Homeಮುಖಪುಟವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

- Advertisement -
- Advertisement -

ವಾಮಾಚಾರ ನಡೆಸುತ್ತಿದ್ದ ಶಂಕೆಯ ಮೇಲೆ ಮೂವರು ಮಹಿಳೆಯರನ್ನು ಹತ್ಯೆಗೈದಿರುವ ಘಟನೆ ಜಾರ್ಖಂಡ್‌ನ ಬುಂಡು ಉಪವಿಭಾಗದ ಸೋನಾಹಟು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಮೃತ ಮಹಿಳೆಯರನ್ನು ರಾಯಲು ದೇವಿ (45) ಮತ್ತು ಧೋಲೋ ದೇವಿ (60) ಮತ್ತು ಅಲೂಮಣಿ ದೇವಿ (55) ಎಂದು ಗುರುತಿಸಲಾಗಿದೆ. ರಾಯಲು ದೇವಿ ಮತ್ತು ಧೋಲೋ ದೇವಿ ಅವರ ಶವಗಳನ್ನು ರಣದಿಹ್ ಅರಣ್ಯದಿಂದ ಭಾನುವಾರ ರಾತ್ರಿ ಪೊಲೀಸರು ಪತ್ತೆ ಹಚ್ಚಿದ್ದರು. ಅಲೂಮಣಿ ದೇವಿ ಅವರ ಕೊಳೆತ ಶವ ಅದೇ ಅರಣ್ಯ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾನುವಾರ ಮಧ್ಯಾಹ್ನ ಸ್ಥಳೀಯ ಪತ್ರಕರ್ತರಿಂದ ಮೂವರು ಮಹಿಳೆಯರ ಹತ್ಯೆಯ ಬಗ್ಗೆ ಮಾಹಿತಿ ಪಡೆದೆವು. ಗ್ರಾಮಸ್ಥರ ತೀವ್ರ ಪ್ರತಿರೋಧದ ನಡುವೆ ಸೋನಾಹಟು ಪೊಲೀಸ್ ಠಾಣೆಯಿಂದ 25 ಕಿಮೀ ದೂರದಲ್ಲಿರುವ ಅರಣ್ಯದಲ್ಲಿ ರಾಹೆ ಮತ್ತು ಸೋನಾಹಟು ಪೊಲೀಸ್ ಠಾಣೆಗಳು ಜಂಟಿಯಾಗಿ ಶೋಧ ನಡೆಸಿದ್ದವು. ಭಾನುವಾರದಿಂದ ಬಹುತೇಕ ಎಲ್ಲ ಪುರುಷರು ಗ್ರಾಮದಿಂದ ತಲೆಮರೆಸಿಕೊಂಡಿದ್ದರು” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ದಿ ಟೆಲಿಗ್ರಾಫ್ ಆನ್‌ಲೈನ್ ವರದಿ ಹೇಳಿದೆ.

ಇದನ್ನೂ ಓದಿ: ಗುಂಪು ಹಿಂಸಾಚಾರ ವಿರೋಧಿ ಮಸೂದೆ ಅಂಗೀಕರಿಸಿದ ಜಾರ್ಖಂಡ್‌

“ಸೆಪ್ಟೆಂಬರ್ 1 ರ ರಾತ್ರಿ ತಾಮಾರ್‌ನ ಏಕಲವ್ಯ ವಿದ್ಯಾಲಯದ ವಿದ್ಯಾರ್ಥಿ ರಾಜ್ ಕಿಶೋರ್ ಮುಂಡಾ (18) ಹಾವು ಕಡಿತದಿಂದ ಸಾವನ್ನಪ್ಪಿದ್ದರು. ಅವರು ರಣದಿಹ್ ನಿವಾಸಿ ರಾಮ್ಸಾಕಲ್ ಸಿಂಗ್ ಮುಂಡಾ ಅವರ ಮಗನಾಗಿದ್ದು, ಅವರ ಸಾವು ವಾಮಾಚಾರದಿಂದ ನಡೆದಿದೆ ಎಂದು ಹಾವು ಹಿಡಿಯುವವರು ಹೇಳಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಸಾವಿನ ನಂತರ, ಗ್ರಾಮಸ್ಥರು ರಣದಿಹ್ ಗ್ರಾಮದ ಮಂತ್ರವಾದಿ ಮತ್ತು ಹಾವು ಹಿಡಿಯುವ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ. ಈ ವ್ಯಕ್ತಿಯು ಗ್ರಾಮದಲ್ಲಿ ಕೆಲವು ಮಹಿಳೆಯರು ಮಾಡುವ ವಾಮಾಚಾರದಿಂದ ಈ ಸಾವು ಸಂಭವಿಸಿದೆ ಎಂದು ಹೇಳಿದ್ದಾನೆ. ಅಷ್ಟೆ ಅಲ್ಲದೆ ಅವರನ್ನು ತೊಡೆದುಹಾಕದಿದ್ದರೆ ಅವರು ಗ್ರಾಮವನ್ನೆ ನಾಶಪಡಿಸುತ್ತಾರೆ ಎಂದು ಕೂಡಾ ನಂಬಿಸಿದ್ದಾನೆ.

ಅಷ್ಟೆ ಅಲ್ಲದೆ ಮಹಿಳೆಯರು ತಮ್ಮ ಕುಟುಂಬದ ಇನ್ನೊಬ್ಬ ಯುವಕನನ್ನು ಶೀಘ್ರದಲ್ಲೇ ಕೊಲ್ಲುತ್ತಾರೆ ಎಂದು ಕೂಡಾ ಮಂತ್ರವಾದಿ ಗ್ರಾಮಸ್ಥರಿಗೆ ನಂಬಿಸಿದ್ದಾನೆ.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಶುಕ್ರವಾರದಂದು ರಾಯಲು ದೇವಿಯ ಮಗ 19 ವರ್ಷದ ಲಲಿತ್ ಸಿಂಗ್ ಮುಂಡಾಗೆ ಕೂಡ ಹಾವು ಕಚ್ಚಿತ್ತು. ಚಿಕಿತ್ಸೆ ಬಳಿಕ ಆತನನ್ನು ರಕ್ಷಿಸಲಾಗಿತ್ತು. ನಂತರ ರಾಯಲು ದೇವಿಯನ್ನು ಕರೆತಂದು ಗ್ರಾಮಸ್ಥರು ಶನಿವಾರ ಸಭೆ ಕರೆದಿದ್ದರು. ಅಲ್ಲಿ ಅವರಿಗೆ ವಾಮಾಚಾರ ಮಾಡಿದ್ದಿ ಎಂದು ಥಳಿಸಿದ್ದರಿಂದ ಆಕೆ ಭಯದಿಂದ ವಾಮಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದರು.

ಗ್ರಾಮದಲ್ಲಿ ವಾಮಾಚಾರ ಮಾಡಿರುವ ಇತರೆ ಮಹಿಳೆಯರ ಹೆಸರು ಹೇಳುವಂತೆ ಒತ್ತಡ ಹೇರಿದಾಗ ಅವರು ಧೋಲೋ ದೇವಿ ಮತ್ತು ಅಲೂಮಣಿ ದೇವಿಯರ ಹೆಸರನ್ನು ಹೇಳಿಕೊಂಡಿದ್ದಾರೆ. ಇದರ ನಂತರ, ಗ್ರಾಮಸ್ಥರು ಮೂವರು ಮಹಿಳೆಯರನ್ನು ಹಿಡಿದು ರಣದಿಹ್ ಬಳಿಯ ಪರ್ವತಕ್ಕೆ ಕರೆದೊಯ್ದು ಕೊಂದಿದ್ದಾರೆ.

ಗ್ರಾಮದ ಸುರೇಂದರ್ ಮುಂಡಾ ಎಂಬುವರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಿರುವುದನ್ನು ರಾಂಚಿ ಎಸ್‌ಎಸ್‌ಪಿ ಕಿಶೋರ್ ಕೌಶಲ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

“ಘೋರ ಘಟನೆಯ ಕುರಿತು ತನಿಖೆ ನಡೆಸಲು ನಾವು ಎಸ್‌ಐಟಿಯನ್ನು ರಚಿಸಿದ್ದೇವೆ. ಇದುವರೆಗೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಇನ್ನೂ 16 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗ್ರಾಮಸ್ಥರಿಗೆ ಪ್ರಚೋದನೆ ನೀಡಿದ ಮಂತ್ರವಾದಿಯನ್ನೂ ನಾವು ಬಂಧಿಸುತ್ತೇವೆ” ಎಂದು ಎಸ್‌ಎಸ್‌ಪಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...