Homeಮುಖಪುಟತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುರೇಶ್ ಗೌಡ : ಸಂಸದ ಜಿ.ಎಸ್.ಬಸವರಾಜುಗೆ ತೀವ್ರ ಹಿನ್ನಡೆ

- Advertisement -
- Advertisement -

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆ ಮಾಜಿ ಶಾಸಕ ಬಿ. ಸುರೇಶ್ ಗೌಡ ಅವರಿಗೆ ದಕ್ಕಿದೆ. ರಾಜ್ಯಾಧ್ಯಕ್ಷರರಾದ ನಳೀನ್ ಕುಮಾರ್ ಕಟೀಲ್‌ರವರು ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಅಧ್ಯಕ್ಷ ಹುದ್ದೆ ನೀಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಹೆಬ್ಬಾಕ ರವಿಗೆ ಜಿಲ್ಲಾ ಬಿಜೆಪಿ ಹುದ್ದೆ ಕೈತಪ್ಪಿದ್ದು ಸಂಸದ ಜಿ.ಎಸ್. ಬಸವರಾಜು ಮತ್ತು ಬೆಂಬಲಿಗರಿಗೆ ತೀವ್ರ ಹಿನ್ನಡೆಯಾಡಿದೆ.

ಅವಿಭಜಿತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೆನೆಟ್ ಮತ್ತು ಸಿಂಡಿಕೇಟ್ ಕೆಲಸ ನಿರ್ವಹಿಸಿದ್ದ ಬಿ.ಸುರೇಶ್ ಜೀವರಾಜ್ ಆಳ್ವ ಮೂಲಕ ಬಿಜೆಪಿಗೆ ಬಂದವರು. ಸೆನೆಟ್  ಹಾಗೂ ಸಿಂಡಿಕೇಟ್‌ ಸದಸ್ಯರಾಗಿದ್ದ ವೇಳೆ ಸುರೇಶ್ ಮೇಲೆ ಅಂಕಪಟ್ಟಿ ಹಗರಣದ ಆಪಾದನೆ ಇತ್ತು. ರಾಜಕೀಯ ಪ್ರವೇಶದ ನಂತರ ಆ ಆರೋಪಗಳು ಹಿನ್ನೆಲೆಗೆ ಸರಿದವು.

ಬಿಜೆಪಿ ಸೇರ್ಪಡೆಯಾದ ಮೇಲೆ ಬಿ.ಸುರೇಶ್ ಜೊತೆ ಗೌಡ ಹೆಸರು ಸೇರಿಕೊಂಡಿತು. ಬೆಂಗಳೂರಿನಿಂದ ನೇರ ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದರು. ದೇವಾಲಯಗಳ ನಿರ್ಮಾಣಕ್ಕೆ ಹಣ ಸುರಿದರು. ಎಲ್ಲಾ ಹಳ್ಳಿ- ಗ್ರಾಮಗಳಿಗೆ ತೆರಳಿ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದರು. ಜನರು ಕೂಡ ಸುರೇಶ್ ಗೌಡ ಹಣ ಸುರಿಯುತ್ತಿರುವುದನ್ನು ನೋಡಿ ತಮ್ಮತಮ್ಮ ಊರುಗಳಿಗೆ ಕರೆಸಿಕೊಂಡರು.

ಹಣ ಎಲ್ಲಿಂದ ಬಂತು?  ಹೇಗೆ ಸಂಪಾದನೆ ಮಾಡಿದರು? ಎಂದು ಯಾರೂ ಪ್ರಶ್ನಿಸಲಿಲ್ಲ. ಕುಣಿಗಲ್ ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬರುವ ಬಹುತೇಕ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿದರು. ಮುಂದಿನ ಚುನಾವಣೆಗೆ ವೇದಿಕೆ ಸಿದ್ದಮಾಡಿಕೊಂಡರು. ಹಣ ಇರುವಲ್ಲಿ ಜನ ಎಂಬಂತಹ ಪರಿಸ್ಥಿತಿ ನಿರ್ಮಾಣವಾಯಿತು. ಸುರೇಶ್ ಗೌಡ ಅಂದರೆ ಕೊಡುಗೈ ದಾನಿ ಎಂಬಷ್ಟರ ಮಟ್ಟಿಗೆ ಹೆಸರಾದರು.

2003ರಲ್ಲಿ ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಸೋಲು ಕಂಡ ಸುರೇಶ್ ಗೌಡ ಮತ್ತೆ ದೇವಾಲಯಗಳಿಗೆ ಹಣ ನೀಡುವುದನ್ನು ಮುಂದುವರಿಸಿದರು. ಕ್ಷೇತ್ರಾದ್ಯಂತ ಸುತ್ತಿದರು. ಪ್ರಚಾರವನ್ನು ಮುಂದುವರಿಸಿದರು; ಅಷ್ಟುಹೊತ್ತಿಗೆ ಕ್ಷೇತ್ರ ಪುನರ್ ವಿಂಗಡಣೆಯಾಗಿ ತುಮಕೂರು ಗ್ರಾಮಾಂತರ ಕ್ಷೇತ್ರ ಹೊಸದಾಗಿ ಅಸ್ತಿತ್ವಕ್ಕೆ ಬಂತು. ಇದು ಸುರೇಶ್ ಗೌಡರ ಗೆಲುವಿಗೆ ಕಾರಣವಾಯಿತು.

2008ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಸುರೇಶ್‌ಗೌಡ ಗೆದ್ದರು. ತುಮಕೂರು ನಗರದಿಂದ ಸೊಗಡು ಶಿವಣ್ಣ ಅಯ್ಕೆಯಾದರು. ತಿಪಟೂರಿನ ಬಿ.ಸಿ.ನಾಗೇಶ್ ಸೋತರು.. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸುರೇಶ್‌ಗೌಡ ಅವರದ್ದೇ ಸದ್ದು. 2013ರ ಚುನಾವಣೆಯಲ್ಲೂ ಸುರೇಶ್ ಗೌಡ ಗೆದ್ದು ಬಂದರು. ರಸ್ತೆಗಳ ಅಭಿವೃದ್ಧಿ ಮಾಡಿದರು. ಜಿದ್ದಿನ ರಾಜಕಾರಣಕ್ಕೂ ನಾಂದಿ ಹಾಡಿದರು.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೌರಿಶಂಕರ್ ವಿರುದ್ದ ಸುರೇಶ್‌ಗೌಡ ಸೋಲು ಅನುಭವಿಸಿದರು. 2008ರಿಂದಲೇ ಆರಂಭವಾದ ಜಿದ್ದಾಜಿದ್ದಿನ ರಾಜಕಾರಣದಲ್ಲಿ ಸುರೇಶ್ ಗೌಡ ಮತ್ತು ಬಿ.ಸಿ.ಗೌರಿಶಂಕರ್ ನಡುವೆ ತೀವ್ರ ಪೈಪೋಟಿ ಶುರವಾಗಿದ್ದು ಇಂದಿಗೂ ನಿಂತಿಲ್ಲ. ಜೆಡಿಎಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಆರೋಪ-ಪ್ರತ್ಯಾರೋಪಗಳು ಮಾತ್ರ ನಿಂತಿಲ್ಲ.

ಇಂಥ ಹೊತ್ತಿನಲ್ಲಿ ಜಿಲ್ಲಾ ಬಿಜೆಪಿಗೆ ಸುರೇಶ್ ಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ದುಸ್ಸಾಹಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ತೀರ್ಮಾನ ಮಾಡಿದಂತಿದೆ. ಒಂದು ಕಡೆ ಕಾಂಗ್ರೆಸ್ ನಿಂದ ವಲಸೆ ಬಂದಿರುವ ಸಂಸದ ಜಿ.ಎಸ್. ಬಸವರಾಜು ಅವರ ಬಲ ಕುಸಿಯುವಂತೆ ಮಾಡುವುದು ಮತ್ತು ಜೆಡಿಎಸ್ ಶಾಸಕ ಗೌರಿಶಂಕರ್ ಬೆಳವಣಿಗೆಯನ್ನು ನಿಯಂತ್ರಿಸುವುದು ಸುರೇಶ್‌ಗೌಡ ನೇಮಕದ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಸಚಿವ ಸೊಗಡು ಶಿವಣ್ಣ ಜೊತೆಗೆ ಗುರುತಿಸಿಕೊಂಡಿದ್ದ ಬಿ.ಸುರೇಶ್‌ಗೌಡ ಅವರನ್ನು ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿರುವುದು ಸಂಸದ ಬಸವರಾಜು ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ. ಇದು ಒಂದು ರೀತಿಯಲ್ಲಿ ಸೊಗಡು ಶಿವಣ್ಣಗೆ ಗೆಲುವು ತಂದುಕೊಟ್ಟಂತಾಗಿದೆ. ರಾಜ್ಯ ಬಿಜೆಪಿ ಉರುಳಿಸಿರುವ ಈ ದಾಳ ಯಾರನ್ನು ಕಟ್ಟಿಹಾಕಲಿದೆಯೋ ನೋಡಬೇಕು.


ಇದನ್ನೂ ಓದಿ: ಸಹಪಂಕ್ತಿ ಭೋಜನ ಮಾಡಿ – ಬಿಜೆಪಿ ಮುಖಂಡ ಸೊಗಡು ಶಿವಣ್ಣಗೆ ಕುರುಬ ಸಮುದಾಯದ ಸವಾಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...