Homeಮುಖಪುಟವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

- Advertisement -
- Advertisement -

ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿ ಅಮಾನತ್ತಾಗಿದ್ದ ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ರವೀಂದ್ರನಾಥ್ ತಮ್ಮ ಕೆಲಸಕ್ಕೆ ಮರಳಿದ್ದಾರೆ.  ಆದರೆ ಅವರಿಗಿನ್ನೂ ಪಾಠ ಮಾಡಲು ಅವಕಾಶ ಕೊಟ್ಟಿಲ್ಲ ಎನ್ನಲಾಗಿದೆ.

ಪ್ರಾಧ್ಯಾಪಕನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅವರೀಗ ಉತ್ತಮ ಮನಸ್ಥಿತಿಯಲ್ಲಿದ್ದಾರೆ. ವಿದ್ಯಾರ್ಥಿಯು ಸಹ ರಾಜಿ ಮಾಡಿಕೊಂಡಿದ್ದು, ಪ್ರಾಧ್ಯಾಪಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಬಯಸಲಿಲ್ಲ. ಹಾಗಾಗಿ ಪ್ರಕರಣ ಅಂತ್ಯಗೊಳಿಸಲಾಗಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿಗಳ ಹೇಳಿಕೆ ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

“ಸರ್ ನೀವು ನನ್ನನ್ನು ಭಯೋತ್ಪಾದಕ ಎಂದು ಹೇಗೆ ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆಗೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರುಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದರು.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದರು.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿತ್ತು.

ಇತ್ತೀಚಿಗೆ ಶಿಕ್ಷಕರೊಬ್ಬರು ಬಿಟ್ಟಿ ಭಾಗ್ಯಗಳು ಎಂದು ಸುಳ್ಳು ಸುದ್ದಿಯನ್ನು ಹರಡಿದ್ದಾಗಿ ಅಮಾನತ್ತಾಗಿದ್ದಾರೆ. ಈ ಪ್ರಾಧ್ಯಾಪಕ ಆರು ತಿಂಗಳ ನಂತರ ಕೆಲಸಕ್ಕೆ ಮರಳಿದ್ದಾರೆ. ಶಿಕ್ಷಕ ಸಮುದಾಯ ಯೋಚಿಸಿ, ಸಮಚಿತ್ತತೆಯಿಂದ ವರ್ತಿಬೇಕೆ ಹೊರತು ಪೂರ್ವಾಗ್ರಹಪೀಡಿತರಾಗಿ ಅಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ. ಉಳಿದವರೆ ಇಂತಹ ತಪ್ಪೆಸೆಗುವ ಮುನ್ನ ಇವುಗಳ ಪಾಠವಾಗಬೇಕಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...