Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....