Homeಕರ್ನಾಟಕಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಸಿದ ‘ಸುವರ್ಣ ನ್ಯೂಸ್‌’!

ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಸಿದ ‘ಸುವರ್ಣ ನ್ಯೂಸ್‌’!

- Advertisement -
- Advertisement -

ಮುಸ್ಲಿಂ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ. ಮುಸ್ಲಿಮರ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಚುನಾವಣೆಯ ಹೊತ್ತಲ್ಲೇ ಬಿಡುಗಡೆ ಮಾಡಿರುವ ವರದಿ ದೇಶದಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ.

ಈ ವರದಿ ಆಧರಿಸಿ ಮೇ 9, 2024ರಂದು ರಾತ್ರಿ 8:30ಕ್ಕೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು. ಅಜಿತ್ ಹನುಮಕ್ಕನವರ್ ಸುದ್ದಿ ವಿಶ್ಲೇಷಣೆ ಮಾಡಿದ್ದರು. ಸುದ್ದಿಯಲ್ಲಿ ಹಿಂದೂ ಮುಸ್ಲಿಮರ ಜನಸಂಖ್ಯೆ ತೋರಿಸುವಾಗ ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಲಾಗಿದೆ.

ಇದರ ವಿಡಿಯೋ ಹಾಗೂ ಸ್ಕ್ರೀನ್‌ಶಾಟ್‌ನ ವಿಡಿಯೋವನ್ನು ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೈರ್ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಬಳಿಕ ವಿಷಯ ಬಹಿರಂಗಗೊಂಡಿದೆ.

“ಭಾರತೀಯ ಹಿಂದೂಗಳಿಗೆ ಭಾರತದ ಧ್ವಜ ಮತ್ತು ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನದ ಧ್ವಜ ಬಳಸಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಮತ್ತು ಅದರ ಆ್ಯಂಕರ್ ಅಜಿತ್ ಹನುಮಕ್ಕನವರ್ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯನ್ನು ಚರ್ಚಿಸುವಾಗ 20 ಕೋಟಿ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನದ ಧ್ವಜ ಬಳಸಿ ಚಿತ್ರಿಸಿದ್ದಾರೆ. ಕರ್ನಾಟಕದ ಸಂಘಟನೆಗಳು ಆ್ಯಂಕರ್ ಮತ್ತು ಚಾನೆಲ್ ವಿರುದ್ಧ ದೂರು ದಾಖಲಿಸುತ್ತವೆ ಎಂದುಕೊಂಡಿದ್ದೇನೆ” ಎಂದು ಝಬೈರ್ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ಝುಬೈರ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸುವರ್ಣ ನ್ಯೂಸ್ ಮತ್ತು ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಭಾರತೀಯರು ಮುಸ್ಲಿಮರನ್ನು ಪಾಕಿಸ್ತಾನದವರು ಎಂದು ಚಿತ್ರಿಸುವ ಮೂಲಕ ಸುವರ್ಣ ನ್ಯೂಸ್ ದೇಶದ್ರೋಹಕ್ಕೆ ಸಮನಾದ ಕೃತ್ಯವೆಸಗಿದೆ ಎಂದು ಜನರು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ಟ್ಯಾಗ್ ಮಾಡಿ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರ ತಂಡವೊಂದು ಸುವರ್ಣ ನ್ಯೂಸ್ ಮತ್ತು ಅಜಿತ್ ಹನುಮಕ್ಕನವರ್ ವಿರುದ್ಧ ದೂರು ನೀಡಲು ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ.

ಇದನ್ನೂ ಓದಿ : ‘ಆರೋಪಗಳನ್ನು ಹೊರಿಸಲು ಸಾಕಷ್ಟು ವಸ್ತುಗಳಿವೆ..’; ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಕೇಸ್ ದಾಖಲಿಸುವಂತೆ ಸೂಚಿಸಿದ ದೆಹಲಿ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...