Homeಮುಖಪುಟಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

ಈ ಹಿಂದೆ ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿತ್ತು.

- Advertisement -
- Advertisement -

ಕೇರಳ ಸರ್ಕಾರ ಮೊದಲ ಬಾರಿಗೆ ವಿಶ್ವಸಂಸ್ಥೆಯ ಈ ವರ್ಷದ ಸಾಂಕ್ರಾಮಿಕವಲ್ಲದ ಕಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು UN Interagency Task Force (UNIATF) ಪ್ರಶಸ್ತಿ ಪಡೆದಿದೆ. ಕೇರಳ ರಾಜ್ಯವು ಸಾಂಕ್ರಾಮಿಕವಲ್ಲದ ಕಾಯಿಲೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅತ್ಯುತ್ತಮ ಕೊಡುಗೆ ನೀಡಿರುವುದಕ್ಕೆ ಈ ಪ್ರಶಸ್ತಿ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಈ ಪ್ರಶಸ್ತಿ ಘೋಷಿಸಿದ್ದಾರೆ.

2019ರ ಅವಧಿಯಲ್ಲಿ, ಕೇರಳ ಸರ್ಕಾರ ಮಾನಸಿಕ ಆರೋಗ್ಯ, ಎನ್‌ಸಿಡಿ ನಿಯಂತ್ರಣಗಳ ಬಗ್ಗೆ ತೆಗೆದುಕೊಂಡ ಅಭಿವೃದ್ಧಿ ಕ್ರಮಗಳು ಮತ್ತು ಅವುಗಳ ಸಾಧನೆಯನ್ನು ಗುರುತಿಸಲಾಗಿದೆ. “ಈ ಪ್ರಶಸ್ತಿ ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ದಕ್ಕಿದ ಮಾನ್ಯತೆ”  ಎಂದಿರುವ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ರಾಜ್ಯದ ಸಾಧನೆಗಾಗಿ ಎಲ್ಲ ಆರೋಗ್ಯ ಕಾರ್ಯಕರ್ತರನ್ನು ಅವರು ಅಭಿನಂದಿಸಿದರು. ವಿಶ್ವದ ಏಳು ಆರೋಗ್ಯ ಸಚಿವಾಲಯಗಳಲ್ಲಿ ಕೇರಳವೂ ಸೇರಿದೆ.

ಇದನ್ನೂ ಓದಿ: ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ರಾಜ್ಯ ಸರ್ಕಾರವು ಸಾಮಾನ್ಯ ರೋಗಗಳಿಗೆ ಚಿಕಿತ್ಸೆ ನೀಡುವ ಎಲ್ಲಾ ಮೂಲಭೂತ ಸೌಕರ್ಯವನ್ನು ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ, ಆಸ್ಪತ್ರೆಗಳಿಗೆ ನೀಡಿತ್ತು. ಸಾಂಕ್ರಾಮಿಕವಲ್ಲದ ರೋಗಗಳ ಮೇಲೆ ಗಮನಹರಿಸಿದ್ದ ಕಾರಣ ಕೊರೊನಾ ಅವಧಿಯಲ್ಲಿ ಸಾವಿನ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಕೊರೊನಾ ವಿರುದ್ಧ ರಾಜ್ಯದ ಹೋರಾಟವನ್ನು ಮುನ್ನಡೆಸಿದ್ದಕ್ಕಾಗಿ ವಿಶ್ವದಾದ್ಯಂತ ಶ್ಲಾಘಿಸಲ್ಪಟ್ಟ ಕೇರಳದ ಆರೋಗ್ಯ ಸಚಿವೆ ಕೆ. ಕೆ. ಶೈಲಾಜಾ ಅವರನ್ನು ಬ್ರಿಟಿಷ್ ನಿಯತಕಾಲಿಕೆ ಪ್ರಾಸ್ಪೆಕ್ಟ್ ವಿಶ್ವದ ‘ಟಾಪ್ ಥಿಂಕರ್-2020’ ಎಂದು ಗೌರವಿಸಿತ್ತು.

ಯುಕೆ ಪತ್ರಿಕೆ ‘ದಿ ಗಾರ್ಡಿಯನ್’ ತನ್ನ ಲೇಖನದಲ್ಲಿ ಸಚಿವೆ ಕೆ. ಕೆ. ಶೈಲಾಜಾ ಅವರನ್ನು ‘ಕೊರೊನಾ ವೈರಸ್ ಸ್ಲೇಯರ್’ ಮತ್ತು ’ರಾಕ್ ಸ್ಟಾರ್ ಆರೋಗ್ಯ ಮಂತ್ರಿ ’ಎಂದು ಶ್ಲಾಘಿಸಿದೆ.


ಇದನ್ನೂ ಓದಿ: 2020 ರ ಸರಿಯಾದ ಸ್ಥಳದಲ್ಲಿರುವ ಸರಿಯಾದ ಮಹಿಳೆ’; ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟಾಪ್ ಥಿಂಕರ್-2020 ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...