Homeಕರ್ನಾಟಕಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ಸುರತ್ಕಲ್‌‌ ಟೋಲ್‌ ಪ್ಲಾಜಾ ಹೆಜಮಾಡಿಗೆ ಶಿಫ್ಟ್‌‌!

- Advertisement -
- Advertisement -

ಜನರ ಭಾರಿ ವಿರೋಧ ಮತ್ತು ಹೋರಾಟದ ನಡುವೆಯು ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಸುರತ್ಕಲ್ ಟೋಲ್ ಪ್ಲಾಜಾವನ್ನು ಹೆಜಮಾಡಿ ಟೋಲ್ ಗೇಟ್‌‌‌ಗೆ ವಿಲೀನ ಮಾಡಿದ್ದು, ಅಲ್ಲಿ ಸಂಗ್ರಹಿಸುವ ಟೋಲ್‌ ದರಗಳನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಗುರುವಾರ ಪ್ರಕಟಿಸಿದೆ. ಅದರಂತೆ, ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ವಾಹನಗಳು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುರತ್ಕಲ್ ಪ್ಲಾಜಾದ ಟೋಲ್‌ ಅನ್ನು ಒಟ್ಟು ಸೇರಿಸಿ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ನಿರ್ಧಾರದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀನ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅತ್ಯಂತ ಜನ ವಿರೋಧಿ ಸರಕಾರ ಮಾತ್ರ ಹೀಗೆ ಮಾಡಲು ಸಾಧ್ಯ. ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸಂಗ್ರಹಿಸಲು (ಸುಲಿಗೆ ನಡೆಸಲು) ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈಗ ಹೆಜಮಾಡಿಯಲ್ಲಿ ಕಾರಿನ ಟೋಲ್ ದರ ಒಂದು ಬದಿಗೆ 40 ರುಪಾಯಿ ಇದ್ದದ್ದು 100 ರೂಪಾಯಿ ಆಗುತ್ತದೆ. ಇದು ಅತ್ಯಂತ ಕೆಟ್ಟ, ಜನ ವಿರೋಧಿ ನಿರ್ಧಾರ. ತುಳುನಾಡಿನ ಜನತೆಗೆ ಎಸಗಿದ ಮಹಾ ಮೋಸ. ಏಳು ವರ್ಷಗಳ ಕಾಲ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸಂಗ್ರಹಿಸಿದ ನೂರಾರು ಕೋಟಿ ರೂಪಾಯಿಗೆ ಬೆಲೆಯೇ ಇಲ್ಲ” ಎಂದು ಅವರು ಹೇಳಿದ್ದಾರೆ.

“ಜನರ ಭಾವನೆ, ಕಷ್ಟ ಸುಖಗಳ ಅರಿವಿಲ್ಲದ ಸಂಸದ, ಶಾಸಕರುಗಳು ಮಾತ್ರ ಹೀಗೆ ನಡೆದುಕೊಳ್ಳಲು ಸಾಧ್ಯ. ಮತ ಹಾಕುವ ಇಲ್ಲಿನ ಜನರಿಗಿಂತ ನವಯುಗ್ ಟೋಲ್ ಕಂಪೆನಿಯ ಹಿತ ಮಾತ್ರ ಇವರಿಗೆ ಮುಖ್ಯವಾಯಿತು. ಜನತೆ ಇದನ್ನು ಒಪ್ಪಬಾರದು. ಅವಿಭಜಿತ ಜಿಲ್ಲೆಯ ಜನ ಒಂದೇ ಧ್ವನಿಯಾಗಿ ಈ ಅತ್ಯಂತ ಕೆಟ್ಟ ನಿರ್ಧಾರವನ್ನು ದೃಢವಾಗಿ ವಿರೋಧಿಸಬೇಕು. ಬಿಜೆಪಿ ಸಂಸದ, ಶಾಸಕರುಗಳಿಗೆ ಆಡಳಿತ ನಡೆಸುವ ಯಾವುದೇ ಅನುಭವ ಇಲ್ಲ ಎಂಬುದು ಈಗ ಅನುಮಾನಕ್ಕೆ ಎಡೆಯಿಲ್ಲದಂತೆ ಸಾಬೀತಾಯ್ತು‌” ಎಂದು ಮುನೀರ್‌ ಕಾಟಿಪಳ್ಳ ಹೇಳಿದ್ದಾರೆ.

ಇದೇ ವೇಳೆ ಸುರತ್ಕಲ್‌ ಟೋಲ್ ವಿರೋಧಿ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ರವಾರ 29 ನೇ ದಿನಕ್ಕೆ ಕಾಲಿಟ್ಟಿದೆ. ಸುರತ್ಕಲ್‌ನಲ್ಲಿ ಟೋಲ್‌ ಸಂಗ್ರಹ ನಿಲ್ಲುವವರೆಗೂ ಮುಂದುವರಿಯಲಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಇದನ್ನೂ ಓದಿ: ‘ಸುರತ್ಕಲ್‌ ಟೋಲ್‌ ರದ್ದು’ | ಮಾಹಿತಿ ನೀಡಿದ ಸಂಸದ ನಳಿನ್ ಕುಮಾರ್‌; ಹಣ ಸಂಗ್ರಹ ನಿಲ್ಲುವವರೆಗೂ ಪ್ರತಿಭಟನೆ ಎಂದ ಹೋರಾಟ ಸಮಿತಿ

ಕಾರು, ಜೀಪ್, ವ್ಯಾನ್ ಇತ್ಯಾದಿ ಲಘು ಮೋಟಾರು ವಾಹನಗಳಿಗೆ (ಎಲ್‌ಎಂವಿ) ಸುರತ್ಕಲ್ ಪ್ಲಾಜಾದಲ್ಲಿ ಸಿಂಗಲ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 60 ರೂ. ಮತ್ತು ಹೆಜಮಾಡಿ ಪ್ಲಾಜಾದಲ್ಲಿ 40 ರೂ. ಇದೆ. ಇದೀಗ ಸುರತ್ಕಲ್ ಗೇಟ್ ವಿಲೀನದ ನಂತರ, ಹೆಜಮಾಡಿಯಲ್ಲಿ ಎಲ್‌ಎಂವಿಗೆ ಟೋಲ್ 100 ರೂ. ಗೆ ಏರಿಕೆಯಾಗಿದೆ.

ಸುರತ್ಕಲ್‌ನಲ್ಲಿ ಎಲ್‌ಎಂವಿ ರಿಟರ್ನ್ ಟ್ರಿಪ್‌ಗೆ ಪ್ರಸ್ತುತ ಶುಲ್ಕ 90 ರೂ. ಮತ್ತು ಹೆಜಮಾಡಿಯಲ್ಲಿ 65 ರೂ. ಇತ್ತು. ಇದೀಗ ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ LMV ಗೆ ರಿಟರ್ನ್ ಟ್ರಿಪ್ ಶುಲ್ಕ 155 ರೂ.ಗೆ ಏರಿಕೆ ಮಾಡಲಾಗಿದೆ.

ಸುರತ್ಕಲ್ ಪ್ಲಾಜಾದಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ ಪ್ರಸ್ತುತ ಶುಲ್ಕ 2,050 ರೂ ಇದ್ದು, ಹೆಜಮಾಡಿಯಲ್ಲಿ 1,410 ರೂ. ಇತ್ತು. ಟೋಲ್‌ ವಿಲೀನದ ನಂತರ ಹೆಜಮಾಡಿಯಲ್ಲಿ ಎಲ್‌ಎಂವಿ ವಾಹನಗಳಿಗೆ 50 ಸಿಂಗಲ್ ಟ್ರಿಪ್‌ಗಳಿಗೆ ಮಾನ್ಯವಾಗಿರುವ ಮಾಸಿಕ ಪಾಸ್‌ಗೆ 3,460 ರೂ. ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಸುರತ್ಕಲ್‌ ಟೋಲ್‌ ವಿರೋಧಿ ಹೋರಾಟಗಾರರಿಗೆ ತಡರಾತ್ರಿ ನೋಟಿಸ್‌: ‘ಜೈಲು ಸೇರಿದರೂ ಪ್ರತಿಭಟನೆ ನಿಲ್ಲಲ್ಲ’- ಮುನೀರ್‌ ಎಚ್ಚರಿಕೆ

ಅದೇ ರೀತಿ, ಬಸ್ಸುಗಳು, ಟ್ರಕ್ಗಳು ​​ಮತ್ತು ಇತರ ಭಾರೀ ವಾಹನಗಳು ಕೂಡ ವಿಲೀನದ ನಂತರ ಹೆಜಮಾಡಿಯಲ್ಲಿ ಸುರತ್ಕಲ್ ಪ್ಲಾಜಾದ ಟೋಲ್ ಅನ್ನು ಪಾವತಿಸಬೇಕಾಗುತ್ತದೆ. ಸುರತ್ಕಲ್ ಮತ್ತು ಹೆಜಮಾಡಿಯಲ್ಲಿ ಕ್ರಮವಾಗಿ 50 ಸಿಂಗಲ್ ಟ್ರಿಪ್‌ಗಳಿಗೆ ಮಾಸಿಕ ಪಾಸ್‌ಗೆ 6,940 ರೂ. ಮತ್ತು 4,765 ರೂ. ಪಾವತಿಸುತ್ತಿರುವ ಬಸ್‌ಗಳು ವಿಲೀನದ ನಂತರ ಹೆಜಮಾಡಿಯಲ್ಲಿ 11,705 ರೂ. ಪಾವತಿಸಬೇಕಾಗುತ್ತದೆ.

ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2010 ಮತ್ತು ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆಯ ನಿರ್ಣಯ) ತಿದ್ದುಪಡಿ ನಿಯಮಗಳು-2014 ರ ಪ್ರಕಾರ ಟೋಲ್ ಮಾಡಬಹುದಾದ ಉದ್ದದ ಲೆಕ್ಕಾಚಾರವನ್ನು ಮಾಡಲಾಗಿದೆ ಎಂದು ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಎಚ್‌.ಎಸ್. ಲಿಂಗೇಗೌಡ ಅವರು ಉಡುಪಿ ಜಿಲ್ಲಾಧಿಕಾರಿಗೆ ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಕರ್ನಾಟಕ ಸರ್ಕಾರದ ನಿರಂತರ ಕೋರಿಕೆ, ಸ್ಥಳೀಯ ಸಾರ್ವಜನಿಕ ಹಾಗೂ ವಿಐಪಿ ಉಲ್ಲೇಖಗಳ ಆಧಾರದ ಮೇಲೆ, ಸುರತ್ಕಲ್ ಟೋಲ್ ಪ್ಲಾಜಾವನ್ನು ಪಕ್ಕದ ಹೆಜಮಾಡಿ ಟೋಲ್ ಪ್ಲಾಜಾದೊಂದಿಗೆ ವಿಲೀನಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದೆ. ಅದರಂತೆ, ಸುರತ್ಕಲ್ ಟೋಲ್ ಪ್ಲಾಜಾಗೆ ಬಳಕೆದಾರರ ಶುಲ್ಕವನ್ನು ಈಗ ಹೆಜಮಾಡಿಯಲ್ಲಿ ವಿಧಿಸಲಾಗುತ್ತದೆ. ಟೋಲ್ ಪ್ಲಾಜಾ ಎರಡೂ ಸ್ಟ್ರೆಚ್‌ಗಳಿಗೆ ಟೋಲ್ ಶುಲ್ಕವನ್ನು ಸೇರಿಸುತ್ತದೆ” ಎಂದು ಲಿಂಗೇಗೌಡ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಸುರತ್ಕಲ್ ಟೋಲ್ ಗೇಟ್ ವಿಲೀನದ ನಂತರ ಹೆಜಮಾಡಿಯಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ರಕ್ಷಣೆ ಸೇರಿದಂತೆ ಅಗತ್ಯ ಬೆಂಬಲವನ್ನು ನೀಡುವಂತೆ NHAI ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಡಳಿತಾರೂಢ ಮನುವಾದಿಗಳಿಗೆ, ಜನಸಾಮಾನ್ಯರ ಹಿತಾಸಕ್ತಿಗಿಂತಲೂ, ಕಾರ್ಪೊರೇಟ್ ಕುಳಗಳ ಹಿತಾಸಕ್ತಿಯೇ ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...