Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಗುಬ್ಬಿ: ಸೋಲಿಲ್ಲದ ಸರದಾರ ವಾಸಣ್ಣನವರ ಐದನೇ ಗೆಲುವು ಸುಲಭವೆ?

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಗುಬ್ಬಿ: ಸೋಲಿಲ್ಲದ ಸರದಾರ ವಾಸಣ್ಣನವರ ಐದನೇ ಗೆಲುವು ಸುಲಭವೆ?

- Advertisement -
- Advertisement -

ಮೊದಲ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಕಂಡು, ಆನಂತರ ಸತತವಾಗಿ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಜಯ ಸಾಧಿಸಿ ಸೋಲಿಲ್ಲದ ಸರದಾರ ಅನಿಸಿಕೊಂಡಿರುವ, ಒಂದಷ್ಟು ದಿನಗಳ ಕಾಲ ಸಚಿವರೂ ಆಗಿದ್ದ ಗುಬ್ಬಿಯ ಎಸ್.ಆರ್ ಶ್ರೀನಿವಾಸ್ (ವಾಸಣ್ಣ) ತಮ್ಮ 5ನೇ ವಿಧಾನಸಭಾ ಚುನಾವಣೆಯ ತಯಾರಿ ಆರಂಭಿಸಿದ್ದಾರೆ. ಈ ಬಾರಿ ವಾಸಣ್ಣನವರು ತಮ್ಮ ಕಾರ್ಯತಂತ್ರವನ್ನು ಬದಲಿಸಿದ್ದಾರೆ. ಆರಂಭದಲ್ಲಿ ಕಾಂಗ್ರೆಸ್‌ನಲ್ಲಿದ್ದು, ನಂತರ ಪಕ್ಷೇತರ ಶಾಸಕನಾಗಿದ್ದ ಅವರು ಕಳೆದ ಮೂರು ಚುನಾವಣೆಗಳನ್ನು ಜೆಡಿಎಸ್ ಚಿಹ್ನೆಯಡಿ ಗೆದ್ದಿದ್ದರು. ಚುನಾವಣೆ ಹತ್ತಿರವಿದ್ದಾಗ ಜೆಡಿಎಸ್ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದಾರೆ. ಸದ್ಯ ಕಾಂಗ್ರೆಸ್‌ಗೆ ಅಷ್ಟೇನೂ ಒಲವಿಲ್ಲದ ಗುಬ್ಬಿಯಲ್ಲಿ ತಮ್ಮ ವೈಯಕ್ತಿಕ ವರ್ಚಸ್ಸಿನ ಮೂಲಕ ಚುನಾವಣೆ ಎದುರಿಸಲು ಸಿದ್ಧಿವಾಗಿದ್ದಾರೆ. ಅವರು ತಮ್ಮ 5ನೇ ಯತ್ನದಲ್ಲಿ ಸಫಲರಾಗುತ್ತಾರೆ ಎಂಬ ಪ್ರಶ್ನೆಗೂ ಮುನ್ನ ಕ್ಷೇತ್ರದ ರಾಜಕೀಯ ಇತಿಹಾಸವನ್ನೊಮ್ಮೆ ಮೆಲುಕು ಹಾಕೋಣ.

1951ರಲ್ಲಿ ಸಿ.ಎಂ ಅಣ್ಣಪ್ಪಯ್ಯ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 1957ರಲ್ಲಿ ಸ್ವತಂತ್ರ ಅಭ್ಯರ್ಥಿ ಸಿ.ಜೆ ಮುಕ್ಕಣ್ಣಪ್ಪ ಗೆದ್ದು ಬಂದರು. 1962ರಲ್ಲಿಯೂ ಸ್ವತಂತ್ರ ಅಭ್ಯರ್ಥಿ ವಿ.ಎಂ ದೇವ ಆಯ್ಕೆಯಾದರು. 1967ರಲ್ಲಿ ಕಾಂಗ್ರೆಸ್‌ನ ಚಿಕ್ಕೇಗೌಡ ಗೆಲ್ಲುವ ಮೂಲಕ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಂಡರು.

1972ರಲ್ಲಿ ಗಟ್ಟಿ ಚಂದ್ರಶೇಖರ್ ಕಾಂಗ್ರೆಸ್‌ನಿಂದ ಗೆಲುವು ಕಂಡರೆ, 1978ರಲ್ಲಿ ಅವರೇ ಇಂದಿರಾ ಕಾಂಗ್ರೆಸ್‌ನಿಂದ ಗೆದ್ದು ಬಂದರು. 1983ರಲ್ಲಿ ಜನತಾಪಕ್ಷದ ಎಸ್.ರೇವಣ್ಣನವರು ಕಾಂಗ್ರೆಸ್‌ನ ಗಟ್ಟಿ ಚಂದ್ರಶೇಖರ್‌ರವರನ್ನು ಸೋಲಿಸಿದರು.

ಜಿ.ಎಸ್ ಶಿವನಂಜಪ್ಪ

1985 ಮತ್ತು 1989 ರಲ್ಲಿ ಲಿಂಗಾಯಿತ ಸಮುದಾಯದ ಜಿ.ಎಸ್ ಶಿವನಂಜಪ್ಪನವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಅಲ್ಲದೇ 1994ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಕಂಡು ಹ್ಯಾಟ್ರಿಕ್ ಸಾಧನೆ ಮಾಡಿದರು. ಅಲ್ಲಿಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರ ಆಡಳಿತಾವಧಿ ಕೊನೆಯಾಯಿತು. ಆನಂತರ ಕಾಂಗ್ರೆಸ್ ಗುಬ್ಬಿಯಲ್ಲಿ ಗೆದ್ದದ್ದೇ ಇಲ್ಲ. 1999ರಲ್ಲಿ ನಾಲ್ಕನೇ ಯತ್ನದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಜಿ.ಎಸ್ ಶಿವನಂಜಪ್ಪನವರನ್ನು ಜೆಡಿಎಸ್ ಪಕ್ಷದ ಎನ್.ವೀರಣ್ಣಗೌಡ ಮಣಿಸಿದರು. ಅಲ್ಲಿಗೆ ಲಿಂಗಾಯಿತ ಸಮುದಾಯದಿಂದ ಆಯ್ಕೆಯಾದ ಕೊನೆಯ ಶಾಸಕರೂ ಅವರೇ ಆಗಿದ್ದಾರೆ.

ವಾಸಣ್ಣನವರ ಆಗಮನ

2000ರಲ್ಲಿ ಜಿ.ಪಂ ಸದಸ್ಯರಾಗಿ ಆಯ್ಕೆಯಾಗಿದ್ದ ಒಕ್ಕಲಿಗ ಸಮುದಾಯದ ವಾಸಣ್ಣನವರು 2004ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಜಿ.ಎಸ್ ಶಿವನಂಜಪ್ಪರವರನ್ನು 11,577 ಮತಗಳ ಅಂತರದಿಂದ ಸೋಲಿಸಿ ಮೊದಲ ಬಾರಿಗೆ ಶಾಸಕರಾದರು. ಅಲ್ಲಿಂದೀಚೆಗೆ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. 2008ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ ವಾಸಣ್ಣನವರು ಬಿಜೆಪಿ ಅಭ್ಯರ್ಥಿ ಸಿ.ವಿ ಮಹದೇವಯ್ಯನವರನ್ನು 14,672 ಮತಗಳ ಅಂತರದಿಂದ ಮಣಿಸಿದರು. ವಾಸಣ್ಣ 52,302 ಮತಗಳನ್ನು ಪಡೆದರೆ, ಬಿಜೆಪಿಯ ಸಿ.ವಿ ಮಹದೇವಯ್ಯ 37,630 ಮತಗಳನ್ನು ಪಡೆದರು. ಕಾಂಗ್ರೆಸ್‌ನ ಶಿವಕುಮಾರ್‌ರವರು 27,280 ಮತಗಳಿಗೆ ಸೀಮಿತಗೊಂಡರು.

2013ರ ಚುನಾವಣೆಯಲ್ಲಿ ವಾಸಣ್ಣನವರು ಜೆಡಿಎಸ್‌ನಿಂದ ಕಣಕ್ಕಿಳಿದು 58,783 ಮತಗಳನ್ನು ಪಡೆದು ಹ್ಯಾಟ್ರಿಕ್ ಗೆಲುವು ಕಂಡರು. ಆಗ ಕೆಜೆಪಿಯಿಂದ ಸ್ಪರ್ಧಿಸಿದ್ದ ಜಿ.ಎನ್ ಬೆಟ್ಟಸ್ವಾಮಿಯವರು 51,539 ಮತಗಳನ್ನು ಪಡೆದು ನಿಕಟ ಪೈಪೋಟಿ ನೀಡಿದ್ದರು. ಕಾಂಗ್ರೆಸ್ ಪಕ್ಷದ ಹೊನ್ನಗಿರಿಗೌಡ 18,548 ಮತಗಳಿಗೆ ಕುಸಿದರೆ, ಬಿಜೆಪಿಯ ನಟರಾಜ್‌ರವರು ಕೇವಲ 2,392 ಮತಗಳನ್ನಷ್ಟೇ ಪಡೆದು ಮುಖಭಂಗ ಅನುಭವಿಸಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಧುಗಿರಿ: ಕೆ.ಎನ್. ರಾಜಣ್ಣ, ವೀರಭದ್ರಯ್ಯ ನಡುವಿನ ಹಣಾಹಣಿಗೆ ಬಿಜೆಪಿ ಎಂಟ್ರಿ

2018ರ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ನಡೆಯಿತು. ಜೆಡಿಎಸ್‌ನ ವಾಸಣ್ಣನವರು 55,572 ಮತಗಳನ್ನು ಪಡೆದು ನಾಲ್ಕನೇ ಗೆಲುವು ಕಂಡರು. ಬಿಜೆಪಿಯ ಜಿ.ಎನ್ ಬೆಟ್ಟಸ್ವಾಮಿಯವರು 46,491 ಮತಗಳನ್ನು ಪಡೆದು 9,081 ಮತಗಳ ಅಂತರದಲ್ಲಿ ಸೋಲೊಪ್ಪಿಕೊಂಡರು. ಕಾಂಗ್ರೆಸ್‌ನ ಕೆ.ಕುಮಾರ್ 13,938 ಮತಗಳನ್ನು ಪಡೆದರೆ, ಸ್ವತಂತ್ರ ಅಭ್ಯರ್ಥಿ ಎಸ್.ಟಿ ದಿಲೀಪ್ ಕುಮಾರ್ 9,735 ಮತಗಳನ್ನು ಪಡೆದಿದ್ದರು.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 1,90,000; ಲಿಂಗಾಯಿತ: 40,000; ಪರಿಶಿಷ್ಟ ಜಾತಿ: 35,000; ಒಕ್ಕಲಿಗರು: 35,000; ಗೊಲ್ಲರು (ಯಾದವರು): 25,000; ಪರಿಶಿಷ್ಟ ಪಂಗಡ: 11,000; ಮುಸ್ಲಿಂ: 11,000; ಕುರುಬರು: 10,000; ತಿಗಳರು: 8,000; ಇತರೆ: 15,000

ಹೊನ್ನಗಿರಿಗೌಡ

ಇದುವರೆಗೂ ಗುಬ್ಬಿಯಲ್ಲಿ ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳೆ ಶಾಸಕರಾಗುತ್ತಾ ಬಂದಿದ್ದಾರೆ. ಗೊಲ್ಲ ಸಮುದಾಯದ ಜಿ.ಎನ್ ಬೆಟ್ಟಸ್ವಾಮಿಯವರು ಗೆಲುವಿನ ಸನಿಹಕ್ಕೆ ಬಂದು ಮುಗ್ಗರಿಸಿದ್ದಾರೆ.

ಹಾಲಿ ಪರಿಸ್ಥಿತಿ

ವಾಸಣ್ಣನವರು ಮುಖ್ಯ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನಂತಹ ಒಂದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವುದು ಬಿಟ್ಟರೆ ಅಂತ ಎದ್ದು ಕಾಣುವ ಅಭಿವೃದ್ಧಿಯಾಗಿಲ್ಲ ಎನ್ನುವುದು ಮತದಾರರ ಆರೋಪ. ಈ ಅಂಶ 20 ವರ್ಷಗಳ ಕಾಲ ಶಾಸಕರಾಗಿರುವ ವಾಸಣ್ಣನವರಿಗೆ ಆಡಳಿತ ವಿರೋಧಿ ಅಲೆಯಾಗಿ ಮಾರ್ಪಟ್ಟಿದೆ. ರಾಜ್ಯಸಭಾ ಚುನಾವಣೆ ವೇಳೆ ಜೆಡಿಎಸ್ ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್‌ಗೆ ಮತ ಹಾಕಿದ್ದ ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿಯೂ ಭಾಗವಹಿಸಿದ್ದರು. ಆನಂತರ ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ತಾವು ಮಾತ್ರವಲ್ಲದೇ ಅಪಾರ ಪ್ರಮಾಣದ ಜೆಡಿಎಸ್ ಕಾರ್ಯಕರ್ತರು ಸಹ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದಾರೆ. ವೈಯಕ್ತಿಕ ವರ್ಚಸ್ಸು ಹೊಂದಿರುವ ವಾಸಣ್ಣನವರು ನೆಲೆ ಇಲ್ಲದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಬಯಸಿದ್ದು ಅವರಿಗೆ ಟಿಕೆಟ್ ಸಿಕ್ಕಿದೆ.

ಅವರು ಕಾಂಗ್ರೆಸ್ ಸೇರುತ್ತಲೇ ಗುಬ್ಬಿ ಪಟ್ಟಣ ಪಂಚಾಯ್ತಿಯ 9 ಜೆಡಿಎಸ್ ಸದಸ್ಯರು ಮತ್ತು ಒಬ್ಬ ಪಕ್ಷೇತರ ಸದಸ್ಯ ವಾಸಣ್ಣನವರಿಗೆ ಬೆಂಬಲ ಘೋಷಿಸಿದ್ದಾರೆ.

ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ಸಮುದಾಯದ ಜಿ.ಎಸ್ ಪ್ರಸನ್ನಕುಮಾರ್, ಒಕ್ಕಲಿಗ ಸಮುದಾಯದ ಹೊನ್ನಗಿರಿಗೌಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅವರು ವಾಸಣ್ಣನವರ ಕಾಂಗ್ರೆಸ್ ಸೇರ್ಪಡೆಯನ್ನು ಆರಂಭದಲ್ಲಿ ವಿರೋಧಿಸಿದ್ದರು. ಆದರೆ ಇವರಿಬ್ಬರಿಗೂ ಟಿಕೆಟ್ ಸಿಗುವುದು ಅನುಮಾನವಾಗಿದೆ.

ಜೆಡಿಎಸ್

ವಾಸಣ್ಣನವರು ಜೆಡಿಎಸ್‌ನಿಂದ ಒಂದು ಕಾಲು ಹೊರಗಿಟ್ಟಿದ್ದಾಗಲೇ ಜೆಡಿಎಸ್ ಪಕ್ಷವು ಪರ್ಯಾಯ ಅಭ್ಯರ್ಥಿಯ ಶೋಧದಲ್ಲಿತ್ತು. ಅವರ ಕಣ್ಣಿಗೆ ಬಿದ್ದ ಒಕ್ಕಲಿಗ ಸಮುದಾಯದ ನಾಗರಾಜುರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ. ಅಷ್ಟೇನೂ ವರ್ಚಸ್ಸು ಹೊಂದಿಲ್ಲದ ಅವರು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಕೃಪಾಕಟಾಕ್ಷದಿಂದ ಗೆಲುವು ಸಾಧಿಸುವ ಹಂಬಲದಲ್ಲಿದ್ದಾರೆ.

ನಾಗರಾಜು

ಬಿಜೆಪಿಯಲ್ಲಿ ಬಂಡಾಯದ ಬಿಸಿ

ಗುಬ್ಬಿ ಬಿಜೆಪಿಯಲ್ಲಿ ಅಭ್ಯರ್ಥಿಗಳ ದಂಡೇ ನೆರೆದಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಬಂಡಾಯದ ಬಾವುಟ ಹಾರಿಸಲು ಅವರೆಲ್ಲರೂ ಸಜ್ಜಾಗಿದ್ದಾರೆ. ಕಳೆದೆರಡು ಬಾರಿ ಸೋತಿರುವ ಗೊಲ್ಲ ಸಮುದಾಯದ ಜಿ.ಎನ್ ಬೆಟ್ಟಸ್ವಾಮಿಯವರು ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸೋಲಿನ ಅನುಕಂಪದಿಂದ ಈ ಬಾರಿ ಶತಾಯಗತಾಯ ಗೆಲ್ಲುವ ಆಸೆ ಇಟ್ಟುಕೊಂಡಿದ್ದಾರೆ. ಆದರೆ ಅವರಿಗೆ ಸ್ವಪಕ್ಷೀಯರೇ ತಲೆನೋವಾಗಿದ್ದಾರೆ. ಏಕೆಂದರೆ 2018ರಲ್ಲಿ ಬಿಜೆಪಿ ಟಿಕೆಟ್ ವಂಚಿತ ಲಿಂಗಾಯಿತ ದಿಲೀಪ್ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಅವರ ಸೋಲಿಗೆ ಕಾರಣವಾಯ್ತು. ಅದು ಈ ಬಾರಿಯೂ ಮುಂದುವರಿಯುವ ಲಕ್ಷಣಗಳು ಗೋಚರಿಸುತ್ತಿವೆ. ದಿಲೀಪ್ ಕುಮಾರ್ ಈ ಬಾರಿ ಬಿಜೆಪಿ ಟಿಕೆಟ್ ಬೇಕೇಬೇಕೆಂದು ಪಟ್ಟು ಹಿಡಿದಿದ್ದು ಒಂದು ವೇಳೆ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧಿಸುವ ಎಚ್ಚರಿಕೆ ನೀಡುತ್ತಿದ್ದಾರೆ.

ಇನ್ನು ಮಾಜಿ ಜಿ.ಪಂ ಸದಸ್ಯರಾದ ಲಿಂಗಾಯಿತ ಸಮುದಾಯದ ಗ್ಯಾಸ್ ಬಾಬು (ಚಂದ್ರಶೇಖರ್) ಸಹ ಟಿಕೆಟ್ ಕೇಳುತ್ತಿದ್ದಾರೆ. ಜೊತೆಗೆ ತಾ.ಪಂ ಸದಸ್ಯ ಅ.ನಾ ಲಿಂಗಪ್ಪ ಸಹ ಬಿಜೆಪಿ ಟಿಕೆಟ್ ರೇಸ್‌ನಲ್ಲಿದ್ದಾರೆ. ಇಷ್ಟು ಸಾಲುವುದಿಲ್ಲ ಎಂಬಂತೆ ಸಚಿವ ವಿ.ಸೋಮಣ್ಣನವರ ಪುತ್ರ ಅರುಣ್ ಸೋಮಣ್ಣನವರ ಹೆಸರು ಗುಬ್ಬಿಯಲ್ಲಿ ಕೇಳಿ ಬರುತ್ತಿದೆ. ಈ ಐದು ಜನರಲ್ಲಿ ಟಿಕೆಟ್ ವಂಚಿತರು ಯಾವ ರೀತಿ ಒಳೇಟು ನೀಡುತ್ತಾರೆ ಎಂಬುದು ನಿಗೂಢವಾಗಿದೆ.

ದಿಲೀಪ್ ಕುಮಾರ್

ಇನ್ನು ಕೆ.ಆರ್.ಎಸ್ ಪಕ್ಷದಿಂದ ಒಕ್ಕಲಿಗ ಸಮುದಾಯದ ಪ್ರವೀಣ್ ಗೌಡರವರು ಅಭ್ಯರ್ಥಿಯಾಗಿದ್ದು ಅವರು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಎಎಪಿ ಪಕ್ಷವು ಪ್ರಭುಸ್ವಾಮಿಯವರನ್ನ ಕಣಕ್ಕಿಳಿಸಿದೆ.

2023ರ ಸಾಧ್ಯತೆಗಳು

ಕಾಂಗ್ರೆಸ್ ಪಕ್ಷದ ವಾಸಣ್ಣನವರಿಗೆ ಆಡಳಿತ ವಿರೋಧಿ ಅಲೆ ಇದ್ದರೂ ಅವರು ತಮ್ಮ ವೈಯಕ್ತಿಕ ವರ್ಚಸ್ಸಿನ ಕಾರಣದಿಂದ ಕನಿಷ್ಟ 25,000ದಷ್ಟು ಮತಗಳ ಬೇಸ್ ಹೊಂದಿದ್ದಾರೆ. ಅವರು ಯಾವುದೇ ಪಕ್ಷಕ್ಕೆ ಹೋದರೂ ಆ ಮತಗಳು ಅವರನ್ನು ಹಿಂಬಾಲಿಸುತ್ತವೆ. ಇನ್ನು ಇದುವರೆಗೂ ಜೆಡಿಎಸ್‌ನಲ್ಲಿದ್ದಾಗ ಅವರು ಪಡೆಯುತ್ತಿದ್ದ ಒಕ್ಕಲಿಗ ಮತಗಳು ಈ ಬಾರಿ ಒಂದಷ್ಟು ಚದುರಿ ಹೋಗುವ ಸಂಭವವಿದೆ. ಆದರೂ ದಲಿತ ಮತ್ತು ಇತರ ಹಿಂದುಳಿದ ವರ್ಗದ ಮತಗಳು ತನ್ನ ಕೈ ಹಿಡಿಯಲಿವೆ ಎಂಬ ಲೆಕ್ಕಾಚಾರ ಅವರದು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕೊರಟಗೆರೆ: ಜಿ.ಪರಮೇಶ್ವರ್-ಸುಧಾಕರ್ ಲಾಲ್ ನಡುವೆ ಮತ್ತೆ ಫೈಟ್; ಲೆಕ್ಕಕ್ಕಿಲ್ಲದ ಬಿಜೆಪಿ ಆಟ

ಇನ್ನು ಜೆಡಿಎಸ್ ಪಕ್ಷದ ನಾಗರಾಜುರವರು ಒಕ್ಕಲಿಗ ಮತಗಳು ಮತ್ತು ಇತರ ಹಿಂದುಳಿದ ಮತಗಳ ಮೇಲೆ ಕಣ್ಣಿಟ್ಟು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ಪಕ್ಷವು ಯಾರಿಗೆ ಟಿಕೆಟ್ ನೀಡುತ್ತದೆ ಎನ್ನುವುದರ ಮೇಲೆ ಗುಬ್ಬಿ ಕ್ಷೇತ್ರದ ಫಲಿತಾಂಶ ನಿರ್ಧಾರವಾಗುವ ಸಾಧ್ಯತೆಯಿದೆ. ಗೊಲ್ಲ ಸಮುದಾಯದ ಜಿ.ಎನ್ ಬೆಟ್ಟಸ್ವಾಮಿಯವರು ಅಭ್ಯರ್ಥಿಯಾಗಿ, ಉಳಿದವರು ಒಮ್ಮತದಿಂದ ಅವರ ಪರವಾಗಿ ಕೆಲಸ ಮಾಡಿದರೆ ಅವರು ಗೆಲುವಿನ ಕನಸು ಕಾಣಬಹುದು. ಆದರೆ ಪಕ್ಷದಲ್ಲಿ ಬಂಡಾಯ ಅಥವಾ ಒಳೇಟು ಕೆಲಸ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಂತಹ ಸಂದರ್ಭದಲ್ಲಿ ಲಿಂಗಾಯಿತ ಸಮುದಾಯದ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯುವುದರಿಂದ ಅದು ಕಾಂಗ್ರೆಸ್ ಅಭ್ಯರ್ಥಿ ವಾಸಣ್ಣನವರಿಗೆ ಅನುಕೂಲವಾಗುವ ಸಾಧ್ಯತೆಯಿದೆ.

ಒಟ್ಟಾರೆಯಾಗಿ ಗುಬ್ಬಿಯಲ್ಲಿ ಈ ಬಾರಿ ಮೂರು ಪಕ್ಷದಿಂದ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದು, ಬಿಜೆಪಿ ಬಿ-ಫಾರಂ ಯಾರ ಕೈ ಸೇರುತ್ತದೆ ಎಂಬುದು ಕ್ಷೇತ್ರದ ಫಲಿತಾಂಶ ನಿರ್ಧರಿಸುವ ಅಂಶವಾಗಿ ಹೊರಹೊಮ್ಮಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...