HomeUncategorizedಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿ & ಟೈಮ್ಸ್‌ ನೌ ಚಾನೆಲ್‌ಗೆ ನೋಟಿಸ್!

ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದವು

- Advertisement -
- Advertisement -

ಸುಶಾಂತ್ ಸಾವಿನ ಪ್ರಕರಣದಲ್ಲಿ ಬೇಜವಾಬ್ದಾರಿಯುತ ವರದಿ ಮಾಡಿದ್ದ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್‌ ಇಂದು ನೋಟಿಸ್ ನೀಡಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾಧ್ಯಮ ಸಂಸ್ಥೆಗಳು ಮಾಡಿದ ಬೇಜವಾಬ್ದಾರಿಯುತ ವರದಿ ಮತ್ತು ಬಾಲಿವುಡ್ ಅನ್ನು‌ ಅವಹೇಳನಕಾರಿಯಾಗಿ ಬಿಂಬಿಸಿದ್ದರ ವಿರುದ್ಧ ಬಾಲಿವುಡ್ ಸ್ಟಾರ್‌ಗಳಾದ ಅಮೀರ್‌ ಖಾನ್, ಶಾರುಖ್‌ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ಚಿತ್ರೋದ್ಯಮದ 34 ಚಿತ್ರ ನಿರ್ಮಾಣ ಕಂಪನಿಗಳು ಸೇರಿ ದೆಹಲಿ ಹೈಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದರು.

ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ಟೈಮ್ಸ್‌ ನೌ ನವಿಕಾ ಕುಮಾರ್‌ಗೆ ದೆಹಲಿ ಹೈಕೋರ್ಟ್‌ ನೋಡಿಸ್‌ ನೀಡಿದೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಈ ಪ್ರಕರಣವನ್ನು ನ್ಯಾಯಮೂರ್ತಿ ರಾಜೀವ್ ಶಖ್ದರ್ ವಿಚಾರಣೆ ನಡೆಸುತ್ತಿದ್ದಾರೆ. ಬಾಲಿವುಡ್ ಪರವಾಗಿ ಹಾಜರಾದ ವಕೀಲ ರಾಜೀವ್ ನಾಯರ್, “ಮಾನಹಾನಿ, ಗೌಪ್ಯತೆಯ ಹಕ್ಕಿನ ಉಲ್ಲಂಘನೆ, ವೈಯಕ್ತಿಕ ಸುರಕ್ಷತೆಗೆ ಧಕ್ಕೆ ತರುವುದು, ಹಾನಿಕಾರಕ ಸುಳ್ಳು, ಪ್ರೋಗ್ರಾಂ ಕೋಡ್ ಉಲ್ಲಂಘನೆ, ನ್ಯಾಯಯುತ ವಿಚಾರಣೆಯ ನಿರೀಕ್ಷೆಗಳಿಗೆ ವಿರುದ್ಧವಾದ ಸಮಾನಾಂತರ ತನಿಖೆಗಳನ್ನು ಮಾಡಿದ್ದಾರೆ ಎನ್ನುವ ಅಂಶಗಳ ಆಧಾರದ ಮೇಲೆ ಮೊಕದ್ದಮೆ ಹೂಡಲಾಗಿದೆ” ಎಂದು ವಾದಿಸಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳ ವರದಿಗಳು ಕೇವಲ ಊಹೆಯಾಗಿದ್ದು, ಅವು ಸತ್ಯವನ್ನು ಆಧರಿಸಿಲ್ಲ ಎಂದು ಸಿಬಿಐ ಹೇಳಿದೆ.

ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್‌ ನೌ- ಎರಡು ಚಾನೆಲ್‌ಗಳ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ, ಪ್ರದೀಪ್ ಭಂಡಾರಿ, ರಾಹುಲ್ ಶಿವಶಂಕರ್ ಮತ್ತು ನವಿಕಾ ಕುಮಾರ್ ವಿರುದ್ಧ 4 ಚಲನಚಿತ್ರೋದ್ಯಮ ಸಂಘಗಳು ಮತ್ತು 34 ನಿರ್ಮಾಪಕರು ಇದರಲ್ಲಿ ದೂರುದಾರರಾಗಿದ್ದಾರೆ. ಕರಣ್ ಜೋಹರ್, ಯಶ್ ರಾಜ್, ಅಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರ ನಿರ್ಮಾಣ ಕಂಪನಿಗಳು ಈ ಪ್ರಕರಣದ ಒಂದು ಭಾಗವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

“ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಬಾಲಿವುಡ್ ಮತ್ತು ಅದರ ಸದಸ್ಯರ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಮತ್ತು ಮಾನಹಾನಿಕರವಾದ ಹೇಳಿಕೆ ನೀಡುವುದನ್ನು ತಡೆಯಬೇಕು” ಎಂದು ದೂರಿನಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ಚಾನೆಲ್‌ಗಳು 1994 ರ ಪ್ರೋಗ್ರಾಂ ಕೋಡ್‌ಗೆ ಬದ್ಧವಾಗಿರಬೇಕು ಮತ್ತು ಬಾಲಿವುಡ್ ವಿರುದ್ಧ ಪ್ರಕಟಿಸಿದ ಎಲ್ಲಾ ಮಾನಹಾನಿಕರ ವಿಷಯವನ್ನು ಹಿಂತೆಗೆದುಕೊಳ್ಳಿ ಅಥವಾ ತೆಗೆದುಹಾಕಿ” ಎಂದು ಚಲನಚಿತ್ರ ನಿರ್ಮಾಪಕರು ಒತ್ತಾಯಿಸಿದ್ದರು.

ಈ ಮಾಧ್ಯಮ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಇದೇ ಮೊದಲಲ್ಲ. ಮಾನಹಾನಿಕರ, ಆಧಾರರಹಿತ ಮತ್ತು ತಪ್ಪಾದ ಸುದ್ದಿಗಳನ್ನು ಪ್ರಸಾರ ಮಾಡಿದ ತಪ್ಪಿತಸ್ಥರೆಂದು ಕಂಡುಬಂದಿದ್ದು, ಮೊದಲಿನಿಂದಲೂ ಅವರನ್ನು ಖಂಡಿಸಲಾಗಿದ್ದು, ದಂಡವನ್ನೂ ವಿಧಿಸಲಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಬಾಲಿವುಡ್ ಒಂದು ಸುಂದರವಾದ ಸ್ಥಳ. ಸೃಜನಶೀಲ ಜಗತ್ತು. ಇದು ಕಲೆ ಮತ್ತು ಸಂಸ್ಕೃತಿಯ ಉದ್ಯಮ. ಜನರು ಇದರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು, ಡ್ರಗ್ಸ್ ಬಗೆಗಿನ ವಿಷಯಗಳ ಬಗ್ಗೆ ಕೇಳಿದಾಗ ವೈಯಕ್ತಿಕವಾಗಿ ತುಂಬಾ ನೋವುಂಟಾಗುತ್ತದೆ. ಡ್ರಗ್ಸ್ ಜಾಲ ಇಲ್ಲಿ ಬಿಟ್ಟು ಬೇರೆಲ್ಲಿಯೂ ಸಂಭವಿಸುದಿಲ್ಲವೇ? ಕಪ್ಪು ಕಲೆಯಿದ್ದರೆ, ಅದನ್ನು ತೊಳೆಯಿರಿ. ಅದು ಇಲ್ಲವಾಗುತ್ತದೆ. ಬಾಲಿವುಡ್‌ಗೆ ಅಂಟಿರುವ ಡ್ರಗ್ಸ್ ಕಲೆ ಕೂಡಾ ಹಾಗೆಯೇ, ತೊಳೆದರೆ ಹೋಗುತ್ತದೆ- ಹೇಮಾ ಮಾಲಿನಿ

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸುಶಾಂತ್ ಸಿಂಗ್ ಅಸಹಜ ಸಾವಿನ ಆರಂಭದಿಂದ ಇಲ್ಲಿಯವರೆಗೂ ಮಾಧ್ಯಮಗಳನ್ನು ನಿಯಂತ್ರಿಸಲು ನ್ಯಾಯಾಲಯ ಮತ್ತು ಸರ್ಕಾರ ಸಾಕಷ್ಟು ಪ್ರಯತ್ನ ಮಾಡಿದಾಗ್ಯೂ ಅವುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಸುಶಾಂತ್ ಪ್ರಕರಣವನ್ನು ಸಿಬಿಐ ವಹಿಸಿಕೊಳ್ಳುವುದಕ್ಕೂ ಮೊದಲು ಮತ್ತು ನಂತರ ತಮ್ಮದೇ ಆದ ಊಹಾಪೂಹದ ತನಿಖಾ ವರದಿಗಳನ್ನು ಈ ಸುದ್ಧಿ ಸಂಸ್ಥೆಗಳು ಪ್ರಸಾರ ಮಾಡುತ್ತಿದ್ದವು. ಮಹಾರಾಷ್ಟ್ರ ಸರ್ಕಾರ ಮತ್ತು ಅದರ ಮುಖಂಡರು ಸೇರಿದಂತೆ ಅರ್ನಾಬ್ ಗೋಸ್ವಾಮಿ ಮೇಲೆ ಪ್ರಕರಣ ದಾಖಲಿಸಿದ್ದರು. ಸಿಬಿಐ ಕೂಡ ಮಾಧ್ಯಮಗಳನ್ನು ನಿಯಂತ್ರಿಸಬೇಕು ಎಂದು ಹೇಳಿಕೆ ನೀಡಿ, ನಾವು ತನಿಖೆಯ ಯಾವುದೇ ಅಂಶಗಳನ್ನು ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇನ್ನು ಸುಶಾಂತ್ ಸಿಂಗ್ ಸಾವನ್ನು, ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಈ ಮಾಧ್ಯಮ ಸಂಸ್ಥೆಗಳು ಕೂಗಾಡುತ್ತಿದ್ದವು. ಆದರೆ ವೈದ್ಯಕೀಯ ಸಂಸ್ಥೆ ಏಮ್ಸ್ ನೀಡಿದ ಆತ್ಮಹತ್ಯೆ ವರದಿಯ ನಂತರ ಈಗ ಸುಮ್ಮನಾಗಿವೆ. ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ರಿಪಬ್ಲಿಕ್ ಟಿವಿಯ ಟಿಆರ್‌ಪಿ ಹಗರಣ ಬಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆಯೂ ವಿಚಾರಣೆಯನ್ನು ಎದುರಿಸುತ್ತಿದೆ. ಬಜಾಜ್ ಮತ್ತು ಪಾರ್ಲೆಜಿ ಕಂಪನಿಗಳು ಈ ರೀತಿಯ ಚಾನೆಲ್‌ಗಳಿಗೆ ಜಾಹೀರಾತು ನೀಡುವುದಿಲ್ಲ ಎಂದು ಘೋಷಿಸಿವೆ.


ಇದನ್ನೂ ಓದಿ: ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ರಿಪಬ್ಲಿಕ್, ಟೈಮ್ಸ್‌ ನೌ ಚಾನೆಲ್ ಮೇಲೆ ಮೊಕದ್ದಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....