ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. “ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಬೆಳಿಗ್ಗೆ 4:30 ರ ಸುಮಾರಿಗೆ ಎಲ್ಲರೂ ಸೆಹ್ರಿ ಸಮಯಕ್ಕೆ ಎಚ್ಚರವಾಗಿರುವಾಗ ಸ್ಫೋಟ ಸಂಭವಿಸಿದೆ” ಎಂದು ಪೊಲೀಸ್ ಅಧಿಕಾರಿ ಜಮ್ಶೆಡ್ ಆಶರ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿದೆ. ಸ್ಫೋಟಕ್ಕೆ ಅನಿಲ ಸೋರಿಕೆಯೇ ಕಾರಣ ಎಂದು … Continue reading ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು