದೆ.

“ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ವಂಚನೆಯಿಂದ ಕೂಡಿದ್ದು, ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ” ಎಂಬ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

“ತಪ್ಪಿತಸ್ಥ ಅಭ್ಯರ್ಥಿಗಳ ನೇಮಕಾತಿ ರದ್ದುಮಾಡಿ, ಅವರನ್ನು ಪಡೆದಿರುವ ಸಂಬಳವನ್ನು ವಾಪಸ್ ಪಡೆದುಕೊಳ್ಳಬೇಕು ಎಂಬ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಸೂಕ್ತ ಕಾರಣ ಕಾಣುತ್ತಿಲ್ಲ. ನೇಮಕಾತಿ ವಂಚನೆಯಿಂದ ಕೂಡಿರುವುದರಿಂದ ಅದನ್ನು ಸಮರ್ಥಿಸುವ ಅಗತ್ಯತೆ ಇಲ್ಲ” ಎಂದಿದ್ದಾರೆ.

“ಸಂವಿಧಾನದ 14 ಮತ್ತು 16 ನೇ ವಿಧಿಯನ್ನು ಉಲ್ಲಂಘಿಸಿದ ಮತ್ತು ಅಕ್ರಮಗಳ ಕಾರಣ ನಿರ್ದಿಷ್ಟವಾಗಿ ಕಳಂಕಿತ ಅಭ್ಯರ್ಥಿಗಳ ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ಅನೂರ್ಜಿತವೆಂದು ಘೋಷಿಸಲಾಗಿದೆ. ಹೀಗಾಗಿ, ಈ ಅಭ್ಯರ್ಥಿಗಳ ನೇಮಕಾತಿಗಳನ್ನು ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಅದಾಗ್ಯೂ, ಈಗಾಗಲೇ ನೇಮಕಗೊಂಡ ಅಭ್ಯರ್ಥಿಗಳಿಗೆ ಇದುವರೆಗೆ ಪಾವತಿಸಿದ ಸಂಬಳವನ್ನು ವಾಪಸ್ ಪಡೆಯುವ ಅಗತ್ಯವಿಲ್ಲ. ಆದರೆ, ಅಭ್ಯರ್ಥಿಗಳ ವಜಾ ಬಳಿಕ, ಆ ಹುದ್ದೆಯನ್ನು ಖಾಲಿ ಹುದ್ದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

ಹೊಸ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಮತ್ತು ಹೊಸ ಪ್ರಕ್ರಿಯೆಯಲ್ಲಿ ಕಳಂಕರಹಿತ ಅಭ್ಯರ್ಥಿಗಳಿಗೆ ಸಡಿಲಿಕೆ ನೀಡಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 4 ರಂದು ನಡೆಸಲು ನ್ಯಾಯಪೀಠ ನಿರ್ಧರಿಸಿದೆ.

ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂಬ ಷರತ್ತಿನೊಂದಿಗೆ ಹೈಕೋರ್ಟ್ ಆದೇಶಿಸಿದ ಸಿಬಿಐ ತನಿಖೆಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

ಏಪ್ರಿಲ್ 22, 2024ರಂದು, ಕಲ್ಕತ್ತಾ ಹೈಕೋರ್ಟ್ ಎಸ್‌ಎಸ್‌ಸಿಯಿಂದ 25,753 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿ, ಅವರು ಪಡೆದಿರುವ ಸಂಬಳವನ್ನು ಬಡ್ಡಿಯೊಂದಿಗೆ ಹಿಂದಿರುಗಿಸುವಂತೆ ಆದೇಶಿಸಿತ್ತು. 15 ದಿನಗಳಲ್ಲಿ ಹುದ್ದೆಗಳಿಗೆ ಹೊಸ ನೇಮಕಾತಿಗೆ ಆದೇಶಿಸಿತ್ತು.

ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ನೇತೃತ್ವದ ಪೀಠವು, 2016 ರಲ್ಲಿ ಗ್ರೂಪ್ ಸಿ, ಗ್ರೂಪ್ ಡಿ, 9 ಮತ್ತು 10 ನೇ ತರಗತಿಗಳ ಒಎಂಆರ್‌ ಶೀಟ್‌ಗಳಲ್ಲಿ ವಂಚನೆ ಮಾಡಲಾಗಿದೆ ಎಂದು ಹೇಳಿತ್ತು. ಎಲ್ಲಾ ನೇಮಕಾತಿಗಳು ಕಾನೂನುಬಾಹಿರ ಎಂದು ಎಂದಿತ್ತು. ನೇಮಕಾತಿ ಮಾಡಿಕೊಂಡವರ ಹೆಸರುಗಳನ್ನೂ ಕಾನೂನುಬಾಹಿರವಾಗಿ ಬೋರ್ಡ್‌ನಲ್ಲಿ ಸೇರಿಸಲಾಗಿದೆ ಎಂದು ಹೇಳಿತ್ತು.

ರಾಜ್ಯಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮನ ಹೆಸರಿಗೆ ಕಳಂಕ ತರಬೇಡಿ’: ರಾಮಮಂದಿರ ದೇಣಿಗೆ ಪ್ರಕರಣದ ಚಾರ್ಜ್‌ಶೀಟ್‌ ವಿಳಂಬದ ಕುರಿತು ಕಾಂಗ್ರೆಸ್‌ ಆಕ್ರೋಶ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆ ಕುರಿತು ಕಾಂಗ್ರೆಸ್‌ ಪ್ರಶ್ನೆಗಳನ್ನು ಎತ್ತಿದ್ದು, ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದೆ. ದೇಣಿಗೆ ನಿರ್ವಹಣೆ ಮತ್ತು...

SIR ಹೆಸರಿನಲ್ಲಿ ಚುನಾವಣಾ ಆಯೋಗದ ವಿಐಪಿ ಹಾಗೂ ಸಾಮಾನ್ಯ ಮತದಾರರು ಎಂಬ ಪದವೇ ಅಸಂವಿಧಾನಿಕ: ಮಲ್ಲಿಕಾರ್ಜುನ ಖರ್ಗೆ

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಹೆಸರಿನಲ್ಲಿ ದೇಶದ ಪ್ರಜೆಗಳ ಮತದಾನದ ಹಕ್ಕನ್ನೇ ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ...

ದೆಹಲಿ ಎಸ್‌ಐಆರ್‌: ಮುಸ್ಲಿಂ, ಎಸ್‌ಸಿ ಹಾಗೂ ವಲಸಿಗರ ಪ್ರದೇಶಗಳಲ್ಲೇ ಭಾರೀ ಮತದಾರರ ಹೆಸರುಗಳ ಹೊರಗಿಡುವಿಕೆ: ವರದಿ

ನವದೆಹಲಿ: ದೆಹಲಿಯಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಈ ಹಿಂದೆ ನೋಂದಾಯಿತರಾಗಿದ್ದ ಸುಮಾರು ಮೂವರಲ್ಲಿ ಒಬ್ಬರ ಹೆಸರು ಕಾಣೆಯಾಗಿರುವುದು ಗಮನಾರ್ಹ ಸಂಗತಿಯಾಗಿ ಹೊರಹೊಮ್ಮಿದೆ. ಅದರಲ್ಲೂ...

ಅಪಹರಣ ಪ್ರಕರಣದಲ್ಲಿ ಬಂಧನ: ಪೊಲೀಸ್ ಠಾಣೆಲ್ಲಿ ಆತ್ಮಹತ್ಯೆಗೆ ಶರಣಾದ ದಲಿತ ಯುವಕ

ಉತ್ತರ ಪ್ರದೆಶದ ಪ್ರತಾಪ್‌ಗಢದ ಪಟ್ಟಿ ಪೊಲೀಸ್ ಠಾಣೆಯ ತನಿಖಾ ಕೊಠಡಿಯ ಶೌಚಾಲಯದಲ್ಲಿ ಸೋಮವಾರ ಮುಂಜಾನೆ 22 ವರ್ಷದ ದಲಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪ್ರತಾಪ್‌ಗಢ ಎಸ್‌ಪಿ,...

‘ಬಾಂಗ್ಲಾದೇಶಿ’ ಎಂಬ ಹಣೆಪಟ್ಟಿ, 87 ದಿನಗಳ ಬಂಧನ, ಬಳಿಕ ಜಾಮೀನು : ಇದು ಬಂಗಾಳಿ ಮುಸ್ಲಿಮನ ಕರುಣಾಜನಕ ಕಥೆ

ಜಲೀಲ್ ಅಖ್ತರ್ ಅವರು ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಬಾಗ್ರೋಯಿ ಗ್ರಾಮದಲ್ಲಿ 70 ವರ್ಷಗಳ ಕಾಲ ಅತ್ಯಂತ ಶಾಂತಿಯುತ ಮತ್ತು ನಿರಾಳವಾದ ಜೀವನವನ್ನು ನಡೆಸುತ್ತಿದ್ದರು. ಭೂ ರಹಿತ ಗ್ರಾಮಸ್ಥರಾಗಿದ್ದ ಅವರು, ದಿನಗೂಲಿ...

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ: ಸಚಿವ ಶಿವಲಿಂಗೇಗೌಡ ವಿವಾದದ ಹೇಳಿಕೆ ಲೋಕಾಯುಕ್ತ ಮತ್ತು ರಾಜ್ಯಪಾಲರಿಗೆ ದೂರು

ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಚಿವರ ವಿರುದ್ಧ ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿಗೆ ವಕೀಲರು ದೂರು ಸಲ್ಲಿಸಿದ್ದಾರೆ. ವಕೀಲ ಎಂ.ಡಿ. ಗೋಪಾಲಗೌಡ ನೇತೃತ್ವದ...

‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ

ಪ್ರಯಾಗ್‌ರಾಜ್‌ನ ಡಾ. ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್‌ಎಲ್‌ಯು) ಕಾನೂನು ವಿಭಾಗದ ಮುಖ್ಯಸ್ಥರ ವಿರುದ್ಧ ದಲಿತ ವಿದ್ಯಾರ್ಥಿಯೊಬ್ಬರು ಮಾಡಿದ ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನದ ಆರೋಪಗಳ ಬಗ್ಗೆ ತನಿಖೆ ನಡೆಸಲು...

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...