Homeಕರ್ನಾಟಕ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

- Advertisement -
- Advertisement -

ಕನ್ನಡದ ‘ಈದಿನ’ ಸುದ್ದಿ ಜಾಲತಾಣ ಮಾಡಿರುವ ಚುನಾವಣಾಪೂರ್ವ ಸಮೀಕ್ಷೆಯನ್ನು ರಾಜಕೀಯ ವಿಶ್ಲೇಷಕ ಮತ್ತು ಸಮೀಕ್ಷಾ ತಜ್ಞರಾದ ಪ್ರೊ.ಯೋಗೇಂದ್ರ ಯಾದವ್ ಹಂಚಿಕೊಂಡಿರುವುದು ಟ್ವೀಟ್‌ ವಾರ್‌ಗೆ ಕಾರಣವಾಗಿದೆ.

ಸುಮಾರು 41 ಸಾವಿರ ಜನರನ್ನು ಮಾತನಾಡಿಸಿ ಮಾಡಲಾಗಿದೆ ಎನ್ನಲಾಗಿರುವ ಸರ್ವೇಯು ಕಾಂಗ್ರೆಸ್‌ಗೆ ಸ್ಪಷ್ಟಬಹುಮತವನ್ನು ನೀಡಿದೆ.

132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಸರ್ವೇ ಹೇಳಿದೆ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿದೆ.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿದೆ.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯಿಂದ ಸಿಕ್ಕಿರುವ ಸಂಖ್ಯೆಗಳು ಹೇಳುತ್ತಿವೆ” ಎಂದು ‘ಈದಿನ’ ಸುದ್ದಿ ತಿಳಿಸಿದೆ.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿದೆ.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ. ಇದರ ವಿವರಗಳನ್ನು ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕಾಂಗ್ರೆಸ್‌ ನಾಯಕರ ರಾಹುಲ್ ಗಾಂಧಿ ಮತ್ತು ಯೋಗೇಂದ್ರ ಯಾದವ್ ಅವರ ನಡುವಿನ ಸೌಹಾರ್ದತೆಯನ್ನು ಥಳುಕು ಹಾಕಿದ್ದಾರೆ. ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಅವರು ಮಾಡಿದ ಭಾರತ್ ಜೋಡೋ ಯಾತ್ರೆಗೆ ಅನೇಕ ಕಾಂಗ್ರೆಸ್ಸೇತರರು ಬೆಂಬಲ ನೀಡಿದ್ದರು. ಅದರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರಾಗಿದ್ದು, ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಅದನ್ನು ಪ್ರಸ್ತಾಪಿಸಿದ್ದಂತಿದೆ.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದಾರೆ.

ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯೋಗೇಂದ್ರ ಯಾದವ್‌, “ಸತ್ಯವನ್ನು ಸ್ವಾರಸ್ಯಕರವಾಗಿ ಕಾಣದವರು ಅಡುಗೆಯವರನ್ನೇ (ಈ ಸಂದರ್ಭದಲ್ಲಿ ಕಲ್ಪಿಸಿಕೊಂಡವರು) ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದ ಯಾರೋ ಒಬ್ಬರು ಸಮೀಕ್ಷೆಯಿಂದ ತೊಂದರೆಗೀಡಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ಈದಿನ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...