Homeಮುಖಪುಟಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

ಸೂರತ್ ಬೆಂಕಿ ಅವಘಡ: ಎರಡು ದಿನದಲ್ಲಿ ಗುಜರಾತಿನ 9385 ಅನ್‍ಸೇಫ್ ಕಟ್ಟಡಗಳ ಪತ್ತೆ

9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

- Advertisement -
- Advertisement -

ಗುಜರಾತ್‍ನ ಸೂರತ್‍ನ ಕೋಚಿಂಗ್ ಸೆಂಟರ್‍ನಲ್ಲಿ ಬೆಂಕಿ ಅವಘಡದಿಂದಾಗಿ 23 ಜನ ಮುಗ್ಧ ವಿದ್ಯಾರ್ಥಿಗಳು ಮೃತಪಟ್ಟ ದುರ್ಘಟನೆಗೆ ಇಡೀ ಭಾರತವೇ ಮರುಗಿದೆ. ಬಹಳಷ್ಟು ಜನರು ಮುಗ್ಧ ಮಕ್ಕಳ ಸಾವಿಗೆ ಕಂಬನಿ ಮಿಡಿದಿದ್ದಾರೆ. ಈ ಘಟನೆ ಮಾಸುವ ಮುನ್ನವೇ, ಎರಡು ದಿನದಲ್ಲಿ ಗುಜರಾತಿನಲ್ಲಿ ಇದೇ ಸ್ಥಿತಿಯಲ್ಲಿರುವ 9395 ಅನ್‍ಸೇಫ್ ಕಟ್ಟಡಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಸೂರತ್ ಅವಘಡ ನಡೆದ ನಂತರ ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳು, ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಕಟ್ಟಡಗಳ ತನಿಖೆಗೆ ಆದೇಶಿಸಿದ ಎರಡೇ ದಿನದಲ್ಲಿ 9395 ಕಟ್ಟಡಗಳು ಸಿಕ್ಕಿಬಿದ್ದಿವೆ. ಇವುಗಳಲ್ಲಿ ಶಾಲೆಗಳು, ಕೋಚಿಂಗ್ ಸೆಂಟರ್‍ಗಳು, ಮಾಲ್‍ಗಳು, ಹೋಟೆಲ್‍ಗಳು ಸೇರಿದ್ದು ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲ್ಲ ಎಂದು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಗುಜರಾತ್‍ನ ಮುಖ್ಯ ಕಾರ್ಯದರ್ಶಿಗಳಾದ ಜಗದೀಪ್ ನಾರಾಯಣ್ ಸಿಂಗ್ ರವರ ಆದೇಶದ ಮೇರೆಗೆ 9962 ಕಟ್ಟಡಗಳ ಪರೀಶೀಲನೆ ನಡೆಸಲಾಗಿದ್ದು ಅವುಗಳಲ್ಲಿ ಕೇವಲ 567 ಕಟ್ಟಡಗಳು ಮಾತ್ರ ಅಗ್ನಿ ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದು ಉಳಿದ 9395 ಕಟ್ಟಡಗಳು ಅನ್‍ಸೇಫ್ ಎಂದು ಪರಿಗಣಿಸಲ್ಪಟ್ಟಿವೆ.

ಒಟ್ಟು 2055 ಅಧಿಕಾರಿಗಳು 713 ತಂಡಗಳಾಗಿ ತಪಾಸಣಾ ಕೆಲಸ ಮಾಡಿದ್ದು ಗುಜರಾತ್‍ನ ತುಂಬೆಲ್ಲಾ ಓಡಾಡಿದ್ದು 162 ನಗರಸಭೆ/ಪಾಲಿಕೆಗಳನ್ನು ತಪಾಸಣೆ ನಡೆಸಿದೆ. ಲೋಪವೆಸಗಿರುವ ಕಟ್ಟಡಗಳ ಮಾಲೀಕರಿಗೆ ಶೋಕಾಸ್ ನೋಟಿಸ್ ನೀಡಿದ್ದು ಮೂರು ದಿನದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಕಟ್ಟಡಗಳನ್ನು ಮುಚ್ಚಬೇಕಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿಗಳು ಎಚ್ಚರಿಕೆ ನೀಡಿದ್ದಾರೆ.

ಗುಜರಾತ್ ಮಾದರಿ ಎಂದು ದೇಶದಲ್ಲೆಡೆ ಹಲವು ಫೇಕ್ ಫೋಟೊಗಳನ್ನು ಪೋಸ್ಟ್ ಮಾಡುವ ಮೂಲಕ ಬಿಜೆಪಿ ದೇಶಾದ್ಯಂತ ಪ್ರಚಾರ ನಡೆಸಿತ್ತು. ಗುಜರಾತ್ ವೇಗವಾಗಿ ಅಭಿವೃದ್ದಿ ಹೊಂದಿರುವ ರಾಜ್ಯವೆಂದು, ಇದೇ ಮಾದರಿಯಲ್ಲಿ ದೇಶದ ಅಭಿವೃದ್ದಿ ಮಾಡಿವುದಾಗಿ ಘೋಷಿಸಿ, ನರೇಂದ್ರ ಮೋದಿಯವರು 2014ರಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದರು.

ಈಗ ನೋಡಿದರೆ ಕನಿಷ್ಟ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ 9000 ಕ್ಕೂ ಹೆಚ್ಚು ಕಟ್ಟಡಗಳಿರುವುದು ಯಾವ ಥರದ ಅಭಿವೃದ್ದಿ ಎಂಬ ಪ್ರಶ್ನೆ ಎದ್ದಿದೆ.

ಗುಜರಾತ್ ಮಾಡೆಲ್ ಅಂತೆ!!
ಸೂರತ್ ನಗರದ ಬೆಂಕಿ ಅನಾಹುತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ನೆಹರು ಸ್ಥಾಪಿತ ಅಖಿಲ ಭಾರತ ವೈದ್ಯಕೀಯ ಮಹಾವಿಜ್ಞಾನ ಸಂಸ್ಥೆಗೆ ತೆಗೆದುಕೊಂಡು ಹೋಗಲು ಮೋದಿ ಆದೇಶಿಸಿದ್ದಾರೆ. 15 ವರುಷ ಗುಜರಾತ್ ಆಡಳಿತ ನಡೆಸಿ ಫಕೀರರು ಅಲ್ಲಿ ಒಂದು ಒಳ್ಳೆಯ ಆಸ್ಪತ್ರೆ ಸ್ಥಾಪಿಸಲು ಆಗಲಿಲ್ಲವೇ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಸೂರತ್ ನಂತಹ ದೊಡ್ಡ ವ್ಯವಹಾರಿಕ ನಗರದಲ್ಲಿ ಬೆಂಕಿ ನಂದಿಸಲು ಹೋದ ಅಗ್ನಿಶಾಮಕ ವಾಹನದಲ್ಲಿ ಮಕ್ಕಳನ್ನು ಉಳಿಸಲು 22 ಅಡಿಯ ಎಣಿಯು ಇರಲಿಲ್ಲ ಅಂದರೆ ಅದೆಂಥ ಡಬ್ಬಾ ಗುಜರಿ ಗಾಡಿಗಳು? ಗುಜರಾತ್ ಮಾಡೆಲ್ ಅನ್ನುತ್ತಾ ಸುಳ್ಳುಗಳ ಸರಮಾಲೆಗಳ ಅಡಿಯಲ್ಲಿ ಗೆದ್ದು ಜನರಿಗೆ ಮಂಕುಬೂದಿ ಎರಚಿದ ಪ್ರಧಾನಿ ಇವರಲ್ಲವೇ ಎಂದು ಸಹ ಕಿಡಿ ಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...