Homeಮುಖಪುಟದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

ದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

- Advertisement -
- Advertisement -

ಮಾನವ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾಲ್ವರು ಏರ್ ಇಂಡಿಯಾ ಸಿಬ್ಬಂದಿ ಮತ್ತು ಯುಕೆ ವಿಮಾನ ಏರಲು ಪ್ರಯತ್ನಿಸುತ್ತಿದ್ದ ಭಾರತೀಯ ಪ್ರಯಾಣಿಕನನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ.

ಅನುಮಾನಾಸ್ಪದ ವರ್ತನೆ ಕಂಡು ಬಂದ ಹಿನ್ನೆಲೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಿಳಿಸಿದೆ.

ಯುಕೆಗೆ ತೆರಳಲು ಸಿದ್ದನಾಗಿದ್ದ ದಿಲ್ಜೋತ್ ಸಿಂಗ್ ಎಂಬ ವ್ಯಕ್ತಿಯ ಪ್ರಯಾಣದ ದಾಖಲೆಗಳು ಇಮಿಗ್ರೇಶನ್‌ ಅಧಿಕಾರಿಗಳಿಗೆ ಸಂಶಯಾಸ್ಪದವಾಗಿ ಕಂಡು ಬಂದಿತ್ತು. ಹಾಗಾಗಿ, ಅಧಿಕಾರಿಗಳು ಆತ ವಿಮಾನ ಹತ್ತುವುದಕ್ಕೆ ಅವಕಾಶ ನಿರಕಾರಿಸಿದ್ದರು. ವಿಮಾನಯಾನ ಸಿಬ್ಬಂದಿಯೊಂದಿಗೆ ಆತನ ಕುರಿತು ಸ್ಪಷ್ಟಪಡಿಸುವಂತೆ ಸೂಚಿಸಿದ್ದರು.

ಪ್ರಯಾಣಿಕ ದಿಲ್ಜೋತ್ ಸಿಂಗ್, ದೆಹಲಿ ವಿಮಾನಯಾನ ಸಿಬ್ಬಂದಿಯನ್ನು ಸಂಪರ್ಕಿಸುವ ಬದಲು, ಏರ್ ಇಂಡಿಯಾ ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ (ಎಐಎಸ್‌ಎಟಿಎಸ್‌) ಸಿಬ್ಬಂದಿಯಿಂದ ಸಹಾಯ ಕೋರಿದ್ದರು. ಇದು ಅಧಿಕಾರಿಗಳ ಅನುಮಾನ ಹೆಚ್ಚಿಸಿತ್ತು.

ತಕ್ಷಣ ಎಚ್ಚೆತ್ತ ಸಿಐಎಸ್ಎಫ್ ಸಿಬ್ಬಂದಿ, ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್‌ನಲ್ಲಿದ್ದ ಏರ್ ಇಂಡಿಯಾ ಸಿಬ್ಬಂದಿ ಅಮಾನ್ಯ ದಾಖಲೆಗಳ ಮೂಲಕ ಸಿಂಗ್ ಮತ್ತು ಇತರ ಇಬ್ಬರ ಬೋರ್ಡಿಂಗ್ ಪ್ರಕ್ರಿಯೆ ಮುಗಿಸಿರುವುದು ಸಿಸಿಟಿವಿ ದೃಶ್ಯಗಳಿಂದ ಬಯಲಾಗಿತ್ತು.

ಈ ಹಿನ್ನೆಲೆ ದಿಲ್ಜೋತ್ ಸಿಂಗ್ ಜೊತೆಗೆ ರೋಹನ್ ವರ್ಮಾ, ಮೊಹಮ್ಮದ್ ಜಹಾಂಗೀರ್, ಯಶ್ ಮತ್ತು ಅಕ್ಷಯ್ ನಾರಂಗ್ ಎಂದು ಗುರುತಿಸಲಾದ ಸಿಬ್ಬಂದಿಯನ್ನು ಬಂಧಿಸಿದ ಸಿಐಎಸ್‌ಎಫ್ ಅಧಿಕಾರಿಗಳು, ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಎಐಎಸ್‌ಎಟಿಎಸ್‌ ಸಿಇಒ ಸಂಜಯ್ ಗುಪ್ತಾ, “ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಸಿಐಎಸ್‌ಎಫ್ ಸಹಯೋಗದಲ್ಲಿ ಮಾನವ ಕಳ್ಳಸಾಗಣೆ ಯತ್ನವನ್ನು ತಡೆಯುವಲ್ಲಿ ಕಂಪನಿಯು ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಹೇಳಿದ್ದಾರೆ.

ಮೂವರು ವ್ಯಕ್ತಿಗಳು ಅಕ್ರಮವಾಗಿ ಯುಕೆಗೆ ತೆರಳಲು ಪ್ರಯತ್ನಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದ ನಮ್ಮ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಗುಪ್ತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಕಾರ್ಯಾಚರಣೆಗಳ ಸಮಗ್ರತೆಯನ್ನು ಕಾಪಾಡಿಕೊಳ್ಳಲು, ಸುರಕ್ಷತೆ, ಕಾನೂನುಬದ್ಧತೆ ಮತ್ತು ನೈತಿಕ ನಡವಳಿಕೆಯ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯಲು ಸಂಸ್ಥೆಯು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಟಾಟಾ ಒಡೆತನದ ಏರ್ ಇಂಡಿಯಾ ಮತ್ತು ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ ಜಂಟಿಯಾಗಿ ಬ್ಯಾಗೇಜ್ ನಿರ್ವಹಣೆ ಮತ್ತು ವಿಮಾನ ನಿರ್ವಹಣೆ ಸೇರಿದಂತೆ ವಿವಿಧ ವಿಮಾನ ನಿಲ್ದಾಣ ಸೇವೆಗಳನ್ನು ಒದಗಿಸುತ್ತಿದೆ.

ಈ ವಾರದ ಆರಂಭದಲ್ಲಿ ಸುಮಾರು 300 ಭಾರತೀಯರನ್ನು ಹೊತ್ತ ವಿಮಾನವನ್ನು ಮಾನವ ಕಳ್ಳ ಸಾಗಾಣಿಕೆಯ ಸಂಶಯದ ಮೇಲೆ ಫ್ರಾನ್ಸ್ ಅಧಿಕಾರಿಗಳು ತಡೆದಿದ್ದರು. ಆ ಬಳಿಕ ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...