ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಯನ್ನು ಪತ್ತೆ ಮಾಡಲಾಗುತ್ತಿಲ್ಲವೆಂದ ಬಿಹಾರ ಪೊಲೀಸರು!

ಮೋಸ ಮತ್ತು ಕಿರುಕುಳದ ಆರೋಪ ಹೊತ್ತಿರುವ ರಿಯಾ ಚಕ್ರವರ್ತಿ ಅವರು ಶುಕ್ರವಾರ ತಮ್ಮ ಮೌನವನ್ನು ಮುರಿದಿದ್ದು, "ಸತ್ಯವು ಮೇಲುಗೈ ಸಾಧಿಸುತ್ತದೆ." ಎಂದು ಹೇಳಿದ್ದಾರೆ.

0
25
ರಿಯಾ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ನಡೆಸುತ್ತಿರುವ ಬಿಹಾರ ಪೊಲೀಸರು ಸುಶಾಂತ್ ಸ್ನೇಹಿತೆ ನಟಿ ರಿಯಾ ಚಕ್ರವರ್ತಿಯನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

“ತನಿಖೆ ಆರಂಭಿಕ ಹಂತದಲ್ಲಿದೆ ಮತ್ತು ನ್ಯಾಯಾಲಯದಲ್ಲಿದೆ. ನಾವು ಅವರನ್ನು (ರಿಯಾ ಚಕ್ರವರ್ತಿ) ಪತ್ತೆ ಮಾಡಲು ಇನ್ನೂ ಸಾಧ್ಯವಾಗಿಲ್ಲ. ಆದರೆ ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಬಿಹಾರ ಪೊಲೀಸ್ ಮಹಾನಿರ್ದೇಶಕ ಗುಪ್ತೇಶ್ವರ ಪಾಂಡೆ ಹೇಳಿದ್ದಾರೆ.

ಪಾಟ್ನಾದಲ್ಲಿ ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ದಾಖಲಾದ “ಆತ್ಮಹತ್ಯೆಗೆ ಪ್ರಚೋದನೆ” ಪ್ರಕರಣದ ತನಿಖೆಗಾಗಿ ನಾಲ್ಕು ಸದಸ್ಯರ ಬಿಹಾರ ಪೊಲೀಸ್ ತಂಡ ಬುಧವಾರ ಮುಂಬೈಗೆ ಆಗಮಿಸಿದೆ. ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ಅವರ ತಂದೆ ಬಯಸಿದರೆ ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ವರ್ಗಾಹಿಸಬಹುದು. ಆದರೆ ಪೊಲೀಸರು ಇದಕ್ಕೆ ವಿರುದ್ಧವಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಅಲ್ಲದೇ ಮುಂಬೈ ಪೊಲೀಸರು ಬಿಹಾರ ಪೊಲೀಸ್‌ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ವರದಿಗಳನ್ನೂ ಬಿಹಾರ ಪೊಲೀಸ್ ಮಹಾನಿರ್ದೇಶಕ ಗುಪ್ತೇಶ್ವರ ಪಾಂಡೆ ತಳ್ಳಿಹಾಕಿದ್ದಾರೆ.

“ಸುಶಾಂತ್ ಬಿಹಾರದ ಮಗ ಮಾತ್ರವಲ್ಲ, ಅವನು ಇಡೀ ಭಾರತದ ಮಗ. ಸುಶಾಂತ್ ಸಿಂಗ್ ಅವರಿಗೆ ನ್ಯಾಯ ಒದಗಿಸಲು ನಾವು ನಮ್ಮ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಸುಶಾಂತ್‌ ಸಿಂಗ್‌ ರಜಪೂತ್ ಅವರ ತಂದೆ ಕೃಷ್ಣ ಕುಮಾರ್ ಸಿಂಗ್ ಅವರು ಈ ವಾರ ಪಾಟ್ನಾದಲ್ಲಿ “ಆತ್ಮಹತ್ಯೆಗೆ ಪ್ರಚೋದನೆ” ಆರೋಪದ ಮೇಲೆ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಇತರ ಆರು ಜನರ ವಿರುದ್ಧ ದೂರು ದಾಖಲಿಸಿದ್ದರು. ಈ ಬಗ್ಗೆ ಈಗಾಗಲೇ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರರಂಗದ ಹಲವಾರು ಜನರನ್ನು ಪ್ರಶ್ನಿಸಿದ್ದಾರೆ.

ಸುಶಾಂತ್‌ ತಂದೆ ನೀಡಿದ ಎಫ್‌ಐಆರ್‌ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ಪ್ರಕರಣವನ್ನೂ ದಾಖಲಿಸಿದೆ.

ಮೋಸ ಮತ್ತು ಕಿರುಕುಳದ ಆರೋಪ ಹೊತ್ತಿರುವ ರಿಯಾ ಚಕ್ರವರ್ತಿ ಅವರು ಶುಕ್ರವಾರ ತಮ್ಮ ಮೌನವನ್ನು ಮುರಿದಿದ್ದು, “ಸತ್ಯವು ಮೇಲುಗೈ ಸಾಧಿಸುತ್ತದೆ.” ಎಂದು ಹೇಳಿದ್ದಾರೆ.

“ನನಗೆ ದೇವರು ಮತ್ತು ನ್ಯಾಯಾಂಗದ ಮೇಲೆ ಅಪಾರ ನಂಬಿಕೆ ಇದೆ. ನನಗೆ ನ್ಯಾಯ ಸಿಗುತ್ತದೆ ಎಂದು ನಾನು ನಂಬುತ್ತೇನೆ” ಎಂದು ರಿಯಾ ಹೇಳಿದ್ದಾರೆ.


ಇದನ್ನೂ ಓದಿ: ನಟ ಸುಶಾಂತ್ ಸಿಂಗ್‌ ಸಾವು ಪ್ರಕರಣ: ಪ್ರಕರಣ ದಾಖಲಿಸಿದ ಜಾರಿ ನಿರ್ದೇಶನಾಲಯ!

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here