ಸುಶಾಂತ್‌ ಸಿಂಗ್ ಸಾವು ಪ್ರಕರಣ: ಪಾಟ್ನಾದಲ್ಲಿ ದಾಖಲಾದ ದೂರನ್ನು ಮುಂಬೈಗೆ ವರ್ಗಾಯಿಸುವಂತೆ ನಟಿ ರಿಯಾ ಮನವಿ
ಫೋಟೋ ಕೃಪೆ: ಯೆಸ್‌ಪಂಜಾಬ್‌

ಹಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ತನ್ನ ಮಗನನ್ನು ಆತ್ಮಹತ್ಯೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪಾಟ್ನಾದಲ್ಲಿ ದಾಖಲಿಸಿದ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಈ ಪ್ರಕರಣವನ್ನು ಈಗಾಗಲೇ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಹಾಗೂ ತಾನು ಇತರರೊಂದಿಗೆ ತನ್ನ ಹೇಳಿಕೆಗಳನ್ನು ನೀಡಿದ್ದೇನೆ ಎಂದು ಚಕ್ರವರ್ತಿ ಸುಪ್ರೀಂಕೋರ್ಟ್‌ಗೆ ತಿಳಿಸಿದರು.

ಒಂದೇ ಘಟನೆಯಲ್ಲಿ ಎರಡು ತನಿಖೆಗಳು ನಡೆಯಲು ಸಾಧ್ಯವಿಲ್ಲದ ಕಾರಣ ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬವು ಪಾಟ್ನಾದಲ್ಲಿ ಸಲ್ಲಿಸಿದ ಮೊದಲ ಎಫ್‌ಐಆರ್‌ ಅನ್ನು ಮುಂಬೈಗೆ ವರ್ಗಾಯಿಸಬೇಕು, ತನಿಖೆಯಲ್ಲಿ ಮುಂಬೈ ಪೊಲೀಸರೊಂದಿಗೆ ಸಹಕರಿಸಲು ಸಿದ್ಧರಿರುವುದಾಗಿ ಅವರು ಹೇಳಿದರು.

ರಿಯಾ ಚಕ್ರವರ್ತಿ ಅವರನ್ನು ಪ್ರತಿನಿಧಿಸುತ್ತಿರುವ ವಕೀಲ ಸತೀಶ್ ಮನೇಶಿಂದೆ, ಬಿಹಾರ್ ಪೊಲೀಸರ ಎಫ್‌ಐಆರ್‌ ಅನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವವರೆಗೂ ತಡೆಹಿಡಿಯಬೇಕೆಂದು ನಟಿ ಕೋರಿದ್ದಾರೆ ಎಂದು ಹೇಳಿದರು.

ನಟನ ಆತ್ಮಹತ್ಯೆಗೆ ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆ.ಕೆ.ಸಿಂಗ್ ಅವರು ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಇತರ 6 ಜನರ ವಿರುದ್ಧ ಪಾಟ್ನಾದಲ್ಲಿ ಪೊಲೀಸ್ ದೂರು ದಾಖಲಿಸಿದ್ದರು.


ಓದಿ: ಸುಶಾಂತ್ ರಜಪೂತ್‌ ಗೆಳತಿ ರಿಯಾ ಚಕ್ರವರ್ತಿ ವಿರುದ್ದ ದೂರು ದಾಖಲು


ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಸಂಬಂಧ ಹೊಂದಿದ್ದ ರಿಯಾ ಚಕ್ರವರ್ತಿ ಅವರಿಗೆ ಮೋಸ ಮಾಡಿದ್ದಾರೆ, ಅವರಿಂದ ಹಣ ಪಡೆದು ಅವರನ್ನು ತ್ಯಜಿಸಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ. ಅವರು ನಿನ್ನೆ ಪಾಟ್ನಾದಲ್ಲಿ ಎಫ್ಐಆರ್ ಸಲ್ಲಿಸಿದ ನಂತರ, ಪೊಲೀಸ್ ತಂಡ ಮುಂಬೈಗೆ ಪ್ರಯಾಣಿಸಿದೆ.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ತನಿಖೆ ಆರಂಭಿಸಿದ ಮುಂಬೈ ಪೊಲೀಸರು, ರಿಯಾ ಚಕ್ರವರ್ತಿ, ಅವರ ಸಹನಟರು, ಚಲನಚಿತ್ರ ನಿರ್ಮಾಪಕರು ಮತ್ತು ವೈದ್ಯರು ಸೇರಿದಂತೆ 40 ಕ್ಕೂ ಹೆಚ್ಚು ಜನರನ್ನು ಈಗಾಗಲೇ ಪ್ರಶ್ನಿಸಿದ್ದಾರೆ.

ಚಲನಚಿತ್ರ ನಿರ್ಮಾಪಕರಾದ ಸಂಜಯ್ ಲೀಲಾ ಭನ್ಸಾಲಿ, ಆದಿತ್ಯ ಚೋಪ್ರಾ ಮತ್ತು ಶೇಖರ್ ಕಪೂರ್ ನಂತರ ಕರಣ್ ಜೋಹರ್‌ರನ್ನು ಪೊಲೀಸರು ಪ್ರಶ್ನಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಓದಿ:ಸುಶಾಂತ್‌ಸಿಂಗ್ ರಜಪೂತ್ ಸಾವು: ಕನಸು ಬಿತ್ತುವವರ ಕಮರಿದ ಬದುಕು


 

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here