Homeಮುಖಪುಟಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿದೆ. ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕುರಿತಂತೆ ಏಮ್ಸ್ ವೈದ್ಯಕೀಯ ಮಂಡಳಿಯು ಸಿಬಿಐಗೆ ನೀಡಿದ ವರದಿಯಲ್ಲಿ ಇದು ಕೊಲೆ ಅಲ್ಲ ಆತ್ಮಹತ್ಯೆ ಎಂದು ಹೇಳಿದೆ. “ಈ ವಿಷಯ ನಮಗೆ ಯಾವಾಗಲೋ ತಿಳಿದಿತ್ತು. ಅದರೆ ಈಗ ಅದನ್ನು ಪುನರ್‌ಸಾಬೀತುಪಡಿಸಲಾಗಿದೆ ಅಷ್ಟೆ” ಎಂದು ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್‌ಬೀರ್ ಸಿಂಗ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

“34 ವರ್ಷದ ಬಾಲಿವುಡ್ ತಾರೆ ಸುಶಾಂತ್ ಸಿಂಗ್ ಅನ್ನು ಹತ್ಯೆ ಮಾಡಲಾಗಿದೆ ಎನ್ನುವ ಕುಟುಂಬದ ಹೇಳಿಕೆಗೆ ಯಾವುದೇ ಪುರಾವೆಗಳಿಲ್ಲ” ಎಂದು ಏಮ್ಸ್ ತಿಳಿಸಿದೆ. ಇದು ಸುಶಾಂತ್ ಕುಟುಂಬ ಮತ್ತು ಅವರ ವಕೀಲರಿಂದ ಬರುತ್ತಿರುವ ಆರೋಪಗಳಷ್ಟೆ ಎಂದು ತಳ್ಳಿಹಾಕಿದೆ.

ಇದನ್ನೂ ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ನೆನಪಿಗಾಗಿ 1 ಲಕ್ಷ ಗಿಡ ನೆಟ್ಟಅಭಿಮಾನಿಗಳು!

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಶವಪರೀಕ್ಷೆಯ ಆಧಾರದ ಮೇಲೆ ಮುಂಬೈ ಪೊಲೀಸರು ಅದನ್ನು ಆತ್ಮಹತ್ಯೆ ಎಂದು ಕರೆದಿದ್ದರು. ಆದರೆ ಸುಶಾಂತ್ ಕುಟುಂಬ ಸೇರಿದಂತೆ ಹಲವರು ಇದನ್ನು ಕೊಲೆ ಎಂದು ಕರೆದು ನ್ಯಾಯಕ್ಕಾಗಿ ಪ್ರಚಾರಾಂದೋಲನ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ವಕೀಲ ವಿಕಾಸ್ ಸಿಂಗ್ ಅವರು ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡು, “ಇವರು ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸುವುದರ ಮೂಲಕ ಮೋಸ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಮ್ಮದು ವೃತ್ತಿಪರ ತನಿಖೆ ಎಂದು ನಾವು ಈ ಹಿಂದೆಯೇ ಸಮರ್ಥಿಸಿಕೊಂಡಿದ್ದೇವೆ. ಮರಣೋತ್ತರ ಪರೀಕ್ಷೆಯನ್ನು ವೃತ್ತಿಪರವಾಗಿ ನಡೆಸಲಾಗಿದೆ. ನಮ್ಮ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದಾಗ, ಅದರಲ್ಲಿ, ನ್ಯಾಯಾಲಯವು ಯಾವುದೇ ದೋಷವನ್ನು ಕಂಡುಕೊಂಡಿಲ್ಲ” ಎಂದು ಪರಂಬೀರ್ ಸಿಂಗ್ ಹೇಳಿದರು.

ಸಿಬಿಐ 57 ದಿನಗಳಲ್ಲಿ 20 ಜನರನ್ನು ಪ್ರಶ್ನಿಸಿದ್ದಾರೆ. ತಾನು ವಶಪಡಿಸಿಕೊಂಡ ಲ್ಯಾಪ್‌ಟಾಪ್‌ಗಳು, ಹಾರ್ಡ್‌ಡ್ರೈವ್‌ಗಳು, ಕ್ಯಾಮರಗಳು ಮತ್ತು ಮೊಬೈಲ್‌ಗಳನ್ನು ವಿಧಿವಿಜ್ಞಾನವಾಗಿ ಪರಿಶೀಲಿಸಲಾಗಿದೆ. ಈ ತನಿಖೆಯಲ್ಲಿ ಕೊಲೆ ಎನ್ನಲು ಆಧಾರವಾದ ಯಾವ ಸಾಕ್ಷ್ಯಗಳು ಸಿಕ್ಕಿಲ್ಲ. ಈಗಲೂ ಮುಕ್ತವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...