Homeಅಂಕಣಗಳುಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಬಡ್ತಿ ಮೀಸಲು ಸುಪ್ರೀಂ ತೀರ್ಪು: ಇಡೀ ದೇಶಕ್ಕೆ ಮಾದರಿ

ಹಿಂದುಳಿದ ವರ್ಗಗಳವರು ಸಹ “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ!

- Advertisement -
- Advertisement -

| ರಘೋತ್ತಮ ಹೊ.ಬ |

“ಬಿ.ಕೆ.ಪವಿತ್ರ ಮತ್ತು ಇತರರು v/s ಭಾರತ ಸರ್ಕಾರ” ಪ್ರಕರಣಕ್ಕೆ ಸಂಬಂಧಿಸಿದಂತೆ 9-2-17ರಂದು ಸುಪ್ರೀಂ ಕೋರ್ಟ್‍ನ ಪೀಠವೊಂದು ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿಗಳ ನೌಕರಿ ಬಡ್ತಿ ಮೀಸಲಾತಿ ಕಾಯಿದೆ-2002’ ಅನ್ನು ರದ್ದುಗೊಳಿಸಿ ತೀರ್ಪು ನೀಡಿದ್ದು ಎಲ್ಲರಿಗೂ ತಿಳಿದಿದೆ. ಈ ತೀರ್ಪಿನ ಸಂದರ್ಭದಲ್ಲಿ ಇದನ್ನು ರದ್ದುಗೊಳಿಸಲಿಕ್ಕೆ ನ್ಯಾಯಾಲಯ ನೀಡಿದ್ದ ಕಾರಣ ”ಸದರಿ ವರ್ಗಗಳ(ಎಸ್ಸಿ/ಎಸ್ಟಿ) ಹಿಂದುಳಿದಿರುವಿಕೆ, ಸೇವಾದಕ್ಷತೆ ಮತ್ತು ಸಮರ್ಪಕ ಪ್ರಾತಿನಿಧ್ಯದ ಕೊರತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿಲ್ಲ” ಎಂಬುದಾಗಿತ್ತು. ಈ ನಿಟ್ಟಿನಲ್ಲಿ ಈ ಸಂಬಂಧ ಸಾಕಷ್ಟು ಹೋರಾಟಗಳು ದಲಿತ ನೌಕರರು ಮತ್ತು ಇತರ ಸಂಘಗಳಿಂದ ನಡೆದು ಸರ್ಕಾರ ಕಡೆಗೆ ಅಂದಿನ ಅಪರ ಮುಖ್ಯ ಕಾರ್ಯದರ್ಶಿ ರತ್ನಪ್ರಭಾರವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಮಸೂದೆಯೊಂದನ್ನು ಸಿದ್ಧಪಡಿಸಿ, ರಾಜ್ಯಪಾಲರಿಂದ ಅದು ತಿರಸ್ಕರಿಸಲ್ಪಟ್ಟು, ರಾಷ್ಟ್ರಪತಿಗಳ ಅಂಗಳಕ್ಕೆ ಅದು ತಲುಪಿ, ಅಲ್ಲಿಂದ ಅದು ಅಂಗೀಕಾರಗೊಂಡು ಕಾನೂನಾಗಿ ಜಾರಿಯಾಯಿತು.

ದುರಂತವೆಂದರೆ ಈ ನೂತನ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲಾತಿ ವಿರೋಧಿಸುವ ‘ಅಹಿಂಸಾ’ ಸಂಘಟನೆ ಮತ್ತೆ ಸುಪ್ರೀಂ ಕೋರ್ಟಿನ ಮೊರೆ ಹೋಗಿ, ಈ ಸಂಬಂಧ ಅವರು ಸಲ್ಲಿಸಿದ ಅರ್ಜಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು.ಲಲಿತ್‍ರವರ ನೇತೃತ್ವದ ಪೀಠದಲ್ಲಿ ವಿಚಾರಣೆಗೊಂಡು ಈಗ ತೀರ್ಪನ್ನು ಕಂಡಿದೆ. ಸಂತಸದ ವಿಚಾರವೆಂದರೆ ನ್ಯಾಯಪೀಠ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಗೆ ಒಪ್ಪಿಗೆಯ ಮುದ್ರೆಯೊತ್ತಿದೆ, ಅದಕ್ಕೊಂದು ನೈತಿಕ ಅರ್ಥವನ್ನು ನೀಡಿದೆ. ಈ ನಿಟ್ಟಿನಲ್ಲಿ ಹೇಳುವುದಾದರೆ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ಈ ತೀರ್ಪು ಅಕ್ಷರಶಃ ಸ್ವಾಗತಾರ್ಹ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ಈ ತೀರ್ಪು ಮತ್ತೊಮ್ಮೆ ಎತ್ತಿಹಿಡಿದಿದೆ. ಅಲ್ಲದೆ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಭಾರತದ ಸಂವಿಧಾನವನ್ನು, ಅದರ ಮೂಲ ಅಂಶಗಳನ್ನು ನ್ಯಾಯಾಂಗ ರಕ್ಷಿಸುತ್ತದೆ ಎಂಬುದಕ್ಕೆ ಈ ತೀರ್ಪು ಮತ್ತೊಂದು ದಾಖಲೆಯಾಗಿ ಹೊರಬಂದಿದೆ.

ಯಾಕೆಂದರೆ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲೂ ಮೀಸಲಾತಿ, ಅದನ್ನು ಭಾರತದ ಸಂವಿಧಾನ ಅನುಚ್ಛೇಧ 16(4)(ಎ) ಬಹಳ ಸ್ಪಷ್ಟವಾಗಿ ದಾಖಲಿಸುತ್ತದೆ. ಆ ಭಾಗವನ್ನು ಇಲ್ಲಿ ಯಥಾವತ್ ಉಲ್ಲೇಖಿಸುವುದಾದರೆ “ಅನುಚ್ಛೇಧ 16(4)(ಎ): ಈ ಅನುಚ್ಛೇಧದಲ್ಲಿರುವುದು ಯಾವುದೂ ರಾಜ್ಯದ ಅಧೀನದಲ್ಲಿರುವ ಸೇವೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳವರು ಸಾಕಷ್ಟು ಪ್ರಾತಿನಿಧ್ಯವನ್ನು ಹೊಂದಿಲ್ಲವೆಂದು ರಾಜ್ಯವು ಅಭಿಪ್ರಾಯಪಟ್ಟಲ್ಲಿ, ರಾಜ್ಯದ ಅಧೀನದ ಸೇವೆಗಳಲ್ಲಿನ (ಯಾವುದೇ ವರ್ಗದ ಅಥವಾ ವರ್ಗಗಳ ಹುದ್ದೆಗಳಿಗೆ, ತತ್ಪರಿಣಾಮದ ಜ್ಯೇಷ್ಠತೆಯೊಂದಿಗೆ ಬಡ್ತಿ ವಿಷಯದಲ್ಲಿ) ಅಂಥವರಿಗಾಗಿ ಮೀಸಲಾತಿಯ ಯಾವುದೇ ಉಪಬಂಧವನ್ನು ಮಾಡಲು ರಾಜ್ಯಕ್ಕಿರುವ ಅಧಿಕಾರವನ್ನು ಪ್ರತಿಬಂಧಿಸತಕ್ಕದಲ್ಲ”. ಇದರ ಪ್ರಕಾರ ರಾಜ್ಯ ಸರ್ಕಾರ ರೂಪಿಸಿ ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಸದ್ಯ ಸುಪ್ರೀಂ ಅಸ್ತು ಎಂದಿರುವ ರಾಜ್ಯ ಸರ್ಕಾರದ ‘ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿ ಕಾಯಿದೆ-2018’ ಅನ್ನು ಯಾರೂ ಕೂಡ ಪ್ರತಿಬಂಧಿಸಲು ಸಾಧ್ಯವಿಲ್ಲ.
ಹಾಗೆಯೇ ಅನುಚ್ಛೇಧ 16ಕ್ಕೆ 2002ರಲ್ಲಿ ಮಾಡಲಾದ 85ನೇ ತಿದ್ದುಪಡಿ ಕೂಡ “ಸದರಿ ನೌಕರ(ಎಸ್ಸಿ/ಎಸ್ಟಿ) ಬಡ್ತಿಗೊಂಡ ನಂತರವೂ ಬಡ್ತಿಗೊಂಡ ತನ್ನ ಸ್ಥಾನದಲ್ಲಿ ತತ್ಪರಿಣಾಮ ಉಂಟಾಗಬಹುದಾದ ಜ್ಯೇಷ್ಠತೆಗೆ ಅರ್ಹನಾಗುತ್ತಾನೆ” ಎಂದು ಸ್ಪಷ್ಟವಾಗಿ ಹೇಳುತ್ತದೆ. ಒಟ್ಟಾರೆ ಸಂವಿಧಾನದ ನಿಲುವುಗಳು ಇಷ್ಟೊಂದು ಸ್ಪಷ್ಟವಾಗಿರುವಾಗ ಮತ್ತು ಸಂಸತ್ತಿನ ತದನಂತರದ ಯಾವುದೇ ತಿದ್ದುಪಡಿಗಳ ಮೂಲಕವೂ ಅದು ರದ್ದುಗೊಂಡಿಲ್ಲದಿರುವಾಗ ಎಸ್ಸಿ/ಎಸ್ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನಿರಾಕರಿಸುವುದು ಯಾರಿಗಾದರೂ ಹೇಗೆ ತಾನೆ ಸಾಧ್ಯ?

ಈ ಸಂದರ್ಭದಲ್ಲಿ ತನ್ನ ಈ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಯು.ಯು ಲಲಿತ್‍ರವರುಗಳ ನೇತೃತ್ವದ ಪೀಠ ಮೀಸಲಾತಿಗೊಂದು ಅಪರೂಪದ ವ್ಯಾಖ್ಯಾನ ನೀಡುತ್ತಾ “ಜನತೆಯು ಯಾವ(ಸಾಮಾಜಿಕ) ಮಟ್ಟದಲ್ಲಿ ಜನಿಸಿದ್ದಾರೆ ಎಂಬುದನ್ನು ಲೆಕ್ಕಕ್ಕೆ ತೆಗೆದುಕೊಂಡು ಪರಿಣಾಮಕಾರಿ ಮತ್ತು ನೈಜಸಮಾನತೆಯ ಆಶಯವನ್ನು ಪ್ರಾಮಾಣಿಕವಾಗಿ ಈಡೇರಿಸುವುದೇ ಎಸ್ಸಿ/ಎಸ್ಟಿಗಳ ಮೀಸಲಾತಿ” ಎಂದಿದೆ. ಹಾಗೆಯೇ ಅರ್ಜಿದಾರರು ಪ್ರಸ್ತಾಪಿಸಿದ್ದ ನೌಕರರ ದಕ್ಷತೆಗೆ ಸಂಬಂಧಿಸಿದಂತೆ ಹೇಳಿರುವ ನ್ಯಾಯಪೀಠ ಈ ಸಂಬಂಧದ ಸಂವಿಧಾನ ಅನುಚ್ಛೇಧ 335ನ್ನು ಪ್ರಸ್ತಾಪಿಸುತ್ತಾ ದಕ್ಷತೆ ಅಳೆಯುವ ಒಂದೇ ಮಾನದಂಡ ಇತರರಂತೆ ಎಸ್ಸಿ/ಎಸ್ಟಿಗಳು ಕೂಡ ಆ ಹುದ್ದೆಯ ಸಂಬಂಧಿತ ಪದವಿ ಮತ್ತು ಪರೀಕ್ಷೆಗಳನ್ನು ಪಾಸುಮಾಡಿರುವುದಾಗಿರುತ್ತದೆ. ಆದ್ದರಿಂದ ಅದನ್ನು(ದಕ್ಷತೆ) ಎಲ್ಲರಿಗೂ ಅನ್ವಯಿಸುವಂತಹ ಒಂದು ತಟಸ್ಥ ಮಾನದಂಡ ಎಂದು ತೆಗೆದುಕೊಳ್ಳಬೇಕೆ ಹೊರತು ಎಸ್ಸಿ/ಎಸ್ಟಿಗಳಿಗೆ ವಿಶೇಷವಾಗಿ ಅಲ್ಲ ಎಂದಿದೆ. ಹಾಗೆಯೇ ಆಡಳಿತದಲ್ಲಿ ‘ದಕ್ಷತೆ’ ಎಂಬ ಪದವನ್ನು ಪ್ರಸ್ತಾಪಿಸುವ ಸಂವಿಧಾನದ ಅದೇ ಅನುಚ್ಛೇಧ 335ರ ಮುಂದಿನ ಭಾಗಗಳನ್ನು ಪ್ರಸ್ತಾಪಿಸಿ ನ್ಯಾಯಪೀಠ, ಆ ಮುಂದಿನ ಅಂಶಗಳಾದ “1. ಎಸ್ಸಿ/ಎಸ್ಟಿಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಅಂಕದಲ್ಲಿ ರಿಯಾಯಿತಿ ನೀಡಬೇಕು. 2. ಮೌಲ್ಯಮಾಪನ ಮಟ್ಟದಲ್ಲೂ ರಿಯಾಯಿತಿ ನೀಡಬೇಕು 3. ಬಡ್ತಿಯಲ್ಲೂ ಮೀಸಲಾತಿ ನೀಡಬೇಕು” ಎಂದಿರುವುದನ್ನು ಒತ್ತಿ ಹೇಳುತ್ತಾ, ಜೊತೆಗೆ ಯಾವುದೇ ಕಾರಣಕ್ಕೂ ಅನುಚ್ಛೇಧ 335ರಲ್ಲಿ ಪ್ರಸ್ತಾಪಿಸಿರುವ ‘ದಕ್ಷತೆ’ಯ ಆ ಅಂಶ ಎಸ್ಸಿ/ಎಸ್ಟಿಗಳ ಸದರಿ ರಿಯಾಯಿತಿಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತೊಂದರೆ ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ತನ್ನ ಅಭಿಪ್ರಾಯ ದಾಖಲಿಸಿದೆ. ಆ ಮೂಲಕ ಬಡ್ತಿ ಮೀಸಲಿಗೆ ಸಹಜವಾಗಿ ಅಸ್ತು ಎಂದಿದೆ.

ಈ ಸಂದರ್ಭದಲ್ಲಿ ಸಂವಿಧಾನ ರಚನೆಯ ಸಮಯದಲ್ಲಿ ಅಂದರೆ 1948 ನವೆಂಬರ್ 30ರಂದು ಸಂವಿಧಾನ ಸಭೆಯೊಳಗೆ ಚರ್ಚೆಯಲ್ಲಿ ಪಾಲ್ಗೊಂಡು ಬಾಬಾಸಾಹೇಬ್ ಅಂಬೇಡ್ಕರರು ಹೇಳುವ ಮಾತೊಂದನ್ನು ಇಲ್ಲಿ ಉಲ್ಲೇಖಿಸಬೇಕಾಗುತ್ತದೆ. ಅದೆಂದರೆ “ಆಡಳಿತದಲ್ಲಿ ಸಮಾನತೆ ಇರಬೇಕು. ಅದೇ ಸಮಯದಲ್ಲಿ ಆಡಳಿತದಲ್ಲಿ ಇದುವರೆವಿಗೂ ಸೂಕ್ತ ಅವಕಾಶವನ್ನು ಪಡೆಯದ ಕೆಲವು ವರ್ಗಗಳಿಗೆ ಮೀಸಲಾತಿಯೂ ಇರಬೇಕು”(ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.13, ಪು.392). ಅಂದಹಾಗೆ ಅಂಬೇಡ್ಕರ್‍ರವರು ಇಲ್ಲಿ ಹೇಳಿರುವಂತೆ ಉದಾಹರಣೆಗೆ ಎಸ್ಸಿ/ಎಸ್ಟಿಗಳಿಗೆ ಬಡ್ತಿಯಲ್ಲಿ ಮೀಸಲಾತಿಯೇ ಇದ್ದಿರಲಿಲ್ಲ ಎಂದುಕೊಳ್ಳುವುದಾದರೆ ಅಂತಹ ಸಮಯದಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ನೌಕರಿಗಳೊಳಗೆ ಎಸ್ಸಿ/ಎಸ್ಟಿಗಳು ಬರುವುದು ಸಾಧ್ಯವಿತ್ತೇ? ಎಂದು ಕೇಳಬೇಕಾಗುತ್ತದೆ. ಯಾಕೆಂದರೆ ಸರ್ಕಾರಿ ನೌಕರಿ ಹೊರತುಪಡಿಸಿ ಮೀಸಲಾತಿ ಇಲ್ಲದ ಇತರೆ ಕ್ಷೇತ್ರಗಳಲ್ಲಿ ಅಂದರೆ ವ್ಯಾಪಾರ- ವ್ಯವಹಾರ, ಕೈಗಾರಿಕೆ, ಕೃಷಿ… ಇಲ್ಲೆಲ್ಲ ಎಸ್ಸಿ/ಎಸ್ಟಿಗಳ ಪಾಲು ಎಷ್ಟಿದೆ ಎಂದು ಯಾರಾದರೂ ಗಮನಿಸಿದರೆ ಖಂಡಿತ ಎಸ್ಸಿ/ಎಸ್ಟಿ ಬಡ್ತಿ ಮೀಸಲಾತಿಯ ಪ್ರಾಮುಖ್ಯತೆ ಏನು ಎಂದು ಅಂತಹವರಿಗೆ ಅರ್ಥ ಆಗಿಯೇ ಆಗುತ್ತದೆ.

ಹ್ಞಾಂ, ಈ ಸಂದರ್ಭದಲ್ಲಿ ಎಸ್ಸಿ/ಎಸ್ಟಿಗಳ ಬಡ್ತಿ ಮೀಸಲು ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿರುವವರೂ ಗಮನಿಸಬೇಕಾದ ಒಂದು ವಿಷಯವೆಂದರೆ ಅಂಥವರು ‘ಇನ್ನೊಬ್ಬರಿಗೇಕೆ ಕೊಟ್ಟಿದ್ದೀರಿ ಎನ್ನುವ ಬದಲು ನಮಗೆ ಏಕೆ ಕೊಟ್ಟಿಲ್ಲ ಎಂದು ಕೇಳುವುದು ಸೂಕ್ತವಾಗುತ್ತದೆ” ಎಂಬುದು. ಏಕೆಂದರೆ ಎಸ್ಸಿ/ಎಸ್ಟಿಗಳಂತೆ ಹಿಂದುಳಿದ ವರ್ಗಗಳಿಗೂ(ಓಬಿಸಿಗಳು) ಮಂಡಲ್ ವರದಿ ಶೇ.27ರಷ್ಟು ಉದ್ಯೋಗ ನೇಮಕಾತಿಯಲ್ಲಿ ಮೀಸಲು ನೀಡುತ್ತದೆ. ಅಂದಹಾಗೆ ಸದರಿ ವರ್ಗಗಳವರು “ನಮಗೆ ನೇಮಕದಲ್ಲಿ ಮೀಸಲು ನೀಡಿರುವಂತೆ ಬಡ್ತಿಯಲ್ಲೂ ನೀಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರೆ ಸಮಸ್ಯೆಯೇ ಇರುವುದಿಲ್ಲ! ಆದ್ದರಿಂದ ರಾಜ್ಯ ಸರ್ಕಾರದ ಎಸ್ಸಿ/ಎಸ್ಟಿ ನೌಕರರ ಬಡ್ತಿ ಮೀಸಲಾತಿಯ ನೂತನ ಕಾಯಿದೆಯ ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ಅಕ್ಷರಶಃ ಮಾದರಿಯಾದುದು. ಇಡೀ ದೇಶವೇ ಇದನ್ನು ಅನುಕರಿಸು ವಂತಹದ್ದು ಎಂದು ನಿಸ್ಸಂಶಯವಾಗಿ ಹೇಳಬಹುದು.

ಇದನ್ನೂ ಓದಿ: ಬಡ್ತಿ ಮೀಸಲಾತಿಗೆ ವಿರೋಧವಿಲ್ಲ Consequential Seniority ಯ ತಾರತಮ್ಯಕ್ಕೆ ನಮ್ಮ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...