Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

- Advertisement -
- Advertisement -

ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವುದಾಗಿ  ಪ್ರಕಟಿಸಿದ್ದು, ಏಕತೆ ಮತ್ತು ನ್ಯಾಯಕ್ಕಾಗಿರುವ ಅತಿದೊಡ್ಡ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿಯಾಗಿ ತಮ್ಮ ಕರ್ತವ್ಯದಲ್ಲಿ ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ‘ಪಕ್ಷ ವಿರೋಧಿ’ ಚಟುವಟಿಕೆ ಹಿನ್ನೆಲೆ ಬಿಎಸ್‌ಪಿ ಪಕ್ಷದಿಂದ ಡ್ಯಾನಿಶ್‌ ಅಲಿ ಅವರನ್ನು ಅಮಾನತುಗೊಳಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್‌ಪಿಯು, ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎ ಮತ್ತು ವಿರೋಧ ಪಕ್ಷವಾದ INDIA ಮೈತ್ರಿಕೂಟದಿಂದ ಅಂತರವನ್ನು ಕಾಯ್ದುಕೊಂಡಿತ್ತು. ಆದರೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಡ್ಯಾನಿಶ್‌ ಅಲಿ ವಿರೋಧ ಪಕ್ಷಗಳ ಜೊತೆ ಸಕ್ರಿಯರಾಗಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡ್ಯಾನಿಶ್ ಅಲಿ,  ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರಲು ನಿರ್ಧರಿಸಿದ್ದೇನೆ. ಇದು ನನಗೆ ಬಹಳ ಮುಖ್ಯವಾದ ಕ್ಷಣವಾಗಿದೆ. ನಾನು ಸಾಕಷ್ಟು ಆತ್ಮಾವಲೋಕನದ ನಂತರ ಇಲ್ಲಿಗೆ ಬಂದಿದ್ದೇನೆ. ನನ್ನ ಮುಂದೆ ಎರಡು ಆಯ್ಕೆಯಿತ್ತು. ಒಂದು ಯಥಾಸ್ಥಿತಿಯನ್ನು ಒಪ್ಪಿಕೊಳ್ಳುವುದು ಅಥವಾ ದಲಿತರು, ಹಿಂದುಳಿದವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಇತರ ಅಂಚಿನಲ್ಲಿರುವ ಮತ್ತು ಬಡ ವರ್ಗಗಳ ಶೋಷಣೆಯನ್ನು ನಿರ್ಲಕ್ಷಿಸುವುದು. ಎರಡನೆಯದಾಗಿ ದೇಶದಲ್ಲಿರವ ಈ ಭಯ, ದ್ವೇಷ, ಶೋಷಣೆ ಮತ್ತು ಆಳವಾಗುತ್ತಿರುವ ವಿಭಜನೆಯ ವಾತಾವರಣದ ವಿರುದ್ಧ ಸರ್ವಾಂಗೀಣ ಅಭಿಯಾನವನ್ನು ಪ್ರಾರಂಭಿಸುವುದಾಗಿದೆ. ನನ್ನ ಆತ್ಮಸಾಕ್ಷಿಯು ಎರಡನೇ ಆಯ್ಕೆಯನ್ನು ಆಯ್ದುಕೊಳ್ಳಲು ನನ್ನನ್ನು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಆಡಳಿತ ಪಕ್ಷದ ಸದಸ್ಯರು ನನ್ನ ಮತ್ತು ನನ್ನ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದರು. 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನಲ್ಲಿ ಅತ್ಯಂತ ಅವಹೇಳನಕಾರಿ ಮತ್ತು ಇಸ್ಲಾಮೋಫೋಬಿಕ್ ಭಾಷೆಯನ್ನು ಬಳಸಿದಾಗ ಅಲಿ ರಾಷ್ಟ್ರದ ಗಮನ ಸೆಳೆದಿದ್ದರು. ಈ ವಿಷಯವನ್ನು ಸಂಸದೀಯ ಸಮಿತಿ ಮುಂದಿಡಲಾಗಿತ್ತು ಮತ್ತು ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದರು. ಈ ಬಗ್ಗೆ ಆರೋಪಿತ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಡ್ಯಾನಿಶ್‌ ಅಲಿ ಹೇಳಿದ್ದರು.

ನನ್ನನ್ನು ಅವಹೇಳನ ಮಾಡಿದವನಿಗೆ ಶಿಕ್ಷಿಸುವ ಬದಲು ಆಡಳಿತ ಮಂಡಳಿಯು ಅವನಿಗೆ ಬಹುಮಾನ ನೀಡಿದೆ. ನನ್ನ ಮೇಲಿನ ದಾಳಿಯು ದೇಶದಲ್ಲಿ ಭಯ ಮತ್ತು ದ್ವೇಷದ ವಾತಾವರಣವನ್ನು ಸೃಷ್ಟಿಸುವ ದೊಡ್ಡ ಯೋಜನೆಯ ಭಾಗವಾಗಿದೆ ಎಂದು ನಾನು ಅರಿತುಕೊಂಡೆ ಎಂದು ಅಲಿ ಆರೋಪಿಸಿದ್ದರು. ಆ ಸಂಕಟದ ಸಮಯದಲ್ಲಿ ನನ್ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮತ್ತು ನನ್ನ ಮತ್ತು ನನ್ನ ಕುಟುಂಬದ ಪರವಾಗಿ ನಿಂತ ಮೊದಲ ನಾಯಕ ರಾಹುಲ್ ಗಾಂಧಿ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಯಾತ್ರೆಯ ಉದ್ದೇಶವು ಅಂಚಿನಲ್ಲಿರುವವರಿಗೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ದೊರಕಿಸುವುದಾಗಿದೆ. ಈ ಯಾತ್ರೆಯು ನಮ್ಮ ದೇಶದ ಜನರನ್ನು ಭಯ, ದ್ವೇಷ, ಶೋಷಣೆ ಮತ್ತು ವಿಭಜನೆಯ ವಿರುದ್ಧ ಒಗ್ಗೂಡಿಸುವ ಒಂದು ಕಾರ್ಯದ ಭಾಗವಾಗಿದೆ. ನಾನು ಈ ಯಾತ್ರೆಯಲ್ಲಿ ಸೇರಲು ನಿರ್ಧರಿಸಿದೆ ಏಕೆಂದರೆ ನಾನು ಏಕತೆ ಮತ್ತು ನ್ಯಾಯಕ್ಕಾಗಿರುವ ಈ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿ ಮತ್ತು ಸಮಾಜ ಸೇವಕನಾಗಿ ನನ್ನ ಕರ್ತವ್ಯ ಪೂರ್ಣಗೊಳಿಸಲು ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...