Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಸುಶಾಂತ್ ಸಿಂಗ್ ಪ್ರಕರಣ: ಚಾರ್ಜ್‌ಶೀಟ್‌ನಲ್ಲಿ ರಿಯಾ ಚಕ್ರವರ್ತಿ ಸೇರಿ 33 ಜನರ ಹೆಸರು

ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದ ತನಿಖೆ ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದೆ.

ಚಾರ್ಜ್‌ಶೀಟ್‌ನಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಸೇರಿದಂತೆ 33 ಜನರನ್ನು ಹೆಸರಿದ್ದು, 200 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ. ಸುಮಾರು 12,000 ಕ್ಕೂ ಹೆಚ್ಚು ಪುಟಗಳಿರುವ ಈ ಚಾರ್ಜ್‌ಶೀಟ್ ಡಿಜಿಟಲ್ ಸ್ವರೂಪವು ಸುಮಾರು 50,000 ಪುಟಗಳನ್ನು ಹೊಂದಿದೆ.

ಕಳೆದ ವರ್ಷದ ಜೂನ್‌ನಲ್ಲಿ 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ನಂತರ ಎನ್‌ಸಿಬಿ ತನಿಖೆ ಆರಂಭಿಸಿತ್ತು. ಇದರಲ್ಲಿ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಇಬ್ಬರನ್ನೂ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ನ ವಿವಿಧ ವಿಭಾಗಗಳ ಅಡಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿತ್ತು. ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು. ಚಾರ್ಜ್‌ಶೀಟ್‌ನಲ್ಲಿರುವ 33 ಆರೋಪಿಗಳಲ್ಲಿ ಎಂಟು ಮಂದಿ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ‘ಆತನ ಮುಖ ನೋಡಿದರೆ ಆತ ಮುಗ್ಧ ಅನಿಸುತ್ತದೆ’: ಸುಶಾಂತ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಹೇಳಿಕೆ

ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಕೆಲವು ಸಿಬ್ಬಂದಿಗಳ ನಡುವೆ ನಡೆಯಲಾಗಿದೆ ಎಂದು ಹೇಳಲಾದ ಖಾಸಗಿ ವಾಟ್ಸಾಪ್ ಚಾಟ್‌ಗಳನ್ನು ಜಾರಿ ನಿರ್ದೇಶನಾಲಯ ಹಂಚಿಕೊಂಡ ನಂತರ ಆಗಸ್ಟ್‌ನಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಇವರೆಲ್ಲರೂ ನಟನಿಗೆ ಮಾದಕ ವಸ್ತುಗಳನ್ನು ಸಂಗ್ರಹಿಸಿ ಸರಬರಾಜು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸುದೀರ್ಘ ಆರು ತಿಂಗಳ ತನಿಖೆಯಲ್ಲಿ, ಎನ್‌ಸಿಬಿ ಮಹಾರಾಷ್ಟ್ರದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಮುಂಬೈನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಬಾಲಿವುಡ್‌ನೊಳಗೆ ಇದ್ದ ಹಲವು ಮಾದಕ ವಸ್ತು ಜಾಲವನ್ನು ಭೇದಿಸಿದ್ದಾಗಿ ಸಂಸ್ಥೆ ಹೇಳಿಕೊಂಡಿದೆ.

ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ರಕುಲ್ ಪ್ರೀತ್, ಶ್ರದ್ಧಾ ಕಪೂರ್, ಅರ್ಜುನ್ ರಾಂಪಾಲ್ ಮುಂತಾದವರ ಹೇಳಿಕೆಗಳನ್ನು ಎನ್‌ಸಿಬಿ ದಾಖಲಿಸಿದೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ಮಾಧ್ಯಮಗಳ

ಈ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರ ಅಳಿಯ ಸಮೀರ್ ಖಾನ್ರನ್ನು ಜನವರಿಯಲ್ಲಿ ಬಂಧಿಸಲಾಗಿತ್ತು. ಫೆಬ್ರವರಿಯಲ್ಲಿ, ಸುಶಾಂತ್ ಸಿಂಗ್ ರಜಪೂತ್ ಅವರ ಸ್ನೇಹಿತರಾಗಿದ್ದ ಚಲನಚಿತ್ರ ನಿರ್ದೇಶಕ ರಿಷಿಕೇಶ್ ಪವಾರ್ ಅವರನ್ನು ಎನ್‌ಸಿಬಿ ಬಂಧಿಸಿತ್ತು. ಈ ಹಿಂದೆ ಧರ್ಮ ಪ್ರೊಡಕ್ಷನ್‌ನ ಡಿಜಿಟಲ್ ಆರ್ಮ್‌ನೊಂದಿಗೆ ಸಂಬಂಧ ಹೊಂದಿದ್ದ ಕ್ಷಿತಿಜ್ ರವಿ ಪ್ರಸಾದ್ ಕೂಡ ಈ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ.

ಡಿಜಿಟಲ್ ಸಾಕ್ಷ್ಯಗಳು, ಕರೆ ದಾಖಲೆಗಳು, ವಾಟ್ಸಾಪ್ ಚಾಟ್‌ಗಳು, ಸ್ಥಳಗಳ ಟ್ಯಾಗ್‌ಗಳು, ವಿಡಿಯೋ ಮತ್ತು ಧ್ವನಿ ರೆಕಾರ್ಡಿಂಗ್‌ಗಳು ಮತ್ತು ಇತರ ಹಲವಾರು ದಾಖಲೆಗಳನ್ನು ಒಳಗೊಂಡ ಸಾಕ್ಷ್ಯಗಳನ್ನು ದೋಷಾರೋಪಣೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಸದ್ಯ ಏಜೆನ್ಸಿಯು ಈ ಎಲ್ಲಾ ಹೇಳಿಕೆಗಳು ಮತ್ತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಅದನ್ನು ಪರಿಶೀಲಿಸಿದ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗುತ್ತದೆ.


ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...