Homeದಲಿತ್ ಫೈಲ್ಸ್ದಲಿತ ಸಂಶೋಧಕರ ದತ್ತಾಂಶ ನಷ್ಟಕ್ಕೆ ಪರಿಹಾರ ಪಡೆಯುವ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್

ದಲಿತ ಸಂಶೋಧಕರ ದತ್ತಾಂಶ ನಷ್ಟಕ್ಕೆ ಪರಿಹಾರ ಪಡೆಯುವ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ದಲಿತ ಸಂಶೋಧಕರಾದ ಕ್ಷಿಪ್ರಾ ಉಕೆ ಮತ್ತು ಶಿವಶಂಕರ್ ದಾಸ್ ಅವರು ತಮ್ಮ ಸಂಶೋಧನಾ ದತ್ತಾಂಶ ನಷ್ಟದಿಂದ ಅನುಭವಿಸಿದ ಹಾನಿಯ ಪ್ರಮಾಣವನ್ನು ನಿರ್ಣಯಿಸಲು ನಾಗಪುರ ಜಿಲ್ಲಾಧಿಕಾರಿಗೆ ನಿರ್ದೇಶಿಸಿದ ಬಾಂಬೆ ಹೈಕೋರ್ಟ್‌ನ 2023 ರ ಆದೇಶವನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಎತ್ತಿಹಿಡಿದಿದೆ.

ಈ ಮೂಲಕ, ದಲಿತ ಸಂಶೋಧಕರು ತಮ್ಮ ಸಂಶೋಧನಾ ದತ್ತಾಂಶ ನಷ್ಟಕ್ಕೆ ಪರಿಹಾರ ಪಡೆಯುವ ಹಕ್ಕನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ

ದಲಿತ ಸಂಶೋಧಕರು ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪಿಎಚ್‌ಡಿ ಪದವಿ ಪಡೆದಿರುವ ಉಕೆ ಮತ್ತು ದಾಸ್ ಇಬ್ಬರೂ ಪರಿಶಿಷ್ಟ ಜಾತಿ ಸಮುದಾಯಗಳ ಸದಸ್ಯರು. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪಿಎಚ್‌ಡಿ ಪದವಿ ಪಡೆದವರು. ತಮ್ಮ ಸಂಶೋಧನಾ ದತ್ತಾಂಶ ನಷ್ಟಕ್ಕೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದಿಂದ ಪರಿಹಾರವನ್ನು ಪಡೆದಿಲ್ಲ ಎಂದು ಹೇಳಿಕೊಂಡು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತಾವು ಸಂಶೋಧನಾ ಯೋಜನೆಯಲ್ಲಿ ತೊಡಗಿದ್ದೇವೆ, ನಾಗ್ಪುರದ ವಿವಿಧ ಶೈಕ್ಷಣಿಕ ಕೇಂದ್ರಗಳ ವಿದ್ಯಾರ್ಥಿಗಳ ಸಾಮಾಜಿಕ-ರಾಜಕೀಯ ಜಾಗೃತಿಯ ಕುರಿತು ನಡೆಸಿದ ಸಮೀಕ್ಷೆಯಿಂದ 500 ಮಾದರಿಗಳವರೆಗೆ ಸಂಶೋಧನಾ ದತ್ತಾಂಶವನ್ನು ರಚಿಸಿದ್ದೇವೆ ಎಂದು ಸಂಶೋಧಕರು ಹೈಕೋರ್ಟ್‌ಗೆ ತಿಳಿಸಿದ್ದರು.

ಇಬ್ಬರೂ ನಗರದಿಂದ ಹೊರಗಿರುವಾಗ, ಬೇರೆ ಜಾತಿಗೆ ಸೇರಿದ ತಮ್ಮ ಮನೆಯ ಮಾಲೀಕರ ಮಗ, ಬಜನಗರ ಪೊಲೀಸ್ ಠಾಣೆಯ ಒಪ್ಪಿಗೆಯೊಂದಿಗೆ ನಾವು ವಾಸಿಸುತ್ತಿದ್ದ ಮನೆಯ ಬೀಗಗಳನ್ನು ಮುರಿದು ಲ್ಯಾಪ್‌ಟಾಪ್ ಅನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಹೈಕೋರ್ಟ್ ತನ್ನ ಆದೇಶದಲ್ಲಿ, ಕ್ರಿಮಿನಲ್ ತನಿಖೆಯ ಆರೋಪಪಟ್ಟಿಯನ್ನು ನಾಗ್ಪುರದ ವಿಶೇಷ ನ್ಯಾಯಾಲಯದ ಮುಂದೆ ಸಲ್ಲಿಸಲಾಗಿದೆ ಎಂಬುದನ್ನು ಗಮನಿಸಿದೆ.

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೆ ದೂರು ನೀಡಿದ್ದರೂ, ಅದು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ತಮ್ಮ ದೂರಿನ ಕುರಿತು ತನಿಖೆಯನ್ನು ಪ್ರಾರಂಭಿಸಲು ನಿರ್ದೇಶನಗಳನ್ನು ಕೋರಿ ರಿಟ್ ಅರ್ಜಿಯನ್ನು ಸಲ್ಲಿಸಬೇಕಾಯಿತು ಎಂದು ಸಂಶೋಧಕರು ಹೈಕೋರ್ಟ್‌ಗೆ ತಿಳಿಸಿದರು.

ನ್ಯಾಯಾಲಯದ ನಿರ್ದೇಶನದ ನಂತರ ತನಿಖೆಯನ್ನು ಪ್ರಾರಂಭಿಸಿದ ರಾಷ್ಟ್ರೀಯ ಆಯೋಗವು, ದೌರ್ಜನ್ಯ ಕಾಯ್ದೆಯಿಂದ ಒದಗಿಸಲಾದ ದಂಪತಿಗಳ ಬೌದ್ಧಿಕ ಆಸ್ತಿಗೆ ಹಾನಿಯಾದ ಕಾರಣ ನಷ್ಟಕ್ಕೆ ಪರಿಹಾರವನ್ನು ನೀಡಿತು. ಈ ವಿಷಯದಲ್ಲಿ ಕ್ರಮ ಕೈಗೊಳ್ಳಲು ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 3 ಸದಸ್ಯರ ವಿಶೇಷ ತನಿಖಾ ಸಮಿತಿಯನ್ನು ರಚಿಸಿತು.

ದಲಿತರ ವಿರುದ್ಧ ನಡೆದ ಅಪರಾಧ ಮತ್ತು ದೌರ್ಜನ್ಯಕ್ಕೆ ಒಳಪಟ್ಟಿರಬಹುದಾದ ‘ಬೌದ್ಧಿಕ ಆಸ್ತಿ’ಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ 1989 ರ ನಿಬಂಧನೆಗಳ ಅಡಿಯಲ್ಲಿ ಪರಿಹಾರವನ್ನು ನೀಡುವ ಉದ್ದೇಶಕ್ಕಾಗಿ ಆಸ್ತಿಯೆಂದು ಅರ್ಥೈಸಿಕೊಳ್ಳಬಹುದು ಎಂದು ನ್ಯಾಯಮೂರ್ತಿ ವಿನಯ್ ಜೋಶಿ ಮತ್ತು ವಾಲ್ಮೀಕಿ ಸಾ ಮೆನೆಜಸ್ ಅವರನ್ನೊಳಗೊಂಡ ಪೀಠವು ನಾಗ್ಪುರ ಜಿಲ್ಲಾಧಿಕಾರಿಗೆ ಪರಿಹಾರವನ್ನು ನಿರ್ಣಯಿಸಲು ನಿರ್ದೇಶಿಸಿತ್ತು.

ಇದನ್ನೂ ಓದಿ; ಮರ್ಯಾದೆಗೇಡು ಹತ್ಯೆ| ಸಹೋದರ ಮತ್ತು ಆತನ ದಲಿತ ಪತ್ನಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...