HomeUncategorizedಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

- Advertisement -
- Advertisement -

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ ವ್ಯಾಪಾರಿಯೊಬ್ಬರು ವೈದ್ಯರ ಬೇಜವಾಬ್ದಾರಿತನದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ನ್ಯಾಯ ಕೋರಿ ಕುಟುಂಬದವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೇ 14 ರಂದು ರಾತ್ರಿ ಮನೆಯಲ್ಲಿ ಶರೀಫ್ ರ ಮೇಲೆ ಹೋರಿ ಹಾಯ್ದಿದೆ. ಇದರಿಂದ ಗಾಯಗೊಂಡಿದ್ದ ಅವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು, ಬಳಿಕ ಅವರನ್ನು ಮೇ 16ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೇ 20 ರಂದು ಶರೀಫ್ ಮೃತಪಟ್ಟಿದ್ದಾರೆ.

ಸೂರ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದು:

ಈ ಸಂಬಂಧ ಪ್ರತಿಕ್ರಿಯೆಗಾಗಿ ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ಕರೆ ಮಾಡಿದಾಗ ನಾನು ಗೌರಿ.ಕಾಂನೊಂದಿಗೆ ಮಾತನಾಡಿದ ಡಾ. ರಾಜೇಶ್, ಅವರು (ಮೊಹಮ್ಮದ್ ಶರೀಫ್) ಹೊಟ್ಟೆನೋವು ಎಂದು ಬಂದಾಗ ನಾವು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಲು ತಿಳಿಸಿದೆವು. ಆದರೆ ರಾತ್ರಿ ನಮ್ಮಲ್ಲಿ ಸ್ಕ್ಯಾನಿಂಗ್ ಸೌಲಭ್ಯವಿಲ್ಲದ ಕಾರಣ ಅವರು ಮಂಗಳೂರಿಗೆ ಹೋಗಿ ಸ್ಕ್ಯಾನಿಂಗ್ ಮಾಡಿಸಿಕೊಂಡು ಬಂದರು. 

ಮಂಗಳೂರಿಂದ ತಂದಿದ್ದ ಅಲ್ಟ್ರಾಸೌಂಡ್ ವರದಿಯಲ್ಲಿ ‘ಕಿಡ್ನಿ ಸ್ಟೋನ್’ (ರೀನಲ್ ಸ್ಟೋನ್) ಇರುವುದು ಕಂಡುಬಂದಿತ್ತು. ಜೊತೆಗೆ ಮೂರು ದಿನಗಳಿಂದ ಮೋಷನ್ ಆಗಿಲ್ಲ ಎಂದಿದ್ದಕ್ಕೆ ನಾವು ಗ್ಲುಕೋಸ್ ನೀಡಿ, ಎನಿಮಾ ಕೊಟ್ಟೆವು. ಅದರಿಂದ ನೋವು ಕಡಿಮೆಯಾಗಿ ಅವರು ಮನೆಗೆ ಹೋಗುತ್ತೇನೆ ಎಂದರು. ಆದರೆ ಅಷ್ಟರಲ್ಲೇ ಬಂದ ಅವರ ರಕ್ತದ ವರದಿಯಲ್ಲಿ ಸೋಂಕು ಇರುವುದು ಪತ್ತೆಯಾಯಿತು. ಅದು ಕಿಡ್ನಿಯದ್ದೋ ಅಥವಾ ಕರುಳಿನದ್ದೋ ಎಂದು ನಿಖರವಾಗಿ ತಿಳಿಯಲು ‘ಸಿಟಿ ಸ್ಕ್ಯಾನ್’ ಮಾಡಿಸಬೇಕು ಎಂದು ತಿಳಿಸಿದೆವು ಆದರೆ ಅಷ್ಟರಲ್ಲಿ ಹೊಟ್ಟೆಯೊಳಗೆ ಪರ್ಫೊರೇಷನ್ (ರಂಧ್ರ) ಆಗಿದ್ದ ಕಾರಣ ಇದ್ದಕ್ಕಿದ್ದಂತೆ ಹೊಟ್ಟೆನೋವು ತೀವ್ರಗೊಂಡು, ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಹಾಗಾಗಿ ತಕ್ಷಣವೇ ಅವರನ್ನು ಮಂಗಳೂರಿಗೆ ಕಳುಹಿಸಿಕೊಟ್ಟೆವು ಎಂದಿದ್ದಾರೆ.

ಪ್ರಕರಣ ದಾಖಲು:

ಕುಟುಂಬಸ್ಥರ ದೂರಿನನ್ವಯ ಬೆಳ್ತಂಗಡಿ ಠಾಣೆಯಲ್ಲಿ ಯು.ಡಿ.ಆರ್ : 28/2026, ಕಲಂ: 194(3) (iv) ಬಿ.ಎನ್.ಎಸ್.ಎಸ್. 2023ರಂತೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷದ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಕೇಳಿಕೊಳ್ಳಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಆರೋಪ ಪ್ರತ್ಯಾರೋಪಗಳೇನೇ ಇದ್ದರು, 35 ವರ್ಷದ ಯುವಕನೊಬ್ಬ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಸಾವನಪ್ಪಿರುವುದು ಇಂದಿನ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿಗೆ ಹಿಡಿದ ಕನ್ನಡಿಯಂತಿದ್ದು ಒಂದು ಅಮೂಲ್ಯ ಜೀವ ಇನ್ನಿಲ್ಲವಾಗಿದೆ. ತನ್ನ ಕುಟುಂಬಕ್ಕೆ ಆಸರೆಯಾಗಿದ್ದ ಜೀವವೊಂದು ಉಸಿರು ಚೆಲ್ಲಿದೆ. ಆರೋಗ್ಯ ಇಲಾಖೆ ಈಗಲಾದರೂ ಎಚ್ಚೆತ್ತು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮವಹಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುತ್ತದೆಯೇ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...