Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಬಿಹಾರ ಸರ್ಕಾರ

ಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಶಿಫಾರಸು ಮಾಡಿದ ಬಿಹಾರ ಸರ್ಕಾರ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಲು ಬಿಹಾರ ಸರ್ಕಾರ ಶಿಫಾರಸು ಮಾಡಿದೆ ಎಂದು ಆಡಳಿತ ಪಕ್ಷ ಜೆಡಿಯು ವಕ್ತಾರರಾದ ಸಂಜಯ್ ಸಿಂಗ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸಿಬಿಐ ತನಿಖೆ ಕೋರಿ ಸುಶಾಂತ್‌ ಸಿಂಗ್ ತಂದೆ ಕೆ.ಕೆ.ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಸರ್ಕಾರದ ನಿರ್ಧಾರ ಹೊರಬಿದ್ದಿದೆ. ಪ್ರಕರಣದ ಕುರಿತು ಬಾಂಬೆ ಹೈಕೋರ್ಟ್ ಇಮದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ ನಡೆಸಲಿದೆ.

ಈ ಹಿಂದೆ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಚಿರಾಗ್ ಪಾಸ್ವಾನ್ ಕೂಡ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸಿಎಂಗೆ ಮನವಿ ಮಾಡಿದ್ದರು.

ತನ್ನ ಮಗನ ಪ್ರಾಣಕ್ಕೆ ಅಪಾಯವಿದೆ ಎಂದು ಆರೋಪಿಸಿ ಫೆಬ್ರವರಿಯಲ್ಲಿ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾಗಿ ಸುಶಾಂತ್ ತಂದೆ ಸೋಮವಾರ ಹೇಳಿದ್ದಾರೆ. ತನ್ನ ಮಗನ ಹಠಾತ್ ಮರಣದ 40 ದಿನಗಳ ನಂತರವೂ ಮುಂಬೈ ಪೊಲೀಸರು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ಮಗನ ಸಾವಿನ ಪ್ರಕರಣದ ಆರೋಪಿಗಳು ಮುಕ್ತವಾಗಿ ಓಡಾಡಿಕೊಂಡಿದ್ದಾರೆ. ಹಾಗಾಗಿ ಅವರನ್ನು ಶಿಕ್ಷಿಸಲು ಮುಂಬೈ ಪೊಲೀಸರು ಪಾಟ್ನಾ ಪೊಲೀಸರಿಗೆ ಸಹಾಯ ನೀಡಬೇಕು ಎಂದು ಸಿಂಗ್ ಒತ್ತಾಯಿಸಿದ್ದಾರೆ.

ಐಪಿಸಿಯ ಹಲವಾರು ವಿಭಾಗಗಳ ಅಡಿಯಲ್ಲಿ ನಟ ರಿಯಾ ಚಕ್ರವರ್ತಿ ವಿರುದ್ಧ ಸಿಂಗ್ ನೀಡಿದ ದೂರಿನ ಮೇರೆಗೆ ಬಿಹಾರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಿಹಾರ ಪೊಲೀಸರು ತನಿಖೆ ಆರಂಭಿಸಿ ತಂಡವನ್ನು ಮುಂಬೈಗೆ ರವಾನಿಸಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಯನ್ನು ಪತ್ತೆ ಮಾಡಲಾಗುತ್ತಿಲ್ಲವೆಂದ ಬಿಹಾರ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...