Homeಮುಖಪುಟಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

- Advertisement -
- Advertisement -

ಪ.ಬಂಗಾಳ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಸಿ ಹೈಡ್ರಾಮ ಮಾಡಿದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ಶಾಸಕರನ್ನು ಸ್ಪೀಕರ್‌ ಅಮಾನತು ಮಾಡಿದ್ದಾರೆ.

ಭೂ ಕಬಳಿಕೆ ಆರೋಪದ ಮೇಲೆ ಟಿಎಂಸಿ ನಾಯಕ ಶಹಜಹಾನ್ ಶೇಖ್ ಮತ್ತು ಅವರ ಇಬ್ಬರು ಸಹಾಯಕರನ್ನು ಬಂಧಿಸುವಂತೆ ಕೋರಿ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಬಿಜೆಪಿ ಬೆಂಬಲಿತರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಇದೇ ಘಟನೆ ಬಗ್ಗೆ ಪಶ್ಚಿಮ ಬಂಗಾಳ ವಿಧಾನಸಭೆಗೆ ಎಳೆದು ತಂದು ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಸೃಷ್ಟಿಸಿ ಸದನದ ಕಲಾಪಕ್ಕೆ ಅಡ್ಡಿ ಉಂಟು ಮಾಡಿದ್ದರು.

ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಜೊತೆಗೆ ಮಿಹಿರ್ ಗೋಸ್ವಾಮಿ, ಶಂಕರ್ ಘೋಷ್, ತಾಪಸಿ ಮೊಂಡೋಲ್, ಅಗ್ನಿಮಿತ್ರ ಪಾಲ್ ಮತ್ತು ಬಂಕಿಮ್ ಘೋಷ್ ಅವರನ್ನು ಅಮಾನತು ಮಾಡಲಾಗಿದೆ.

ಸೋಮವಾರ ಬೆಳಿಗ್ಗೆ ಬಿಜೆಪಿಯ ಎಲ್ಲ ಶಾಸಕರು ಟೀ ಶರ್ಟ್‌ ಧರಿಸಿಕೊಂಡು ಅಧಿವೇಶನಕ್ಕೆ ಬಂದಿದ್ದು, ‘ನಾವು ಸಂದೇಶ ಖಾಲಿ ಜೊತೆಗಿದ್ದೇವೆ’ ಎಂದು ಅದರಲ್ಲಿ ಬರೆಯಲಾಗಿತ್ತು, ಘಟನೆಯ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಮಾತನಾಡಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದರು.

ಟಿ-ಶರ್ಟ್‌ಗಳನ್ನು ನೋಡಿದ ಸ್ಪೀಕರ್ ಬಿಮನ್ ಬ್ಯಾನರ್ಜಿ, ಅದನ್ನು ತೆಗೆಯಲು ವಿರೋಧ ಪಕ್ಷದ ಶಾಸಕರಿಗೆ ನಿರ್ದೇಶನ ನೀಡುವಂತೆ ಸುವೇಂದು ಅಧಿಕಾರಿಗೆ ಮನವಿ ಮಾಡಿದ್ದಾರೆ, ಆದರೆ ಅವರು ನಿರಾಕರಿಸಿದ್ದರು. ಟೀ-ಶರ್ಟ್‌ಗಳ ಮೇಲೆ ಆಕ್ಷೇಪಾರ್ಹವಾದ ಪದಗಳನ್ನು ಬರೆಯಲಾಗಿಲ್ಲವಾದ್ದರಿಂದ ಅವುಗಳನ್ನು ಏಕೆ ತೆಗೆಯಬೇಕು ಎಂದು ಸುವೇಂದು ಅಧಿಕಾರಿ ಕೇಳಿದ್ದರು. ನಂತರ ಸ್ಪೀಕರ್‌ ಮನವಿಯನ್ನು ಧಿಕ್ಕರಿಸಿ ಸದನದ ಬಾವಿಯ ಕೆಳಗೆ ಕುಳಿತು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದರಿಂದ ಸ್ಪೀಕರ್ ಆರು ಶಾಸಕರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಏನಿದು ಘಟನೆ?

ಫೆಬ್ರವರಿ 10ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದೆ. ಪಡಿತರ ಹಗರಣದಲ್ಲಿ ತಲೆ ಮರೆಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯ ಮಹಿಳೆಯರು ಮೆರವಣಿಗೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ತಂಡವು ಷಹಜಹಾನ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಲು ಹೋದಾಗ ಅವರ ಮೇಲೆ ಹಲ್ಲೆ ಕೂಡ ನಡೆದಿತ್ತು.

ಸ್ಥಳೀಯ ಮಹಿಳೆಯರ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಂದೇಶ ಖಾಲಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಶೇಖ್ ಷಹಜಹಾನ್ ಮತ್ತು ಅವರ ತಂಡದ ಸದಸ್ಯರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೂಡ ಪ್ರತಿಭಟನಾನಿರತರು ಆರೋಪಿಸಿದ್ದರು. ಈ ಬಗ್ಗೆ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲವನ್ನುಂಟುಮಾಡಿದ್ದು, ಅವರನ್ನು ಸ್ಪೀಕರ್‌ ಅಮಾನತು ಮಾಡಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...