Homeಮುಖಪುಟಪಿಯು ಪರೀಕ್ಷೆ ವೇಳೆ ಒಬ್ಬ ವಿದ್ಯಾರ್ಥಿ ಕೊರೊನಾಗೆ ಬಲಿಯಾದರೂ ನೀವೇ ಹೊಣೆ: ಆಂಧ್ರಕ್ಕೆ ಸುಪ್ರೀಂ ಎಚ್ಚರಿಕೆ

ಪಿಯು ಪರೀಕ್ಷೆ ವೇಳೆ ಒಬ್ಬ ವಿದ್ಯಾರ್ಥಿ ಕೊರೊನಾಗೆ ಬಲಿಯಾದರೂ ನೀವೇ ಹೊಣೆ: ಆಂಧ್ರಕ್ಕೆ ಸುಪ್ರೀಂ ಎಚ್ಚರಿಕೆ

"ವಿದ್ಯಾರ್ಥಿಗಳು ಕೊರೊನಾಗೆ ಬಲಿಯಾದರೆ, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕಾಗುತ್ತದೆ"

- Advertisement -
- Advertisement -

ಕೊರೊನಾ 2ನೇ ಅಲೆಯಿಂದ ಎಚ್ಚೆತ್ತಿರುವ ಹಲವು ರಾಜ್ಯ ಸರ್ಕಾರಗಳು, ಕೊರೊನಾ ನಿಯಂತ್ರಣ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿವೆ. ಆದರೆ, 12ನೇ ತರಗತಿ ಪರೀಕ್ಷೆ ನಡೆಸುತ್ತೇವೆ ಎನ್ನುತ್ತಿರುವ ಆಂಧ್ರ ಪ್ರದೇಶದ ನಿರ್ಧಾರಕ್ಕೆ ಕಿಡಿಕಾರಿರುವ ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.

“12ನೇ ತರಗತಿ ಪರೀಕ್ಷೆ ಸಂದರ್ಭದಲ್ಲಿ ಒಬ್ಬ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಬಲಿಯಾದರೂ ಸಹ ಆಂಧ್ರಪ್ರದೇಶ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು, ಅಲ್ಲದೆ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕಾಗುತ್ತದೆ” ಎಂದು ಸುಪ್ರೀಂ ಕೋರ್ಟ್​ ಆಂಧ್ರ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ಮಾಡಿದ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಎಚ್ಚರಿಕೆ ನೀಡಿವೆ.

ಕೊರೊನಾ 2ನೇ ಅಲೆ ನಡುವೆಯೇ ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕು ಭಯದ ವಾತಾವರಣ ನಿರ್ಮಾಣ ಮಾಡಿದೆ. ಈ ಸೋಂಕು ನಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಎಂಬುದು ಯಾರಿಗೂ ಸ್ಪಷ್ಟವಾಗಿಲ್ಲ. ಇಂತಹ ಸಂದರ್ಭದಲ್ಲಿ 12ನೇ ತರಗತಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಯಾವ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ? ” ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

12ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಆಂಧ್ರಪ್ರದೇಶ ಸರ್ಕಾರ ಹೈದ್ರಾಬಾದ್ ಉಚ್ಛ ನ್ಯಾಯಾಲಯಕ್ಕೆ ಮೊದಲೇ ಅಫಿಡವಿಟ್​ ಸಲ್ಲಿಸಿತ್ತು. “ಆಂತರಿಕ ಅಂಕಗಳ ಮೇಲೆ ರಾಜ್ಯ ಶಿಕ್ಷಣ ಮಂಡಳಿಗೆ ಯಾವುದೇ ನಿಯಂತ್ರಣವಿಲ್ಲ. ಇತರ ರಾಜ್ಯಗಳು ಪರ್ಯಾಯ ಮೌಲ್ಯಮಾಪನ ವ್ಯವಸ್ಥೆಯನ್ನು ಆಧಾರವಾಗಿ ತೆಗೆದುಕೊಂಡಿವೆ. ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ ಸರ್ಕಾರ 12ನೇ ತರಗತಿ ಅಂತಿಮ ಪರೀಕ್ಷೆಗಳನ್ನು ನಡೆಸಲು ಮುಂದಾಗಿದ್ದೇವೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ನಡೆಸಲಾಗುವುದು” ಎಂದು ಅಫಿಡವಿಟ್​ನಲ್ಲಿ ತಿಳಿಸಲಾಗಿತ್ತು.

ಅಫಿಡವಿಟ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ಎಷ್ಟು ಕೊಠಡಿಗಳಿವೆ. ಒಂದು ಕೊಠಡಿಗೆ 15 ರಿಂದ 18 ವಿದ್ಯಾರ್ಥಿಗಳನ್ನು ಕೂರಿಸಲಾಗುವುದು ಎಂಬ ವಿವರಗಳನ್ನು ಹೈದ್ರಾಬಾದ್ ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಿಳಿಸಲಾಗಿತ್ತು.

ರಾಜ್ಯದಲ್ಲಿಯೂ ಕೊರೊನಾ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷಗಳನ್ನು ರದ್ದು ಪಡಿಸಲಾಗಿದೆ. ಆದರೆ, ಫಲಿತಾಂಶ ಪ್ರಕಟಗೊಳಿಸಲು ಹೊರಟಿದ್ದ ಇಲಾಖೆಗೆ, ಪುನರಾವರ್ತಿತ ವಿದ್ಯಾರ್ಥಿಗಳು ನಮಗೆ ಅನ್ಯಾಯ ಆಗಿದೆ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದು ಸದ್ಯ ಫಲಿತಾಂಶ ತಡೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...