Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ ಹಾಕಲಾಗಿದ್ದ KOCCA ಕಾಯ್ದೆಯನ್ನು ಕಳೆದ ಏಪ್ರಿಲ್ 23 ರಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 23 ರ ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಗೌರಿ ಲಂಕೇಶ್ ಹಂತಕರ ವಿರುದ್ಧ ಸಲ್ಲಿಸಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ 2000 (KOCCA Act, 2000) ಅಡಿಯಲ್ಲಿನ ಆರೋಪಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಹತ್ಯೆಯನ್ನು ಸಾಮಾನ್ಯ ಕೊಲೆಯಂತೆ ವಿಚಾರಣೆ ನಡೆಸಲು ಮುಂದಾಗಿತ್ತು. ಗೌರಿ ಲಂಕೇಶ್ ಕೊಲೆ ಆರೋಪಿಯಾಗಿರುವ ಮೋಹನ್ ನಾಯಕ್ ಮೇಲೆ ಹಾಕಲಾಗಿದ್ದ KOCCA ಕಾಯಿದೆಯನ್ನು ಕಳೆದ ಏಪ್ರಿಲ್ 23 ರಂದು ರದ್ದು ಮಾಡಿತ್ತು. ಇದರಿಂದಾಗಿ ಆತನಿಗೂ ಹಾಗೂ ಸಹ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವ ಸಂಭವ ಉಂಟಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೆಲ್ಮನವಿ ಸಲ್ಲಿಸಬೇಕೆಂದು ಗೌರಿ ಲಂಕೆಶ್ ಅವರ ಸಹೋದರಿ, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಅವರು ಕರ್ನಾಟಕ ಗೃಹ ಸಚಿವ ಎಸ್‌.ಆರ್‌.ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು. ಸಚಿವರು ಕವಿತಾ ಲಂಕೆಶ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಕಾನೂನು ಪ್ರಕ್ರಿಯೆ ವಿಳಂಬವಾಗುತ್ತಲೇ ಸಾಗಿತ್ತು.

ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು.


ಇದನ್ನೂ ಓದಿ : ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...

ಗೆಳತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹ: 18ವರ್ಷದ ಪದವಿಪೂರ್ವ ವಿದ್ಯಾರ್ಥಿ ಆತ್ಮಹತ್ಯೆ

ತನ್ನ ಗೆಳತಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾದ ಕಾರಣ ನವೆಂಬರ್ 29, ಶನಿವಾರ ಹೈದರಾಬಾದ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸುರರಾಮ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 18 ವರ್ಷದ ಅಭಿಲಾಷ್ ಎಂದು...

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ...

ತೆಲಂಗಾಣದಲ್ಲಿ ಭೀಕರ ಅಗ್ನಿ ಅವಘಡ, ಕೊಂಡಗಟ್ಟು ಪ್ರದೇಶದಲ್ಲಿ 20ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕೊಂಡಗಟ್ಟು ಪ್ರದೇಶದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕೊಂಡಗಟ್ಟು ಬೆಟ್ಟಗಳ ತಪ್ಪಲಿನಲ್ಲಿರುವ ಅಂಗಡಿಗಳ ಸಾಲಿಗೆ ಬೆಂಕಿ ವ್ಯಾಪಿಸಿದ್ದು, ತೀವ್ರ...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ 'ಶೌರ್ಯ ದಿನ' ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಡಿಸೆಂಬರ್ 6ರಂದು ರಾಜ್ಯದ...