Homeಮುಖಪುಟಡಿಸೆಂಬರ್ 6 ರಿಂದ ರಾಮಮಂದಿರ ನಿರ್ಮಾಣ ಪ್ರಾರಂಭಿಸುತ್ತೇವೆ - ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

ಡಿಸೆಂಬರ್ 6 ರಿಂದ ರಾಮಮಂದಿರ ನಿರ್ಮಾಣ ಪ್ರಾರಂಭಿಸುತ್ತೇವೆ – ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

- Advertisement -
- Advertisement -

ಸುಪ್ರೀಂಕೋರ್ಟ್ ತೀರ್ಪಿನ ನಂತರ ಡಿಸೆಂಬರ್ 6 ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪ್ರಾರಂಭಿಸುತ್ತೇವೆ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ನೀಡಿದ್ದಾರೆ.

“ರಾಮ್ ದೇವಾಲಯದ ನಿರ್ಮಾಣವು ಡಿಸೆಂಬರ್ 6 ರಿಂದ ಮೊದಲು ಪ್ರಾರಂಭವಾಗಲಿದೆ. 150 ವರ್ಷಗಳಿಂದ ಬಾಕಿ ಉಳಿದಿರುವ ವಿಷಯವನ್ನು 40 ದಿನಗಳ ಕಾಲ ತಡೆರಹಿತವಾಗಿ ವಿಚಾರಣೆ ನಡೆಸಿರುವ ಕಾರಣ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಎರಡೂ ಕಡೆಯ ವಾದವಿವಾದಗಳನ್ನು ಗಂಭೀರವಾಗಿ ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದ್ದಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

“ಪುರಾತತ್ತ್ವ ಶಾಸ್ತ್ರ ಇಲಾಖೆಯು ತನ್ನ ಸತ್ಯ ಸಂಗತಿಗಳನ್ನು ಮಂಡಿಸಿದೆ. ಅಲ್ಲಿ ದೇವಾಲಯವನ್ನು ನಿರ್ಮಿಸಬೇಕು ಎಂದು ಶಿಯಾ ಮಂಡಳಿ ಲಿಖಿತವಾಗಿ ನೀಡಿದೆ. ಅದೇ ರೀತಿ, ವಿಚಾರಣೆ ಮುಗಿಯುವ ಹೊತ್ತಿಗೆ ಸುನ್ನಿ ಮಂಡಳಿಯು ದೇವಾಲಯದ ಪರವಾಗಿ ಮಾತನಾಡಲಿದೆ” ಎಂದು ಬಿಜೆಪಿ ಸಂಸದರು ಹೇಳಿದ್ದಾರೆ.

ಇನ್ನು ತೀರ್ಪು ಬಂದಿಲ್ಲವಲ್ಲ ಎಂದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು “ಶೀಘ್ರದಲ್ಲೇ ನಾವು ಸುಪ್ರೀಂ ಕೋರ್ಟ್‌ನಿಂದ ತೀರ್ಪು ಪಡೆಯುತ್ತೇವೆ ಮತ್ತು ಅದು ರಾಮಮಂದಿರದ ಪರವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ನಾವು ಡಿಸೆಂಬರ್ 6 ರಿಂದ ಇದರ ನಿರ್ಮಾಣ ಪ್ರಾರಂಭ ಮಾಡುತ್ತೇವೆ” ಎಂದು ಹೇಳಿದರು. 1992 ರ ಡಿಸೆಂಬರ್ 6 ರಂದು ಅಲ್ಲಿದ್ದ ಬಾಬರಿ ಮಸೀದಿ ರಚನೆಯನ್ನು ಕರಸೇವಕರು ಕೆಡವಿದ್ದರು.

ಪ್ರಕರಣದ ವಿಚಾರಣೆಯ ಅಂತಿಮ ದಿನದಂದು ಮುಸ್ಲಿಂ ಪಕ್ಷಗಳು ತಮ್ಮ ಮನವಿಯನ್ನು ಹಿಂತೆಗೆದುಕೊಂಡಿವೆ ಎಂಬ ವರದಿಗಳು ಬಂದವು. ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸುವುದರೊಂದಿಗೆ ಉನ್ನತ ಮಟ್ಟದ ಪ್ರಕರಣದ ವಾದಗಳು ಬುಧವಾರ ಮುಕ್ತಾಯಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...