Homeಮುಖಪುಟದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ದೊರೆಸ್ವಾಮಿ ವಿಚಾರವಾಗಿ ದೇವನೂರು ಪತ್ರಕ್ಕೆ ಸುರೇಶ್‌ ಕುಮಾರ್‌ ಪ್ರತಿಕ್ರಿಯೆ..

ನಾನು "ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ" ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶತಾಯುಷಿ ಎಚ್‌.ಎಸ್‌ ದೊರೆಸ್ವಾಮಿಯವರ ಬಗ್ಗೆ ಬಿಜೆಪಿ ನಾಯಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಕುರಿತು ಸಚಿವ ಸುರೇಶ್‌ ಕುಮಾರ್‌ರವರು ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಅದನ್ನು ವಿರೋಧಿಸಿ ದೇವನೂರು ಮಹಾದೇವರು ಬಹಿರಂತ ಪತ್ರವನ್ನು ಬರೆದಿದ್ದರು. ಅದಕ್ಕೆ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಚಿಂತಕ-ಸಾಹಿತಿ ಶ್ರೀ ದೇವನೂರು ಮಹಾದೇವ ರು ನನಗೆ ಬರೆದ ಪತ್ರಕ್ಕೆ ನನ್ನ ಪ್ರತಿಕ್ರಿಯೆ.

ಹಿರಿಯರಾದ ಮಾನ್ಯ ದೇವನೂರು ಮಹಾದೇವ ರವರೇ,

ಈ “ನಿಮ್ಮಸುರೇಶ್ ನನ್ನು “ನಮ್ಮ ಸುರೇಶ್” ಎಂದು‌ ಪರಿಗಣಿಸಿ ನನಗೆ ಪತ್ರ ಬರೆದಿರುವುದಕ್ಕಾಗಿ ನನ್ನ ಧನ್ಯವಾದಗಳು.

ನಿಮ್ಮ ಪತ್ರವನ್ನು ನಾಲ್ಕೈದು ಬಾರಿ ವಿವರವಾಗಿ ಓದಿದೆ. ನೀವು ವ್ಯಕ್ತ‌‌ಪಡಿಸಿರುವ ಅಭಿಪ್ರಾಯಗಳ‌ ಪೈಕಿ ಕೆಲವದರ ಬಗ್ಗೆ ನನ್ನ ಸಹಮತವಿಲ್ಲದಿದ್ದರೂ ನಿಮ್ಮ ಭಾವನೆಯನ್ನು ನಾನು ಪೂರ್ಣ ಗೌರವಿಸುತ್ತೇನೆ.

ಶ್ರೀ‌ ಹೆಚ್.ಎಸ್.ದೊರೆಸ್ವಾಮಿಯವರನ್ನು ನಾನು ಅನೇಕ‌ ದಶಕಗಳಿಂದ‌ ನೋಡಿಕೊಂಡು ಬಂದಿದ್ದೇನೆ, ಬೆಳೆದಿದ್ದೇನೆ. ಅವರ ಹಿರಿತನ, ಸಾಮಾಜಿಕ ಕಾಳಜಿಯ ಕುರಿತು ನನಗೆ ಗೌರವವಿದೆ. ಅವರೂ ಸಹ ನನ್ನ ಬಗ್ಗೆ ಅನೇಕ ಬಾರಿ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅವರೊಡನೆ ಹಲವು ಹೋರಾಟಗಳಲ್ಲಿ ಪಾಲ್ಗೊಳ್ಳುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶಗಳೂ ನನಗೆ ಸಿಕ್ಕಿವೆ.

#ಆದರೆ….

ಅಂತಹ ಹಿರಿಯ ಸ್ಥಾನದ ವ್ಯಕ್ತಿಗಳು ತಮ್ಮ ಅಭಿಪ್ರಾಯವನ್ನು‌ ವ್ಯಕ್ತಪಡಿಸುವಾಗ ಉಪಯೋಗಿಸುವ ಪದಗಳು ಬಹುಮುಖ್ಯವಾಗುತ್ತವೆ. ಸೈದ್ಧಾಂತಿಕವಾಗಿ ತಾವು ವಿರೋಧಿಸುವರ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತ‌ಪಡಿಸಲು ಹಿರಿಯರಾದ ದೊರೆಸ್ವಾಮಿಯವರಿಗೆ ಪೂರ್ಣ ಸ್ವಾತಂತ್ರ್ಯವಿದೆ. ಆದರೆ ಅದನ್ನು ವ್ಯಕ್ತಪಡಿಸುವ ಪರಿಭಾಷೆಯ ಕುರಿತು ಸ್ವಲ್ಪ ಅವರು ಗಮನ ಹರಿಸಬೇಕಿತ್ತು.

“ಆಡಬಾರದ್ದನ್ನು ಆಡಿದರೆ ಕೇಳಬಾರದ್ದನ್ನು ಕೇಳಬೇಕಾಗುತ್ತದೆ‌” ಎಂದು ನಾನು ಹೇಳಿರುವುದು ಇಂದಿನ ಪರಿಸ್ಥಿತಿಯಲ್ಲಿ ಎಲ್ಲರನ್ನೂ ಸಂಬೋಧಿಸಿ ಹೇಳಿರುವ ಮಾತು ಎಂದು ತಮಗೆ ಅನಿಸುತ್ತಿಲ್ಲವೇ? ರಾಜಕೀಯ, ಸಾಮಾಜಿಕ, ಧಾರ್ಮಿಕ… ಈ ಎಲ್ಲ ವಲಯಗಳಲ್ಲಿಯೂ‌ ಹೆಚ್ಚಾಗಿ ಆಡಬಾರದ‌ ಮಾತುಗಳು, ಅದಕ್ಕೆ ಪ್ರತಿಕ್ರಿಯೆಯಾಗಿ ಕೇಳಬಾರದ ಮಾತುಗಳೇ ಬರುತ್ತಿವೆ. ಮುಂಚೆಯಿಂದ ಈ ಸಮಾಜವು – ವಾದ, ಪ್ರತಿವಾದಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.
(Thesis ಮತ್ತು‌ Anti thesis ಸಂಘರ್ಷದಿಂದ synthesis ಹುಟ್ಟುತ್ತದೆ ಎಂಬುದೂ ಒಂದು ವಾದ.).

ಆದರೆ, ವಾದ ಪ್ರತಿಸಲ ವಿವಾದಕ್ಕೇ ಆಸ್ಪದ ಕೊಡಬಾರದು. ದುರದೃಷ್ಟವಶಾತ್ ವಾದವನ್ನು ಮಾಡುವಾಗ, ಬಹಳ ಗಟ್ಟಿಯಾಗಿ ತಮ್ಮ‌ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ಬಳಕೆಯಾಗುತ್ತಿರುವ ರೀತಿಯಲ್ಲಿಯೂ ಇಂದು‌ ಕೆಟ್ಟ ಮೇಲ್ಪಂಕ್ತಿಯನ್ನು ನಾವೆಲ್ಲಾ ಕಾಣುತ್ತಿದ್ದೇವೆ. ಅತ್ಯಂತ ಅಗತ್ಯವಿರುವ ಉತ್ತಮ ಮೇಲ್ಪಂಕ್ತಿ ಬಹಳ ಅಪರೂಪವಾಗುತ್ತಿದೆ. ವಿರೋಧದ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರೂ‌ ಅದನ್ನು ಕೇಳಿದ ವಿರೋಧಿಗಳು‌ ಸಹಾ ಅಹುದಹುದೆನ್ನಬೇಕು.

ನರೇಂದ್ರ ಮೋದಿಯವರ ಕುರಿತು, ಸಾವರ್ಕರ್ ಕುರಿತು ನಿಮಗೆ ನಿಮ್ಮದೇ ಆದ ಅಭಿಪ್ರಾಯ ‌ಇರುವುದು‌ ಎಷ್ಟು‌ ಸಹಜವೋ ಹಾಗೆಯೇ‌ ನನಗೂ ನನ್ನದೇ ಆದ ಅಭಿಪ್ರಾಯ ಇರುವುದೂ ಸಹಜ‌. ನಾನು ಗೌರವಿಸುವ ಸಾವರ್ಕರ್ ಕುರಿತು, ನನ್ನ ನಾಯಕರಾದ ಮೋದಿಯವರ ಕುರಿತು ಯಾರಾದರೂ ಏನಾದರೂ ನನಗೆ ಸರಿಯಲ್ಲದ್ದನ್ನು ಹೇಳಿದರೆ‌ ಪ್ರತಿಕ್ರಿಯಿಸಬೇಕಾದ್ದು ನನ್ನ ಧರ್ಮ. ಹಾಗೆ ಪ್ರತಿಕ್ರಿಯಿಸುವಾಗ ನನ್ನ ಮಾತುಗಳ ಮೇಲೆ ನಿಯಂತ್ರಣ ವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತ ಪಡಿಸುವಾಗಲೂ ಇರಬೇಕಲ್ಲವೇ?

ಸಾಮಾಜಿಕ ಜಾಲತಾಣಗಳಲ್ಲಿ ಬಳಸುವ ಮಾತುಗಳಿಗೆ ಲಂಗುಲಗಾಮೇ ಇರದ ಈ ಕಾಲದಲ್ಲಿ ಪ್ರಮುಖರು ಉಪಯೋಗಿಸುವ ಪದಗಳು ಇನ್ನಷ್ಟು ಸ್ವೇಚ್ಛಾಚಾರಕ್ಕೆ ಇಂಬು ನೀಡಬಾರದು.‌

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಭಾಪ್ರಜ್ಞೆ, ಸಂದರ್ಭಪ್ರಜ್ಞೆ ಗಳಿಗೆ ಮಹತ್ವವಿರಬೇಕು.

ಒಟ್ಟಿನಲ್ಲಿ, ಇಂದಿನ‌ ಸಾರ್ವಜನಿಕ‌‌ ಜೀವನದಲ್ಲಿ ಕೇಳಿಬರುತ್ತಿರುವ ಪದಪುಂಜಗಳು ಯಾರಿಗೂ ಸಮಾಧಾನ ತರುತ್ತಿಲ್ಲ ಮತ್ತು ಸಮಾಜಕ್ಕೆ ಒಳಿತನ್ನೂ ಮಾಡುತ್ತಿಲ್ಲ.

ನಾನು “ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ” ಎಂದು ಹೇಳಿದ್ದು ಕೇವಲ ಓರ್ವ ವ್ಯಕ್ತಿಯ ಕುರಿತಲ್ಲ. ಬದಲಿಗೆ ಇಂದಿನ ವಾಸ್ತವ ಪರಿಸ್ಥಿತಿಯ ಕುರಿತು ಎಂಬುದನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ.

ನನಗಾಗಿ ಮಾರ್ಗದರ್ಶಕ‌ ಮಾತುಗಳನ್ನು ಆಡಿರುವ ತಮಗೆ ಧನ್ಯವಾದಗಳು.

ವಿಶ್ವಾಸದಿಂದ

ಎಸ್.ಸುರೇಶ್ ಕುಮಾರ್.


ಇದನ್ನೂ ಓದಿ: ಎಸ್.ಸುರೇಶ್ ಕುಮಾರ್ ಅವರಿಗೆ ದೇವನೂರು ಮಹಾದೇವರವರು ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...