Homeಕರ್ನಾಟಕಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಸಿದ್ದರಾಮಯ್ಯ ಅವರನ್ನು ಛೇಡಿಸಿದ ಸುರೇಶ್‌ ಕುಮಾರ್: ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು!

ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು...... ಏನ್ ಆಂಜನೇಯ ನಿಮ್ಮ rss ಅಥವ BJPಗೆ ಮಾತ್ರ ಸ್ವತ್ತೆ...... ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು- ಟ್ವಿಟ್ಟಿಗರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹುಟ್ಟೂರಿಗೆ ಮತದಾನ ಮಾಡಲು ಹೋಗಿದ್ದಾಗ ನಾಟಿಕೋಳಿ ಸಾರು-ಮುದ್ದೆ ಸವಿಯುವಾಗ ಹನುಮ ಜಯಂತಿಯ ಬಗ್ಗೆ ಮಾತನಾಡಿದ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಣ ಸಚಿವರಾದ ಸುರೇಶ್‌ ಕುಮಾರ್ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಆಕ್ರೋಶಗೊಂಡ ಟ್ವಿಟ್ಟಿಗರು ಸುರೇಶ್‌ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತದಾನ ಮಾಡಿದ ನಂತರ ಸಿದ್ದರಾಮಯ್ಯ ತಮ್ಮ ಸ್ನೇಹಿತನ ಮನೆಯ‌ಲ್ಲಿ ರಾಗಿ ಮುದ್ದೆ, ನಾಟಿ ಕೋಳಿ ಸಾರು ಊಟ ಮಾಡಿದರು. ಈ ಸಂದರ್ಭದಲ್ಲಿ “ಅಣ್ಣಾ ಇಂದು ಹನುಮ ಜಯಂತಿ. ನಾನು ನಾನ್‌ವೆಜ್‌ ತಿನ್ನಲ್ಲ” ಎಂದು ಊಟದ ವೇಳೆ ಸ್ನೇಹಿತರೊಬ್ಬರು ಸಿದ್ದರಾಮಯ್ಯ ಅವರಲ್ಲಿ ಹೇಳಿದರು. ಅದಕ್ಕೆ ಉತ್ತರಿಸಿ, “ಹನುಮ ಹುಟ್ಟಿದ ತಾರೀಖು ನಿನಗೆ ಗೊತ್ತಾ? ಗೊತ್ತಿದ್ದರೆ ಆ ದಿನ ತಿನ್ನಬೇಡ. ಗೊತ್ತಿಲ್ಲ ಅಂದರೆ ಚಿಕನ್‌ ತಿನ್ನು, ಏನೂ ಆಗ‌ಲ್ಲ” ಎಂದು ಗದರಿಸಿದ್ದರು.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಈ ಹೇಳಿಕೆಯನ್ನು ಉಲ್ಲೇಖಿಸಿ ಸುರೇಶ್‌ ಕುಮಾರ್ ಟ್ವೀಟ್ ಮಾಡಿದ್ದು, “ಅಣ್ಣಾ, ಇವತ್ತು ಹನುಮ ಜಯಂತಿ, ಎಂದು ನೆನಪಿಸಿದ ಗ್ರಾಮಸ್ಥನಿಗೆ, ‘ಯಾವ ಜಯಂತಿ? ಹನುಮ ಹುಟ್ಟಿದ ತಾರೀಕು ನಿನಗೆ ಗೊತ್ತಾ? ಏನೂ ಆಗಲ್ಲ ತಿನ್ನು. ಹನುಮ ಹುಟ್ಟಿದ ದಿನ ಗೊತ್ತಿದ್ದರೆ ಮಾಡಬೇಕು. ಗೊತ್ತಿಲ್ಲ ಅಲ್ವಾ? ಚಿಕನ್ ತಿನ್ನು’ ಎಂದು ತಮ್ಮದೇ ಧಾಟಿಯಲ್ಲಿ ಛೇಡಿಸಿದರಂತೆ ಈ ನಾಯಕರು” ಎಂದು ವ್ಯಂಗ್ಯವಾಡಿದ್ದರು.

ಇದನ್ನೂ ಓದಿ: ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಮತ್ತೊಂದು ಟ್ವೀಟ್‌ನಲ್ಲಿ, “ಈ ನೆಲದ ನಂಬಿಕೆಗಳಿಗೆ ಈ ರೀತಿ ಅವಮಾನ ಮಾಡುವುದೇ ಜಾತ್ಯಾತೀತತೆ ಎಂದು ನಂಬಿದ್ದಾರೆ ಈ ರೀತಿಯ ನಾಯಕರುಗಳು. ಇವರಂತೆಯೆ ಮತ್ತೊಬ್ಬ ನಾಯಕರು ಈ ಹಿಂದೆ “ಶ್ರೀ ರಾಮನ birth certificate ಎಲ್ಲಿ” ಎಂದು ಕೇಳಿದ್ದು ನೆನಪಿಗೆ ಬರುತ್ತಿದೆ” ಎಂದು ಬರೆದುಕೊಂಡಿದ್ದರು.

ಸುರೇಶ್‌ ಕುಮಾರ್ ಅವರ ಈ ಹೇಳಿಕೆಗೆ ಅವರನ್ನೇ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು ರೀಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

ಸುಭಾಶ್ ಎಂಬುವವರು ಟ್ವೀಟ್ ಮಾಡಿ, “ಹಾಗಾದ್ರೆ ಹನುಮ ಜಯತಿಯಂದು ಮಾಂಸ ತಿನುವಾಗಿಲ್ಲ ಎಂದರೆ ಮಾಂಸದ ಅಂಗಡಿಗಳನ್ನು ಮುಚ್ಚುಬಹುದಿತ್ತು ಅಲ್ಲ ಸರ್… ಅವರಹಾಗೆ ಎಷ್ಟೋ ಜನ ಮನೆಯಲ್ಲಿ ಮಾಂಸದ ಊಟ ಮಾಡಿರುತ್ತಾರೆ…. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಪ್ರಕಾರ ಯಾರಿಗೆ ಯಾವ ಊಟ ಇಷ್ಟಾನೋ ಅದನ್ನು ತಿನ್ನಬಹುದು…” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ಪ್ರವೀಣ್ ಹುಲಿಕುಂಟೆ ಎಂಬುವವರು ಟ್ವೀಟ್ ಮಾಡಿ, “ಸುರೇಶ್‌ ಕುಮಾರ್ ಸರ್… ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ. ನಾನೂ ಒಬ್ಬ ಅಪ್ಪಟ ಹಿಂದೂ. ಆಸ್ತಿಕ ಪರಂಪರೆಯ ಹುಡುಗ, ಹಳ್ಳಿಯಿಂದ ಬಂದವನು. ಈಗ್ಗೆ ಎರಡು-ಮೂರು ದಶಕಗಳ ಹಿಂದೆ ನಮಗೆ ಹನುಮ ಜಯಂತಿ ಯಾವಾಗ ಎಂಬುದು ತಿಳಿದಿರುತ್ತಿರಲಿಲ್ಲ. ಅವರವರ ಆಹಾರ ಪದ್ದತಿಯಂತೆ ಸಸ್ಯಾಹಾರ ಅಥವಾ ಮಾಂಸಾಹಾರ ತಿನ್ನುತ್ತಿದ್ದರು. ಕೆಲವು ಕಡೆ ದೇವರಿಗೂ ಮಾಂಸಾಹಾರ ಮಾಡುತ್ತಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಖರ್ಗೆ ಮುಖ್ಯಮಂತ್ರಿ ಆಗುವುದನ್ನು ತಡೆದವರ ಹೆಸರು ಹೇಳಲಿ: ದೇವೇಗೌಡರಿಗೆ ಸಿದ್ದು ತಿರುಗೇಟು

ದಿಲೀಪ್‌ ಗೌಡ ಎಂಬುವವರು ಟ್ವೀಟ್ ಮಾಡಿ, “ಸಂಕುಚಿತ ಮನೋಭಾವನೆ ಇದು…… ಹೋಗ್ರಿ ನಮ್ ಕಡೆ ದೊಡ್ಡ ಹುಂಜನ ಬೆಟ್ಟದ ಆಂಜನೇಯನಿಗೆ ಬಲಿ ಕೊಟ್ಟು ನಾವು ತಿನ್ನೋದು…… ಏನ್ ಆಂಜನೇಯ ನಿಮ್ಮ rss ಅಥವ BJP ಮಾತ್ರ ಸ್ವತ್ತೆ…… ರಾಜ್ಯ ನಡೆಸ್ರಿ ಜನರ ಕಷ್ಟಗಳಿಗೆ ಸ್ಪಂದಿಸಿ. ಯಾರು ಏನು ತಿಂದರೆ ನಿಮಗೇನು. ಕೀಳುಮಟ್ಟದ ನಾಯಕರೂ, ಕೀಳುಮಟ್ಟದ ರಾಜಕಾರಣ” ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಶ್ರೀಧರ್ ಗೌಡ ಟ್ವೀಟ್ ಮಾಡಿ, “ಸ್ವಾಮಿ ಅವರು ಮಾಂಸ ಆದ್ರು ತಿನ್ನಲಿ ಏನಾದ್ರು ಮಾಡ್ಲಿ ನಿಮಗೆ ಯಾಕೆ ಅದು ಅವರವರ ಸಂಪ್ರದಾಯ ಮೊದಲು ನೀವು ಶಿಕ್ಷಕರ ವಿದ್ಯಾರ್ಥಿಗಳ ಬಗ್ಗೆ ಗಮನ ಕೊಡಿ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಸಂಗಲಡ್ ಶೆಟ್ಟರ್‌ ಟ್ವೀಟ್‌ ಮಾಡಿ, “ವೈಕುಂಠ ಏಕಾದಶಿ ದಿನ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳು ಚಿಕನ್ ಪಾರ್ಟಿ ಮಾಡಿಸಿ, ಹೆಂಡ ಸಾರಾಯಿ ಕುಡಿಸಿ, ಬೆಳಿಗ್ಗೆ ಕೇಸರಿ ಶಾಲ್ ಧರಿಸಿ ನಾವು ಹಿಂದೂಗಳು ಎಂದು ಹೇಳಿದ್ದರಂತೆ” ಎಂದು ಛೇಡಿಸಿದ್ದಾರೆ.

ಹೀಗೆ ಸಿದ್ದರಾಮಯ್ಯನವರಿಗೆ ಟಾಂಗ್ ಕೊಡಲು ಹೋಗಿ ಸುರೇಶ್‌ ಕುಮಾರ್ ಅವರೇ ತಗಲುಹಾಕಿಕೊಂಡಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯನವರು ಮಾಂಸ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಆಗಲೂ ಇದೇ ರೀತಿಯ ವಿವಾದ ಎದ್ದಿತ್ತು. ಇದಕ್ಕೆ ಸಿದ್ದರಾಮಯ್ಯನವರು ಸ್ಪಷ್ಟವಾಗಿಯೇ ಉತ್ತರ ನೀಡಿದ್ದರು.

ಇನ್ನು ಸುರೇಶ್‌ ಕುಮಾರ್ ಅವರ ಅಭಿಪ್ರಾಯದ ಪರವಾಗಿಯೂ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ಹೋಗಾರ್ ಎಂಬುವವರು ಟ್ವೀಟ್ ಮಾಡಿ, “ಅದಕ್ಕಾಗಿ ತಾನೆ ಜನ ಅವರನ್ನ ಸೋಲಿಸಿದ್ದು. ಜನರ ನಂಬಿಕೆಗಳನ್ನು ಗೌರವಿಸದ ವ್ಯಕ್ತಿ ಒಳ್ಳೆ ನಾಯಕನಾಗಲಾರ. ಈ ವೈಚಾರಿಕತೆ ಕೇವಲ ಹಿಂದು ಧರ್ಮದ ಆಚರಣೆಗಳಿಗೆ ಸೀಮಿತವಾಗಿರುವುದು ದುರದೃಷ್ಟಕರ” ಎಂದು ಹೇಳಿದ್ದಾರೆ.

 

ಇದನ್ನೂ ಓದಿ: ತಟ್ಟೆ ಚಳವಳಿ: ಮೋದಿಯವರ ‘ಮನ್ ಕಿ ಬಾತ್’ ವೇಳೆ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...