Homeಮುಖಪುಟಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ಭಾಗವಹಿಸುವ ಕಾರ್ಯಕ್ರಮಕ್ಕೆ ಹೈಕೋರ್ಟ್ ಸಮ್ಮತಿ

ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ಭಾಗವಹಿಸುವ ಕಾರ್ಯಕ್ರಮಕ್ಕೆ ಹೈಕೋರ್ಟ್ ಸಮ್ಮತಿ

- Advertisement -
- Advertisement -

ಶಂಕಿತ ಭಯೋತ್ಪಾದಕಿ, ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಭಾಗವಹಿಸಲಿರುವ ಮಾಲೆಗಾಂವ್‌ನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ ಎಂದು ಇಂಡಿಯಾ ಟುಡೆ ಶನಿವಾರ ವರದಿ ಮಾಡಿದೆ. ಅವರು ಆಹ್ವಾನಿತರಾಗಿರುವ ಈ ಕಾರ್ಯಕ್ರಮವನ್ನು ಸಕಲ್ ಹಿಂದೂ ಸಮಾಜ ಆಯೋಜಿಸಿದ್ದು, ಭಾನುವಾರದಂದು ನಾಲ್ಕು ಗಂಟೆಗಳ ಕಾಲ ನಡೆಯಲಿದೆ ಎಂದು ವರದಿಯಾಗಿದೆ.

ಪ್ರಜ್ಞಾ ಸಿಂಗ್ ಠಾಕೂರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳಾಗಲಿದೆ ಎಂದು ಉಲ್ಲೇಖಿಸಿ ನಾಸಿಕ್ ಜಿಲ್ಲಾಡಳಿತವು ಆಡಳಿತವು ಆರಂಭದಲ್ಲಿ ಅನುಮತಿ ನಿರಾಕರಿಸಿತ್ತು. ಶಂಕಿತ ಭಯೋತ್ಪಾದಕಿ

2008 ರಲ್ಲಿ ಮಾಲೆಗಾಂವ್ ಮಸೀದಿಯ ಬಳಿ ಭೀಕರ ಸ್ಫೋಟ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಪ್ರಕರಣದ ಆರೋಪಿಗಳಲ್ಲಿ ಪ್ರಜ್ಞಾ ಸಿಂಗ್ ಕೂಡಾ ಒಬ್ಬರಾಗಿದ್ದಾರೆ. ಕಾರ್ಯಕ್ರಮದ ಮತ್ತೊಬ್ಬ ಆಹ್ವಾನಿತ ಅತಿಥಿ ಮಿಲಿಂದ್ ಏಕಬೋಟೆ ಕೂಡ ದ್ವೇಷ ಭಾಷಣದ ಆರೋಪದ ಮೇಲೆ ಕಾನೂನು ಕ್ರಮ ಎದುರಿಸಿದ್ದಾರೆ.

ರಾಹುಲ್ ಬಚಾವ್ ನೇತೃತ್ವದ ಸಂಘಟಕರು ಫೆಬ್ರವರಿ 18 ರಂದು ತಮ್ಮ ಅರ್ಜಿಯನ್ನು ಸಲ್ಲಿಸಿದ್ದರೂ, ನಾಸಿಕ್ ಕಲೆಕ್ಟರ್, ತಹಶೀಲ್ದಾರ್ ಅಥವಾ ಸ್ಥಳೀಯ ಪೊಲೀಸರಿಂದ ಯಾವುದೇ ಔಪಚಾರಿಕ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದರ ನಂತರ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ಅನಧಿಕೃತವಾಗಿ ತಿಳಿಸಿರುವುದಾಗಿ ಮತ್ತು ಅನುಮೋದನೆ ಇಲ್ಲದೆ ಕಾರ್ಯಕ್ರಮ ನಡೆಸಿದರೆ ಮಧ್ಯಪ್ರವೇಶಿಸುವ ಎಚ್ಚರಿಕೆ ನೀಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

‘ವಿರಾಟ್ ಹಿಂದೂ ಸಂತ ಸಮ್ಮೇಳನ’ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವು ಮಾರ್ಚ್ 30 ರಂದು ಗುಡಿ ಪಾಡ್ವಾದೊಂದಿಗೆ ಮಾಲೆಗಾಂವ್‌ನ ಸತಾನ ನಾಕಾದ ಯಶಸ್ವಿ ಕಾಂಪೌಂಡ್‌ನಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ನಡೆಯಲಿದೆ. ಸಭೆಯಲ್ಲಿ ಸ್ವಾಮಿ ಪ್ರಜ್ಞಾನಂದ್ ಸರಸ್ವತಿ ಮತ್ತು ನೀಲೇಶ್ ಚಂದ್ರ ಸೇರಿದಂತೆ ಹಲವಾರು ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿದ್ಧತೆಗಾಗಿ ಸಂಘಟಕರು ಈಗಾಗಲೇ ನಾಸಿಕ್‌ನಾದ್ಯಂತ ಬ್ಯಾನರ್‌ಗಳು ಮತ್ತು ಪೋಸ್ಟರ್‌ಗಳನ್ನು ಹಾಕಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!

ವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...