Homeಮುಖಪುಟಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆ | ಪರಿಹಾರಕ್ಕಾಗಿ ಕಾನೂನು ಕ್ರಮಕ್ಕೆ ಮುಂದಾದ ಬುಲ್ಡೋಜರ್ ದಾಳಿಯ ಸಂತ್ರಸ್ತರು

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಬುಲ್ಡೋಜರ್ ಅ’ನ್ಯಾಯ’ದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ನಂತರ, ಉತ್ತರ ಪ್ರದೇಶದಾದ್ಯಂತ ಈ ಕ್ರಮಗಳಿಂದ ಸಂತ್ರಸ್ತರಾದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ತಮಗೆ ಆಗಿರುವ ನಷ್ಟಕ್ಕೆ ಪರಿಹಾರವನ್ನು ಪಡೆಯಲು ಕಾನೂನು ಕ್ರಮವನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ತನ್ನ ಬುಲ್ಡೋಜರ್ ಕ್ರಮದ ಬಗ್ಗೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಶ್ಲಾಘಿಸಿದೆ. ಸುಪ್ರೀಂಕೋರ್ಟ್ ತೀರ್ಪು

ಅದಾಗ್ಯೂ, ಸರಿಯಾದ ಪ್ರಕ್ರಿಯೆಯ ನಂತರ ಮತ್ತು ಅತಿಕ್ರಮಿತ ಭೂಮಿಯಲ್ಲಿ ನಿರ್ಮಿಸಲಾದ ಆಸ್ತಿಗಳ ಮೇಲೆ ನೆಲಸಮವನ್ನು ನಡೆಸಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ಬುಲ್ಡೋಜರ್ ನ್ಯಾಯ”ವನ್ನು ಕಾನೂನುಬಾಹಿರ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಬುಧವಾರ ದೇಶದಾದ್ಯಂತ ಮಾರ್ಗಸೂಚಿಗಳನ್ನು ನೀಡಿತ್ತು. ಪೂರ್ವ ಶೋಕಾಸ್ ಸೂಚನೆ ಇಲ್ಲದೆ ಯಾವುದೇ ಆಸ್ತಿಯನ್ನು ಕೆಡವಬಾರದು ಮತ್ತು ಸಂತ್ರಸ್ತರಿಗೆ ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರ್ಟ್‌ ಹೇಳಿತ್ತು. ಸುಪ್ರೀಂಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಯಾಗ್‌ರಾಜ್‌ನಲ್ಲಿ ಪಂಪ್ ಸೆಟ್ ವ್ಯಾಪಾರ ನಡೆಸುತ್ತಿರುವ ಜಾವೇದ್ ಮೊಹಮ್ಮದ್ ಅವರ ಮನೆಯನ್ನು ಜೂನ್ 12, 2022 ರಂದು ಬುಲ್ಡೋಜರ್‌ನಿಂದ ಕೆಡವಲಾಯಿತು. ಪೊಲೀಸರು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ಅವರ ವಿರುದ್ಧ ಐದು ಪ್ರಕರಣಗಳು ದಾಖಲಾಗಿವೆ ಮತ್ತು ಅಟಾಲಾ ಪ್ರದೇಶದಲ್ಲಿ ನಡೆದ ಕಲ್ಲು ತೂರಾಟದ ಘಟನೆಯಲ್ಲಿ ಅವರು ಪ್ರಮುಖ ಆರೋಪಿಯಾಗಿದ್ದಾರೆ ಎಂದು ಹೇಳಿದ್ದರು.

“ನಿರಂಕುಶ ರೀತಿಯಲ್ಲಿ ಮನೆಗಳನ್ನು ಕೆಡವಬಾರದು … ನನ್ನ ಎರಡು ಅಂತಸ್ತಿನ ಮನೆಯನ್ನು ಕೆಡವಿದಾಗ, ನನ್ನ ಹೆಂಡತಿ ಮತ್ತು ಮಗಳನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು” ಎಂದು ಮೊಹಮ್ಮದ್ ಹೇಳಿದ್ದು, ಸುಪ್ರೀಂಕೋರ್ಟ್‌ನ ತೀರ್ಪನ್ನು ಅವರು ಶ್ಲಾಘಿಸಿದ್ದಾರೆ. ಸ್ಥಳೀಯ ಆಡಳಿತವು ರಾತ್ರೋರಾತ್ರಿ ಈ ಕ್ರಮ ಕೈಗೊಂಡಿದ್ದು, ಯಾವುದೇ ಸೂಚನೆಯಿಲ್ಲದೆ ತನ್ನ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ನೋಟಿಸ್ ಕಳುಹಿಸಿದ್ದೇವೆ ಎಂದು ಹೇಳಿರುವ ಸರ್ಕಾರದ ಪ್ರತಿಪಾದನೆ ಸಂಪೂರ್ಣ ಸುಳ್ಳಾಗಿದ್ದು… ಅವರು ಯಾವುದೇ ನೋಟಿಸ್ ಕಳುಹಿಸಿಲ್ಲ” ಎಂದು ಅವರು ಹೇಳಿದ್ದಾರೆ. ಧ್ವಂಸಗೊಂಡ ನಂತರ ನನ್ನ ಕುಟುಂಬವು ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದು, ನಮಗೆ ಯಾರೂ ಸಹಾಯ ಮಾಡಲು ಮುಂದೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ

ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಜಿತ್ ಸಿಂಗ್, ಪ್ರಾಧಿಕಾರವು ಅನುಮೋದನೆ ಪಡೆಯದ ಮನೆ ಅಥವಾ ಅಂಗಡಿಗಳ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳುತ್ತದೆ. ಕೆಡವುವ ಮುನ್ನವೇ ನೋಟಿಸ್ ಜಾರಿ ಮಾಡಿ ಆ ವ್ಯಕ್ತಿಗೆ ತನ್ನ ಪರ ವಾದ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆ ನಂತರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬರೇಲಿಯಲ್ಲಿ ಜುಲೈ 22 ರಂದು ಶಾಹಿ ಪ್ರದೇಶದ ಗೌಸ್‌ಗಂಜ್ ಗ್ರಾಮದಲ್ಲಿ 16 ಜನರ ಮನೆಗಳನ್ನು ನೆಲಸಮಗೊಳಿಸಲಾಗಿತ್ತು. ಇದರಲ್ಲಿ ತಝಿಯಾ ಮೆರವಣಿಗೆಯಲ್ಲಿ ಒಬ್ಬ ವ್ಯಕ್ತಿಯನ್ನು ಕೊಂದ ಘರ್ಷಣೆಯಲ್ಲಿ ಆರೋಪಿಗಳೆಂದು ಹೆಸರಿಸಲಾದ ಮನೆಗಳು ಸೇರಿದ್ದವು. ಸುಪ್ರೀಂ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಗೌಸ್‌ಗಂಜ್‌ನ ರಾಸಿದಾನ್, ನಫೀಸಾ ಮತ್ತು ಸೈರಾ ಖಾತೂನ್ ಅವರ ಮನೆಗಳನ್ನು ನೆಲಸಮಗೊಳಿಸಲಾಗಿದ್ದು, ಪರಿಹಾರಕ್ಕಾಗಿ ನ್ಯಾಯಾಲಯವನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...