Homeಮುಖಪುಟಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಫರಾಹ್ ಖಾನ್ ಅಲಿ ಕಿಡಿಕಾರಿದ್ದಾರೆ.

- Advertisement -
- Advertisement -

ಪಾಪ್ ಗಾಯಕಿ ರಿಯಾನ್ನ ಭಾರತದ ರೈತ ಹೋರಾಟವನ್ನು ಬೆಂಬಲಿಸಿದ ನಂತರ ಭಾರತದ ಬಾಲಿವುಡ್ ಸಹ ಈ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಆದರೆ ಮೊದಲಿಂದಲೂ ರೈತ ಹೋರಾಟ ಬೆಂಬಲಿಸುತ್ತಾ ಬಂದಿದ್ದ ಬಾಲಿವುಡ್‌ನ ಖ್ಯಾತ ನಟಿಯರಾದ ತಾಪ್ಸಿ ಪನ್ನು, ಫರಾಹ್ ಖಾನ್ ಅಲಿ ಮತ್ತು ಸ್ವರ ಭಾಸ್ಕರ್‌ರವರನ್ನು ನಟ ಅಭಯ್ ಡಿಯೋಲ್ ಶ್ಲಾಘಿಸಿದ್ದಾರೆ.

“ನನ್ನ ಮುಂದಿನ ರಿಹಾನ್ನಾ ಕುರಿತು ಬಾದಗಲ್‌ರಿರಿ ವಿಡಿಯೋದಲ್ಲಿ ನೀವಿರಲೇಬೇಕು. ಏಕೆಂದರೆ ಅದಕ್ಕೆ ಧೈರ್ಯವಿರಬೇಕು. ಈ ಮೂವರು ಪ್ರಿಯ ಮಹಿಳೆಯರನ್ನು ನೋಡಿ” ಎಂದು ಅಭಯ್ ಡಿಯೋಲ್ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Abhay Deol (@abhaydeol)

ಅಭಯ್ ತನ್ನ ಪೋಸ್ಟ್‌ನಲ್ಲಿ ತಾಪ್ಸಿ ಪನ್ನು ಮಾಡಿದ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ… ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರೊಪಗಂಡಾ ಪಾಠ ಮಾಡಲು ಬರಬೇಡಿ” ಎಂದು ತಾಪ್ಸಿ ಬರೆದಿದ್ದಾರೆ.

ಇನ್ನು ಸ್ವರ ಭಾಸ್ಕರ್ ಈಗಾಗಲೇ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಖುದ್ದು ಹೋಗಿ ಭಾಗವಹಿಸಿ ಬಂದಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆಯುತ್ತಿರುವ ಟ್ವಿಟರ್ ಆಂದೋಲನದಲ್ಲಿ ರಿಹಾನ್ನ, ಗ್ರೇಟಾ ಥನ್‌ಬರ್ಗ್ ಮತ್ತು ಮಿಯಾ ಖಲೀಫ್ ಸೇರಿದಂತೆ ಹಲವರ ಪರ ದನಿಯೆತ್ತಿದ್ದಾರೆ.

ಇನ್ನು ಫರಾಹ್ ಖಾನ್ ಅಲಿ ಟ್ವೀಟ್ ಮಾಡಿ “ರೀಲ್ ಲೈಫ್ ಹೀರೋಗಳು ಮತ್ತು ರಿಯಲ್ ಲೈಫ್ ಹೀರೋಗಳು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಎಗೆನೆಸ್ಟ್ ಪ್ರೊಪಗಾಂಡ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿರುವುದು ಮಾರ್ಕೆಟ್ ಗಿಮ್ಮಿಕ್ಕ್ ನಂತೆ ತೋರುತ್ತದೆ. ಏನೇ ಕಾರಣಗಳಿರಲಿ ಮತ್ತು ನಾನು ಅದನ್ನು ನಿರ್ಣಯಿಸಲು ಯಾರು ಅಲ್ಲ, ಆದರೆ ನೀವು ಅದನ್ನು ಒರಿಜಿನಲ್ ನಂತೆ ತೋರಿಸಲು ಪ್ರಯತ್ನಿಸಬಹುದಿತ್ತು. ಈಗ ನೀವು ಅದರಿಂದ ದೂರ ಸರಿದಿದ್ದೀರಿ. ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಎಂದು ಅವರು ಬರೆದಿದ್ದಾರೆ.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಅಕ್ಷಯ್ ಕುಮರ್, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತ ಕಪೂರ್, ಸುನೀಲ್ ಶೆಟ್ಟಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದರೆ ಕೆಲವರು ರೈತರ ಪರ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...