Homeಮುಖಪುಟಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

ಇಡಿ ಮುಖ್ಯಸ್ಥರ ವಿಸ್ತರಣೆಯ ಸುಪ್ರೀಂ ತೀರ್ಪು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ: ಮೊಯಿತ್ರಾ

- Advertisement -
- Advertisement -

ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ”ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯ” ಇದು ಎಂದು ಮೊಯಿತ್ರಾ ಬಣ್ಣಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ED ಯ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ನನ್ನ ವಕೀಲರು – ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ಅವರ ತಂಡಕ್ಕೆ ಧನ್ಯವಾದಗಳು. ಇದು ಪ್ರಜಾಪ್ರಭುತ್ವದ ಹಡಗಿನ ಸಣ್ಣ ವಿಜಯಗಳು” ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ”ಇಡಿ ನಿರ್ದೇಶಕರ ವಿಸ್ತರಣೆಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ನನ್ನ ಮನವಿಗೆ ಜಯ ಸಿಕ್ಕಿದೆ. ಕಾನೂನುಬಾಹಿರ ವಿಸ್ತರಣೆ ಎಂದಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು” ಎಂದಿದ್ದಾರೆ.

”ಬಿಜೆಪಿಗರೇ, ನಾವು ನಿಮ್ಮೊಂದಿಗೆ ಚುನಾವಣೆಯಲ್ಲಿ ಹೋರಾಡುತ್ತೇವೆ, ನಾವು ನಿಮ್ಮೊಂದಿಗೆ ನ್ಯಾಯಾಲಯದಲ್ಲಿ ಹೋರಾಡುತ್ತೇವೆ. ನಾವು ಹೊಲಗಳಲ್ಲಿ ಮತ್ತು ಬೀದಿಗಳಲ್ಲಿ ಹೋರಾಡುತ್ತೇವೆ, ನಾವು ಎಂದಿಗೂ ಶರಣಾಗುವುದಿಲ್ಲ” ಎಂದು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಮತ್ತು ಬಿಜೆಪಿಯು ತನ್ನ ವೈಯಕ್ತಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಬಳಸುವ ‘ಕೈಗೊಂಬೆ’ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಂಗಳವಾರ ಕೇಂದ್ರೀಯ ಸಂಸ್ಥೆಯ ಮುಖ್ಯಸ್ಥರ ಮೇಲೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಗಂಟೆಗಳ ನಂತರ ವಾಗ್ದಾಳಿ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿದ್ದ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ನವೆಂಬರ್ 2021 ಮತ್ತು ನವೆಂಬರ್ 2022ರಲ್ಲಿ ಅವರಿಗೆ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದು ಕಾನೂನುಬಾಹಿರ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ಆದಾಗ್ಯೂ, ಹೊಸ ಮುಖ್ಯಸ್ಥರನ್ನು ಹುಡುಕುವ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ ನಂತರ ಜುಲೈ 31ರವರೆಗೆ ಕುಮಾರ್ ಅವರ ಸ್ಥಾನದಲ್ಲಿ ಮುಂದುವರಿಯಲು ನ್ಯಾಯಾಲಯ ಅನುಮತಿ ನೀಡಿದೆ.

ವಿಸ್ತರಣೆಗಳು ಸುಪ್ರೀಂ ಕೋರ್ಟ್‌ನ 2021 ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಪೀಠವು ಗಮನಿಸಿದೆ. ಇದರಲ್ಲಿ ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನವೆಂಬರ್ 2021ರಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿತು.

ನವೆಂಬರ್ 17, 2021 ಮತ್ತು ನವೆಂಬರ್ 17, 2022 ರಂದು ಮಿಶ್ರಾ ಅವರಿಗೆ ನೀಡಲಾದ ವಿಸ್ತರಣೆಗಳನ್ನು ಪ್ರಶ್ನಿಸಿ ಅನೇಕ ಅರ್ಜಿಗಳು ಬಂದವು ಅವರಲ್ಲಿ ಕಾಂಗ್ರೆಸ್ ನಾಯಕ ಸುರ್ಜೆವಾಲಾ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕೂಡ ಇದ್ದಾರೆ.

”ಸುಪ್ರೀಂ ಕೋರ್ಟ್ ತೀರ್ಪಿನ ದೃಷ್ಟಿಯಿಂದ, 2021ರ ವಿಸ್ತರಣೆಯ ನಂತರ ಮಿಶ್ರಾ ಕೈಗೊಂಡ ಎಲ್ಲಾ ಕ್ರಮಗಳನ್ನು “ಕಾನೂನುಬಾಹಿರ ಮತ್ತು ಕಳಂಕಿತ” ಎಂದು ಪರಿಗಣಿಸಬಹುದು” ಎಂದು ಮಂಗಳವಾರ ಸುರ್ಜೆವಾಲಾ ಅವರು ಹೇಳಿದರು.

”ನವೆಂಬರ್ 17, 2021 ಮತ್ತು 17 ನೇ ನವೆಂಬರ್, 2022 ರಂದು ಇಡಿ ನಿರ್ದೇಶಕರಿಗೆ ಎರಡು ಕಾನೂನುಬಾಹಿರ ವಿಸ್ತರಣೆ ನೀಡಿರುವುದಕ್ಕೆ ರಾಜಕೀಯ ನಾಯಕರು ಮತ್ತು ಅಧಿಕಾರಿಗಳು ಜವಾಬ್ದಾರರಲ್ಲ. ಅವರ ವಿಸ್ತರಣೆ ಜವಾಬ್ದಾರಿಯನ್ನು ಸ್ವತಃ ಪ್ರಧಾನಿಯೇ ಹೊರಬೇಕು. ಹಾಗಾಗಿ ಪ್ರಧಾನಿ ಮೋದಿ ಅವರು ಕ್ಷಮೆ ಯಾಚಿಸಬೇಕು” ಎಂದು ಸುರ್ಜೆವಾಲಾ ಆಗ್ರಹಿಸಿದರು.

ಸುಪ್ರೀಂ ಕೋರ್ಟ್ ತೀರ್ಪನ್ನು ನ್ಯಾಯದ ಗೆಲುವು ಎಂದು ಸುರ್ಜೇವಾಲಾ ಬಣ್ಣಿಸಿದ್ದು, ”ರಾಜಕೀಯ ವಿರೋಧಿಗಳನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿ ಭಯೋತ್ಪಾದನೆಯನ್ನು ಹರಡಲು ಮೋದಿ ಸರ್ಕಾರವು ರಾಜಕೀಯ ಸೇಡಿಗಾಗಿ ಇಡಿ ಯ ದುರುಪಯೋಗ ಮಾಡಿಕೊಂಡಿದೆ” ಎಂದು ಅವರು ಹೇಳಿದರು.

ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಸಂತೋಷವಾಗಿರುವವರು ವಿವಿಧ ಕಾರಣಗಳಿಗಾಗಿ ಭ್ರಮೆಯಲ್ಲಿದ್ದಾರೆ ಎಂದು ಹೇಳಿದ್ದಾರೆ. ”ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ತಂದ ತಿದ್ದುಪಡಿಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...