Homeಕರ್ನಾಟಕ₹50 ಕೋಟಿ ಹಣ ನೀಡುವಂತೆ ಸ್ವಪಕ್ಷ ಮುಖಂಡನಿಗೆ ಬೆದರಿಕೆ; ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ಉದ್ಯಮಿ...

₹50 ಕೋಟಿ ಹಣ ನೀಡುವಂತೆ ಸ್ವಪಕ್ಷ ಮುಖಂಡನಿಗೆ ಬೆದರಿಕೆ; ಕೇಂದ್ರ ಸಚಿವ ಎಚ್‌ಡಿಕೆ ವಿರುದ್ಧ ಉದ್ಯಮಿ ದೂರು

- Advertisement -
- Advertisement -

“ಚುನಾವಣಾ ಖರ್ಚಿಗೆ ಐವತ್ತು ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಿ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿ ರಿಯಲ್ ಎಸ್ಟೇಟ್ ಉದ್ಯಮಿ, ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ʼಉಪಾಧ್ಯಕ್ಷʼ ವಿಜಯ್ ಟಾಟಾ, ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿರುವ ವಿಜಯ್ ಟಾಟಾ, “ಉದ್ಯಮಿಯಾಗಿರುವ ನಾನು ವ್ಯವಹಾರಿಕವಾಗಿ ಮುನ್ನಡೆ ಸಾಧಿಸಿದ್ದು, ₹50 ಕೋಟಿ ಹಣ ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಡ ಹಾಕುತ್ತಿದ್ದಾರೆ. ಹಣಕ್ಕಾಗಿ ಬೆದರಿಕೆ ಕೂಡಾ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಕುಮಾರಸ್ವಾಮಿ ಜೊತೆಗೆ, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡರ ಹೆಸರನ್ನೂ ತನ್ನ ದೂರಿನಲ್ಲಿ ಉಲ್ಲೇಖಿಸಿರುವ ಟಾಟಾ, “ರಮೇಶ್ ಗೌಡ ಕೂಡ ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ವಿಜಯ್ ಟಾಟಾ, ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಮಾಹಿತಿ ನೀಡಿದ್ದರು. “ಕೆಲ ದಿನಗಳ ಹಿಂದೆ ಕುಮಾರಸ್ವಾಮಿ ಆಪ್ತರಾದ ವಿಧಾನ ಪರಿಷತ್ ಪರಿಷತ್ ಮಾಜಿ ಸದಸ್ಯ ರಮೇಶ್‌ಗೌಡ ಅವರ ಮೊಬೈಲ್ ಮೂಲಕ ಕರೆ ಮಾಡಿ, ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಗೆ ನಿಲ್ಲುತ್ತಿರುವುದರಿಂದ ₹50 ಕೋಟಿ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು” ಎಂದು ಆರೋಪ ಮಾಡಿದ್ದರು.

“ಬೇಡಿಕೆ ಇಟ್ಟ ಹಣ ಕೊಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದಕ್ಕೆ, ರಮೇಶ್ ಗೌಡ ಮೂಲಕ ಹಣ ನೀಡಲಿಲ್ಲವೆಂದರೆ ಬೆಂಗಳೂರಿನಲ್ಲಿ ಬದುಕುವುದಕ್ಕೆ ಸಾಧ್ಯವಿಲ್ಲ. ನಿನಗೆ ರಿಯಲ್ ಎಸ್ಟೇಟ್ ವ್ಯಾಪಾರ ಮಾಡುವುದಕ್ಕೆ ಸಾಧ್ಯವಾಗದು ಎಂದು ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ” ಎಂದು ಉದ್ಯಮಿ ಟಾಟಾ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ; ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...