Homeಮುಖಪುಟಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಎತ್ತಿ ಹಿಡಿದ ಸುಪ್ರೀಂ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು...

ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಎತ್ತಿ ಹಿಡಿದ ಸುಪ್ರೀಂ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಿಕೆಗೆ ತಡೆ

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆ 2018ನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡುವ ಅವಕಾಶವನ್ನು ನ್ಯಾಯಾಲಯ ತಳ್ಳಿಹಾಕಿದೆ.

2018ರ ಮಾರ್ಚ್‌ 20ರಂದು ಸುಪ್ರೀಂಕೋರ್ಟ್‌ನ ವಿಭಾಗೀಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಎ.ಕೆ. ಗೋಯಲ್ ಮತ್ತು ಯು.ಯು.ಲಲಿತ್ SC/ST ಸಮುದಾಯದವರ ಮೇಲೆ ದೌರ್ಜನ್ಯ ನಡೆದಾಗ ನೇಮಕಾತಿ ಪ್ರಾಧಿಕಾರದಿಂದ ಸೂಕ್ತ ಅನುಮತಿ ಇಲ್ಲದೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಬಂಧಿಸುವಂತಿಲ್ಲ ಎಂದು ಆದೇಶ ನೀಡಿದ್ದರು.

ಅಂದರೆ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಸಾರ್ವಜನಿಕ ಸೇವಕನನ್ನು ಬಂಧಿಸುವ ಮೊದಲು ಪ್ರಾಥಮಿಕ ತನಿಖೆ ನಡೆಸಬೇಕು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಅನುಮತಿ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಹೇಳಿತ್ತು. ಅದನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ಕೇಂದ್ರ ಸರ್ಕಾರ ಕಳೆದ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ಕಾಯ್ದೆಗೆ ತಿದ್ದುಪಡಿ ತಂದಿತ್ತು. 2018ರ ಮಾರ್ಚ್ ತಿಂಗಳಲ್ಲಿ ಸುಪ್ರೀಂಕೋರ್ಟ್‌ನ ವಿಭಾಗೀಯ ಪೀಠ ಇದನ್ನು ಅಳಿಸಿಹಾಕಿತ್ತು. ಈ ತೀರ್ಪನ್ನು ತ್ರಿಸದಸ್ಯ ಪೀಠದ ಮುಂದೆ ಪ್ರಶ್ನಿಸಲಾಗಿತ್ತು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಅರುಣ್ ಮಿಶ್ರಾ, ಎಂ.ಆರ್. ಶಾ ಮತ್ತು ಬಿ.ಆರ್. ಗವಾಯಿ ಅವರಿದ್ದ ಪೀಠ ಅಸಹಾಯಕರಿಗೆ ಈ ಕಾಯ್ದೆ ಅಗತ್ಯವಾಗಿದೆ ಎಂದು ಅರ್ಜಿಯನ್ನು ಮಾನ್ಯ ಮಾಡಿತ್ತು. ಜೊತೆಗೆ ಇದು ಸಾಕಷ್ಟು ವಿವಾದ ಏಳಲು ಕಾರಣವಾಗುತ್ತದೆ. ನಿಗದಿತ ಸಮಯದಲ್ಲಿ ತನಿಖೆ ನಡೆಸದಿದ್ದರೆ ವಿಚಾರಣೆಯನ್ನು ನಡೆಸಲು ಬರುವುದಿಲ್ಲ ಎಂದು ತಿಳಿಸಿತ್ತು.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ವಿನೀತ್ ಸರನಿ ಮತ್ತು ರವೀಂದ್ರ ಭಟ್ ಅವರಿದ್ದ ಪೀಠ ಪ್ರಕರಣದ  ತೀರ್ಪು ಪ್ರಕಟಿಸಿದ್ದು ದಲಿತರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ಜು ತಕ್ಷಣ ಬಂಧಿಸಬೇಕು. ನಿರೀಕ್ಷಣಾ ಜಾಮೀನು ನೀಡುವುದನ್ನು ನಿಷೇಧಿಸಬೇಕು. ಬಂಧಿಸುವ ವೇಳೆ ಪ್ರಾಥಮಿಕ ತನಿಖೆ ಅಗತ್ಯ. ಹಿರಿಯ ಪೊಲೀಸ್ ಅಧಿಕಾರಗಳ ಅನುಮತಿ ಬೇಕಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...