Homeಮುಖಪುಟಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

- Advertisement -
- Advertisement -

2015ರಲ್ಲಿ 193 ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು 2030ರ ಕಾರ್ಯಸೂಚಿಯ ಅಂಗವಾಗಿ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್‌ಡಿಜಿ-ಸಸ್ಟೇನಬಲ್‍ ಡೆವೆಲಪ್‍ಮೆಂಟ್‍ ಗೋಲ್ಸ್) ಅಂಗೀಕರಿಸಿದ್ದವು. ಈ ಪಟ್ಟಿಯಲ್ಲಿ ಭಾರತದ ಶ್ರೇಣಿ ಕಳೆದ ವರ್ಷದಿಂದ ಎರಡು ಸ್ಥಾನ ಕುಸಿದು 117ಕ್ಕೆ ಇಳಿದಿದೆ ಎಂದು ಹೊಸ ವರದಿ ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

‘ಭಾರತದ ಪರಿಸರ ವರದಿ 2021’ ಅನ್ನು ಬಹಿರಂಗಪಡಿಸಿದ್ದು, ಕಳೆದ ವರ್ಷ ಭಾರತದ ಶ್ರೇಯಾಂಕ 115 ಇದ್ದುದು ಈಗ ಎರಡು ಸ್ಥಾನಗಳಿಂದ ಕೆಳಗಿಳಿದಿದೆ. ಮುಖ್ಯವಾಗಿ ಹಸಿವನ್ನು ಕೊನೆಗೊಳಿಸುವುದು ಮತ್ತು ಆಹಾರ ಭದ್ರತೆಯನ್ನು ಸಾಧಿಸುವುದು (ಎಸ್‌ಡಿಜಿ 2), ಲಿಂಗ ಸಮಾನತೆ (ಎಸ್‌ಡಿಜಿ 5), ಸುಸ್ಥಿರ ಮೂಲಸೌಕರ್ಯಗಳನ್ನು ನಿರ್ಮಿಸುವುದು, ಒಳಗೊಳ್ಳುವ ಮತ್ತು ಸುಸ್ಥಿರ ಕೈಗಾರಿಕೀಕರಣವನ್ನು ಉತ್ತೇಜಿಸುವುದು ಮತ್ತು ನಾವೀನ್ಯತೆ (ಎಸ್‌ಡಿಜಿ 9) – ಗುರಿಗಳಲ್ಲಿ ದೇಶವು ಹಿಂದುಳಿದಿದೆ ಎಂದು ವರದಿ ತಿಳಿಸಿದೆ.

ಭಾರತವು ದಕ್ಷಿಣ ಏಷ್ಯಾದ ನಾಲ್ಕು ರಾಷ್ಟ್ರಗಳಾದ ಭೂತಾನ್, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತ ಕೆಳಗಿದೆ ಎಂದು ವರದಿ ಹೇಳಿದೆ. ಭಾರತದ ಒಟ್ಟಾರೆ ಎಸ್‌ಡಿಜಿ ಅಂಕ 100 ರಲ್ಲಿ 61.9 ಆಗಿದೆ.

ಜಾರ್ಖಂಡ್‍ ಮತ್ತು ಬಿಹಾರಗಳು 2030ರ ವೇಳೆಗೆ ಎಸ್‌ಡಿಜಿಗಳನ್ನು ಸಾಧಿಸಲು ಕನಿಷ್ಠ ಸಿದ್ಧತೆ  ಮಾತ್ರ ಹೊಂದಿವೆ. ಐದು ಎಸ್‌ಡಿಜಿಗಳಲ್ಲಿ ಜಾರ್ಖಂಡ್ ಹಿಂದುಳಿದಿದ್ದರೆ, ಬಿಹಾರ ಏಳು ಎಸ್‍ಡಿಜಿಗಳಲ್ಲಿ ಹಿಂದುಳಿದಿವೆ.

ಎಸ್‌ಡಿಜಿಗಳನ್ನು ಸಾಧಿಸುವ ಹಾದಿಯಲ್ಲಿ ಒಟ್ಟಾರೆ ಅತ್ಯುತ್ತಮ ಅಂಕಗಳನ್ನು ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಕೇರಳ, ಹಿಮಾಚಲ ಪ್ರದೇಶ ಮತ್ತು ಚಂಡೀಗಢ.

ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯನ್ನು 2015ರಲ್ಲಿ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಅಂಗೀಕರಿಸಿದವು. ಇದು ಜನರಿಗೆ ಮತ್ತು ವಿಶ್ವಕ್ಕೆ ಶಾಂತಿ ಮತ್ತು ಸಮೃದ್ಧಿ ಕುರಿತ ನೀಲನಕ್ಷೆಯನ್ನು ಒದಗಿಸುತ್ತದೆ.

ಜಾಗತಿಕ ಪಾಲುದಾರಿಕೆಯಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಎಲ್ಲಾ ದೇಶಗಳ ಕ್ರಮಕ್ಕಾಗಿ ಕರೆ ನೀಡುವ 17 ಎಸ್‌ಡಿಜಿಗಳಿವೆ, ಅಂದರೆ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮಾನದಂಡಗಳಾಗಿ ಅಂಗೀಕರಿಲಾಗಿದೆ.

ಎಸ್‌ಡಿಜಿ 1- ಬಡತನ ನಿರ್ಮೂಲನೆ, ಎಸ್‌ಡಿಜಿ 2-ಶೂನ್ಯ ಹಸಿವು, ಎಸ್‌ಡಿಜಿ 3-ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಎಸ್‌ಡಿಜಿ 4- ಗುಣಮಟ್ಟದ ಶಿಕ್ಷಣ, ಎಸ್‌ಡಿಜಿ 5- ಲಿಂಗ ಸಮಾನತೆ, ಎಸ್‌ಡಿಜಿ 6- ಶುದ್ಧ ನೀರು ಮತ್ತು ನೈರ್ಮಲ್ಯ, ಎಸ್‌ಡಿಜಿ 7 – ಕೈಗೆಟುಕುವ ಶುದ್ಧ ಇಂಧನ, ಎಸ್‌ಡಿಜಿ 8 – ಯೋಗ್ಯ ಕೆಲಸ ಮತ್ತು ಆರ್ಥಿಕ ಬೆಳವಣಿಗೆ, ಎಸ್‌ಡಿಜಿ 9- ಉದ್ಯಮ, ನಾವೀನ್ಯತೆ ಮತ್ತು ಮೂಲಸೌಕರ್ಯ,

ಎಸ್‌ಡಿಜಿ 10 – ಕಡಿಮೆ ಅಸಮಾನತೆಗಳು, ಎಸ್‌ಡಿಜಿ 11- ಸುಸ್ಥಿರ ನಗರಗಳು ಮತ್ತು ಸಮುದಾಯಗಳು, ಎಸ್‌ಡಿಜಿ 12- ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ, ಎಸ್‌ಡಿಜಿ 13- ಹವಾಮಾನ ಕ್ರಮಗಳು, ಎಸ್‌ಡಿಜಿ 14- ಜಲಾಚರ ಜೀವಿಗಳನ್ನು ಕಾಪಾಡುವುದು, ಎಸ್‌ಡಿಜಿ 15- ಭೂಮಿಯ ಮೇಲಿನ ಜೀವವೈವಿಧ್ಯತೆ  ರಕ್ಷಣೆ, ಎಸ್‌ಡಿಜಿ 16- ಶಾಂತಿ, ನ್ಯಾಯಕ್ಕಾಗಿ ಪ್ರಬಲವಾದ ಸಂಸ್ಥೆಗಳು ಮತ್ತು ಕೊನೆಯದಾಗಿ ಎಸ್‌ಡಿಜಿ 17- ಗುರಿಗಳಿಗಾಗಿ ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುವುದು.

ಪರಿಸರ, ಆರೋಗ್ಯ, ಹವಾಮಾನ, ವಾಯುಮಾಲಿನ್ಯ, ನೈರ್ಮಲ್ಯ ಮತ್ತು ಕುಡಿಯುವ ನೀರು, ಪರಿಸರ ವ್ಯವಸ್ಥೆಯ ಸೇವೆಗಳು, ಜೀವವೈವಿಧ್ಯತೆ ಸೇರಿದಂತೆ ವಿವಿಧ ಸೂಚಕಗಳ ಮೇಲೆ ಲೆಕ್ಕಹಾಕಲಾದ ಪರಿಸರ ಕಾರ್ಯಕ್ಷಮತೆ ಸೂಚ್ಯಂಕ (ಇಪಿಐ)ದ ಪ್ರಕಾರ ಭಾರತವು 180 ದೇಶಗಳಲ್ಲಿ 168ನೆ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...