Homeಮುಖಪುಟಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ದವೇ ಎಫ್‌ಐಆರ್ ದಾಖಲು

- Advertisement -
- Advertisement -

ಪ್ರಜ್ವಲ್ ರೇವಣ್ಣ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಯುವಕನ ವಿರುದ್ಧವೇ ಹಾಸನ ಜಿಲ್ಲೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಸೂರಜ್ ಬ್ರಿಗೇಡ್‌ನ ಖಜಾಂಜಿ ಶಿವಕುಮಾರ್ ಹೆಚ್‌.ಎಲ್‌ ಎಂಬವರು ದೂರು ನೀಡಿದ್ದು “ಯುವಕ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ನೀಡದಿದ್ದರೆ ಸೂರಜ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡುವುದಾಗಿ ಬೆದರಿಕೆ ಹಾಕಿದ್ದ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ, ಆತ ನನಗೆ ಪರಿಚಯವಾಗಿದ್ದ. ನಾನು ಸೂರಜ್ ಬ್ರಿಗೇಡ್ ಖಜಾಂಚಿ ಆಗಿರುವುದರಿಂದ ಸೂರಜ್ ಅವರನ್ನು ಭೇಟಿ ಮಾಡಿಸುವಂತೆ ಕೇಳಿದ್ದ. ಅದರಂತೆ ಜೂನ್ 16ರಂದು ಅವರು ಚನ್ನರಾಯಪಟ್ಟಣ ತಾಲೂಕಿನ ಗನ್ನಕಡದ ತೋಟದ ಮನೆಯಲ್ಲಿ ಸಿಗುತ್ತಾರೆ ಎಂದು ತಿಳಿಸಿದ್ದೆ” ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅಂದು ಸೂರಜ್ ಅವರನ್ನು ಭೇಟಿ ಮಾಡಿದ್ದೆ. ಕೆಲಸ ಕೊಡಿಸಿ ಎಂದು ಕೇಳಿದ್ದೆ. ಅವರು ಈಗ ಸಾಧ್ಯವಿಲ್ಲ ಮುಂದೆ ನೋಡೋಣ ಎಂದಿದ್ದಾರೆ ಎಂದು ಆ ವ್ಯಕ್ತಿ ತಿಳಿಸಿದ್ದ. ಈಗ ನೀನೂ ಸಹಾಯ ಮಾಡಿದ್ದರೆ, ಸೂರಜ್ ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮಾಡುವುದಾಗಿ ಬೆದರಿಕೆ ಹಾಕಿದ್ದ” ಎಂದು ಶಿವಕುಮಾರ್ ದೂರಿನಲ್ಲಿ ವಿವರಿಸಿದ್ದಾರೆ.

“ಈ ವಿಚಾರವನ್ನು ನಾನು ಸೂರಜ್ ಅವರಿಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಯ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು? ಎಂದು ಸೂರಜ್‌ ರೇವಣ್ಣ ಕೇಳಿದ್ದರು”

“ಜೂನ್‌ 18ರಂದು ಹಾಸನದ ಜಿಲ್ಲಾಸ್ಪತ್ರೆಗೆ ತೆರಳಿ ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದಿದ್ದ”.

“ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಸುದ್ದಿಗೋಷ್ಠಿ ಮಾಡುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಮೇಲೂ ಲೈಂಗಿಕ ದೌರ್ಜನ್ಯ ಆರೋಪ: ಯುವಕನಿಂದ ದೂರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...