Homeಕರ್ನಾಟಕಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, 'ಧಾರ್ಮಿಕ' ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ, ‘ಧಾರ್ಮಿಕ’ ಘೋಷಣೆ ಕೂಗಿದ್ದು ಆಶ್ಚರ್ಯ ತಂದಿದೆ: ಶರದ್ ಪವಾರ್

- Advertisement -
- Advertisement -

ಕರ್ನಾಟಕ ವಿಧಾನಸಭೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಧಾರ್ಮಿಕ” ಘೋಷಣೆಗಳನ್ನು ಕೂಗಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಒಬ್ಬರು ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ, ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಅದು ಒಳ್ಳೆಯದಲ್ಲ ಎಂದು ಪವಾರ್ ಅವರು ಮಹಾರಾಷ್ಟ್ರದ ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಪಂಢರಪುರ ದೇವಸ್ಥಾನ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದ್ದಾರೆ.

”ಚುನಾವಣೆಯಲ್ಲಿ ಸ್ಪರ್ಧಿಸುವ ಸಮಯದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಜಾತ್ಯತೀತತೆಗಾಗಿ ಪ್ರತಿಜ್ಞೆ ಮಾಡುತ್ತೇವೆ” ಎಂದು ಪವಾರ್ ತಿಳಿಸಿದರು.

”ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ನೀವು ಚುನಾವಣೆಯಲ್ಲಿ ಧರ್ಮ ಅಥವಾ ಧಾರ್ಮಿಕ ವಿಷಯವನ್ನು ಕೈಗೆತ್ತಿಕೊಂಡಾಗ ಅದು ವಿಭಿನ್ನ ರೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ ಮತ್ತು ಇದು ಒಳ್ಳೆಯದಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಅಂಕೋಲದಲ್ಲಿ ಸಾರ್ವಜನಿಕ ಸಭೆ ಉದ್ದೇಶ ಮಾತನಾಡಿದ್ದ ಮೋದಿ, ”ಮತದಾನದ ದಿನ ಇವಿಎಂನಲ್ಲಿ ಬಟನ್‌ ಒತ್ತುವ ಮುನ್ನ ಜೈ ಭಜರಂಗ ಬಲಿ ಎಂದು ಘೋಷಣೆ ಕೂಗಿ ಕಾಂಗ್ರೆಸ್‌ಗೆ ಶಿಕ್ಷೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು.

ಪ್ರಧಾನಿ ಮೋದಿ ಅವರು ಪ್ರಚಾರ ಸಂದರ್ಭದಲ್ಲಿ ಹನುಮಾನ್ ಚಾಲಿಸ್ ಹೇಳುವುದು, ಬಜರಂಗ ಬಲಿ ಎನ್ನುವ ಘೋಷಣೆ ಕೂಗಿದ್ದರು. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದರು.

”ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ  ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ” ಎಂದು ಆರೋಪಿಸಿತ್ತು.

”ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿದ್ದಾರೆ. ಕೇವಲ ಚುನಾವಣೆ ಲಾಭಕ್ಕೋಸ್ಕರ ದೇವ ದೇವತೆಗಳನ್ನು ಬಳಸುತ್ತಿದ್ದಾರೆ. ಈ ರೀತಿಯ ಪ್ರಚಾರಕ್ಕೆ ಅವಕಾಶ ನೀಡಬಾರದು. ಜಾತಿ ಧರ್ಮದ ಹೆಸರು ಬಳಸಿಕೊಂಡು ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಬಾರದು” ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಈ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಲಾಗಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...