Homeಮುಖಪುಟತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವರದಿಯಾಗಿದೆ.

ಶುಕ್ರವಾರ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸರ್ ನೀವು ಹೇಗೆ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರುಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ಹೇಗೆ ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ; ಡೇಟಾ ಸಂರಕ್ಷಣೆ: ಹೇಳಿದ್ದೇನು? ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೈ ಮಾಮುಗಳ ಕ್ಷಿಪ್ರ ಕಾರ್ಯಾಚರಣೆಯ ಹಿಂದೆ ಅವರ ಶಿಕ್ಷಣ ವ್ಯಾಪಾರದ ಹಿತಾಸಕ್ತಿ ಬಿಟ್ಟು ಬೇರೇನಿಲ್ಲ.

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...