Homeಮುಖಪುಟಜಾತಿ ಗಣತಿ ಪ್ರಕಟಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ತಡೆಯುವುದಿಲ್ಲ: ಸುಪ್ರೀಂ

ಜಾತಿ ಗಣತಿ ಪ್ರಕಟಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ತಡೆಯುವುದಿಲ್ಲ: ಸುಪ್ರೀಂ

- Advertisement -
- Advertisement -

ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ವಿಚಾರದಲ್ಲಿ ಬಿಹಾರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಮುನ್ನಡೆ ಸಾಧಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಅ.6) ಹೇಳಿದೆ.

ಜಾತಿ ಸಮೀಕ್ಷೆಯ ಹೆಚ್ಚಿನ ಡೇಟಾವನ್ನು ಪ್ರಕಟಿಸದಂತೆ ಬಿಹಾರ ಸರ್ಕಾರವನ್ನು ನಿರ್ಬಂಧಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಒಂದು ರಾಜ್ಯವು ನೀತಿ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯುವುದು ತಪ್ಪು ಎಂದು ಹೇಳಿದೆ.

ಕೆಲವು ಅಂಕಿಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಿರಸ್ಕರಿಸಿತು ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂದು ಒತ್ತಾಯಿಸಿತು.

ಜಾತಿ ವರದಿ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರವು ಜಾತಿ ಗಣತಿಯ ಮಾಹಿತಿಯನ್ನು ಪ್ರಕಟಿಸುವುದನ್ನು ತಡೆಯವುದಿಲ್ಲ. ರಾಜ್ಯ ಸರ್ಕಾರ ಅಥವಾ ಯಾವುದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅದು ತಪ್ಪಾಗುತ್ತದೆ. ಆದರೆ, ಜಾತಿ ಆಧಾರಿತ ಸಮೀಕ್ಷೆಯ ದತ್ತಾಂಶಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ತಿಳಿಸಿದೆ.

ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಸಂಬಂಧಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಜನವರಿ 2024ಕ್ಕೆ ಮುಂದಿನ ವಿಚಾರಣೆಯನ್ನು ಪಟ್ಟಿ ಮಾಡಿದೆ ಮತ್ತು ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅಂಕಿ-ಅಂಶಗಳ ಪ್ರಕಟಣೆಯಿಂದಾಗಿ ಉದ್ಭವಿಸಿರುವ ಸಮಸ್ಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಕೆಲವು ಅಂಕಿ-ಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಳ್ಳಿಹಾಕಿದೆ.

ಬಹುನಿರೀಕ್ಷಿತ ಬಿಹಾರದ ಜಾತಿ ಆಧಾರಿತ ಜನಗಣತಿಯ ಫಲಿತಾಂಶವನ್ನು ಸರ್ಕಾರ ಕಳೆದ ಸೋಮವಾರ ಪ್ರಕಟಿಸಿತ್ತು. ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಗಣತಿ ವರದಿಯಲ್ಲಿ ರಾಜ್ಯದ 13.1 ಕೋಟಿ ಜನಸಂಖ್ಯೆಯಲ್ಲಿ 36% ಅತ್ಯಂತ ಹಿಂದುಳಿದ ವರ್ಗಗಳಿಗೆ, 27.1% ಹಿಂದುಳಿದ ವರ್ಗಗಳಿಗೆ, 19.7% ಪರಿಶಿಷ್ಟ ಜಾತಿಗಳಿಗೆ ಮತ್ತು 1.7% ಪರಿಶಿಷ್ಟ ಪಂಗಡಗಳಿಗೆ ಸೇರಿದೆ ಎಂದು ಬಿಹಾರ ಸರ್ಕಾರ ಹೇಳಿದೆ. ಅಲ್ಲದೆ, ಸಾಮಾನ್ಯ ಜನಸಂಖ್ಯೆಯು 15.5% ರಷ್ಟಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಬಿಹಾರ: ಜಾತಿಗಣತಿ ವರದಿ ಸ್ವಾಗತಿಸಿದ INDIA ಒಕ್ಕೂಟ; ರಾಹುಲ್, ಜೈರಾಮ್ ರಮೇಶ್ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...