Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಸ್ವರಾಜ್ ಇಂಡಿಯಾ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಸ್ವರಾಜ್ ಇಂಡಿಯಾ ಖಂಡಿಸುತ್ತದೆ. ಅವರ ಮೇಲೆ ಹೊರಿಸಲಾಗಿರುವ ಆರೋಪಗಳು ಆಧಾರರಹಿತ ಎಂದು ಸ್ವರಾಜ್ ಇಂಡಿಯಾ ಪಕ್ಷವು ಹೇಳಿದೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಪರವಾಗಿ ಚಾಮರಸ ಮಾಲಿ ಪಾಟೀಲ, ಅಮ್ಜದ್ ಪಾಷ, ದೇವನೂರ ಮಹಾದೇವರವರು ಹೇಳಿಕೆ ಬಿಡುಗಡೆ ಮಾಡಿದ್ದು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿ ಬಂಧಿಸಲಾಗಿರುವುದು ಆಧಾರ ರಹಿತ. ದೊಡ್ಡಿಪಾಳ್ಯ ನರಸಿಂಹಮೂರ್ತಿ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ. ಪತ್ರಕರ್ತರಾಗಿ ಮತ್ತು ಬರಹಗಾರರಾಗಿಯೂ ಮನ್ನಣೆ ಗಳಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ನಿಂದ ಬಿಡುಗಡೆಯಾಗುತ್ತಿರುವ ನ್ಯಾಯಪಥ ಪತ್ರಿಕೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ರಾಯಚೂರಿನಲ್ಲಿ ‘ಪರ್ಯಾಯ ಮಾಧ್ಯಮಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ನರಸಿಂಹಮೂರ್ತಿ ಅವರನ್ನು ಪ್ರಮುಖ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅಲ್ಲಿಯೇ ರಾಯಚೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಅಕ್ಟೋಬರ್ 25ರಂದು ಬಂಧಿಸಲಾಗಿದೆ ಎಂದು ರಾಯಚೂರು ಪೊಲೀಸರು ಹೇಳಿಕೆ ನೀಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಕರೆ ತಂದು ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನರಸಿಂಹಮೂರ್ತಿ ಅವರ ಮೇಲೆ ದೇಶದ್ರೋಹದಂತಹ ಗಂಭೀರ ಪ್ರಕರಣಗಳನ್ನು ರಾಯಚೂರು ಪೊಲೀಸ್ ದಾಖಲಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಎರಡು ದಶಕಗಳ ಹಿಂದೆ ನಡೆದಿವೆ ಎನ್ನಲಾದ ನಕ್ಸಲೀಯ ಚಟವಟಿಕೆಗಳಿಗೆ ಗಂಟು ಹಾಕುವ ಪ್ರಯತ್ನ ಮಾಡಲಾಗಿದೆ. ನರಸಿಂಹಮೂರ್ತಿ ಅವರನ್ನು ಮೊದಲು ವಿಚಾರಣೆಗೆ ಎಂದು ವಶಕ್ಕೆ ಪಡೆದು, ನಂತರ ಬಂಧಿಸಿ, ಗಂಭೀರ ಆರೋಪ ಮಾಡುತ್ತಿರುವುದು, ಕರ್ನಾಟಕದಲ್ಲಿ ಪತ್ರಿಕೋದ್ಯಮದ ಅಭಿವ್ಯಕ್ತಿ ಮತ್ತು ರಾಜಕೀಯ ಪ್ರತಿರೋಧದ ಧ್ವನಿ ಅಡಗಿಸಲು ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಸಕ್ರಿಯವಾಗಿರುವ ವ್ಯಕ್ತಿ. ಕರ್ನಾಟಕದ ಜನರು ದೊಡ್ಡಿಪಾಳ್ಯ ಅವರನ್ನು ಕಳೆದ ಮೂರು ದಶಕಗಳಿಂದ ನೋಡಿದ್ದಾರೆ. ಪತ್ರಕರ್ತರಾಗಿ ‘ದಿ ಸಂಡೇ ಇಂಡಿಯನ್, ‘ಗೌರಿ ಲಂಕೇಶ್ ಪತ್ರಿಕೆ, ‘ನ್ಯಾಯಪಥ’ ಮುಂತಾದ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಗೌರವಯುತ ರಾಜಕೀಯ ಕಾರ್ಯಕರ್ತರೂ ಆಗಿದ್ದು, ಸದ್ಯಕ್ಕೆ ಸ್ವರಾಜ್ ಇಂಡಿಯಾ- ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ಬಹಿರಂಗವಾಗಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದ ನರಸಿಂಹಮೂರ್ತಿ ಅವರನ್ನು ‘ತಲೆಮರೆಸಿಕೊಂಡಿದ್ದರು’ ಎಂದು ಹೇಳುವುದು ಅತ್ಯಂತ ದುರದೃಷ್ಟಕರ ಮತ್ತು ಸೇಡಿನ ರಾಜಕಾರಣದ ಲಕ್ಷಣಗಳನ್ನು ತೋರಿಸುತ್ತದೆ ಎಂದಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವು ಪ್ರಗತಿಪರ, ಉದಾರವಾದಿ, ಪ್ರಜಾಪ್ರಭುತ್ವವಾದಿ ಹಾಗೂ ಅಂಬೇಡ್ಕರ್ ವಾದಿ  ಚಿಂತಕರು ಹಾಗೂ ಆಡಳಿತ ಪಕ್ಷದ ರಾಜಕೀಯ ನೀತಿ ಮತ್ತು ನಡತೆಗಳನ್ನು ಪ್ರಶ್ನಿಸುವ ಮತ್ತು ಬಹಿರಂಗವಾಗಿಯೇ ವಿಮರ್ಶಿಸುವ ಕಾರ್ಯಕರ್ತರ ಮೇಲೆ ನಡೆಯುತ್ತಿರವ ಇನ್ನೊಂದು ದಾಳಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕು ಕಾರ್ಯಕರ್ತರ ಮತ್ತು ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ಹೊರಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಮೇಲೆ ಮಾಡಲಾಗಿರುವ ಆರೋಪಗಳ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯಾಗಬೇಕು. ಕಾನೂನಾತ್ಮಕವಾಗಿ ನರಸಿಂಹಮೂರ್ತಿ ಅವರ ವಿಚಾರಣಾಪೂರ್ವ ಬಂಧನವನ್ನು ತಕ್ಷಣ ಕೊನೆಗೊಳಿಸಿ ಬಿಡುಗಡೆ ಮಾಡಬೇಕು ಎಂದು ಸ್ವರಾಜ್ ಇಂಡಿಯಾ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...