Homeಕರ್ನಾಟಕಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಅಕ್ಟೋಬರ್ 24ರ ಗುರುವಾರ ಪತ್ರಕರ್ತ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿಚಾರಣೆಗೆಂದು ಕರೆದೊಯ್ದಿದ್ದ ರಾಯಚೂರು ಪೊಲೀಸರು ನಿನ್ನೆ ಕೋರ್ಟಿಗೆ ಹಾಜರುಪಡಿಸಿದ್ದಾರೆ. ನವೆಂಬರ್ 06ಕ್ಕೆ ವಿಚಾರಣೆಯನ್ನು ಮುಂದೂಡಿರುವ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿನೋದ, ಮೂರ್ತಿ, ಬಸವರಾಜು ಎಂದೆಲ್ಲಾ ಹೆಸರುಗಳಿಂದ ಆರೋಪಿಸಿರುವ ಪೊಲೀಸರು 1994ರ ರಾಯಚೂರು ಗ್ರಾಮೀಣ (ಯಾಪಲದಿನ್ನಿ) ಪೊಲೀಸ್ ಠಾಣೆಯಲ್ಲಿ ಮೂರು ಕೇಸುಗಳನ್ನು, ರಾಯಚೂರು ನೇತಾಜಿ ನಗರ ಠಾಣೆಯಲ್ಲಿ ಒಂದು ಕೇಸನ್ನು ಹಾಕಿದ್ದಾರೆ. ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಸುಮಾರು 21 ಸೆಕ್ಷನ್ ಗಳನ್ನು ಹಾಕಿದ್ದಾರೆ. ಅಲ್ಲದೇ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ರಾಯಚೂರಿನಲ್ಲಿ ನಡೆದ ಗೌರಿಲಂಕೇಶ್ ಬಳಗದ ವಿಚಾರಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯರವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮತ್ತು ಡಿವೈಎಸ್ಪಿ ಶೀಲವಂತರ್ ಸೇರಿದಂತೆ ಹಲವು ಪೊಲೀಸರು ಒಂದು ದಿನಗಳ ಕಾಲ ಸತತ ವಿಚಾರಣೆ ನಡೆಸಿದ್ದಾರೆ. ಅವರ ಮೇಲಿನ ಎಲ್ಲಾ ಆರೋಪಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಿರಾಕರಿಸಿದ್ದಾರೆ.

ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳು

ನರಸಿಂಹಮೂರ್ತಿಯವರ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕುಮಾರ್ ಸಮತಳರವರು ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಸಿಂಹಮೂರ್ತಿಯವರು 1990ರಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದು ಬಿಎಂಐಸಿ ವಿರೋಧಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಅವರ ಅಣ್ಣನೊಂದಿಗೆ ಸೇರಿ ರೇಷ್ಮೆ ಮಿಲ್ ವ್ಯವಹಾರ ನಡೆಸಿದ್ದಾರೆ. ಇವೆಲ್ಲದಕ್ಕೂ ಸಾಕಷ್ಟು ದಾಖಲೆಗಳಿರುವುದಲ್ಲದೇ ರಾಯಚೂರಿನ ಕೇಸಿಗೂ ಅವರಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಯಾರದೋ ಮೇಲಿನ ಕೇಸುಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರ ಮೇಲೆ ಹಾಕಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಅಲ್ಲದೇ ಪೊಲೀಸರು ಉಲ್ಲೇಖಿಸಿರುವ ಎಲ್ಲಾ ಕೇಸುಗಳು ಈಗಾಗಲೇ ವಿಚಾರಣೆ ನಡೆದು ಖುಲಾಸೆಗೊಂಡಿವೆ. ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂತವರ ಮೇಲೆ ಸುಳ್ಳು ಕೇಸು ಹಾಕಿರುವುದು ಸರಿಯಲ್ಲ, ಪೊಲೀಸರು ಕೂಡಲೇ ಕೇಸನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನರಸಿಂಹಮೂರ್ತಿಯವರ ಬಂಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

ಪೊಲೀಸರು ಖುಲಾಸೆಯಾಗಿರುವ ಕೇಸು ಹಾಕಿರುವುದು ಮತ್ತು 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿರುವುದು ಬಹಳಷ್ಟು ಜನರ ವಿರೋಧಕ್ಕೆ ಗುರಿಯಾಗಿದೆ. ಪೊಲೀಸರ ನಡೆಯನ್ನು ಹಲವಾರು ಜನರು ವ್ಯಂಗ್ಯ ಮಾಡಿ ಟ್ರೋಲ್ ಮಾಡಿದರೆ ಮತ್ತಷ್ಟು ಜನರ ಸರ್ಕಾರದ  ದಮನಕಾರಿ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ, ಅದು ಬೇರೆ ವಿಷಯ. ಆದರೆ ಸರ್ಕಾರ ಕೂಡಲೇ‌ ಅವರನ್ನು ಬಿಡುಗಡೆ‌ ಮಾಡಿ ಕ್ಷಮೆ ಕೋರಬೇಕು.‌ ಯಾಕೆಂದರೆ ಬಂಧಿಸಿದ ಕಾರಣ, ಕೇಸು, ಎಸ್ ಪಿ ಕೊಟ್ಟ‌ ಸಮರ್ಥನೆ ಎಲ್ಲವೂ ನಗೆಪಾಟಲಿಗೀಡಾಗುವಂಥದ್ದು. ನಾಗರಿಕ ಸರ್ಕಾರ ಯಾವುದೂ ಈ ಬಗೆಯ‌ ಬ್ಲಂಡರ್ ಮಾಡಲು ಸಾಧ್ಯವಿಲ್ಲ. ನಿಮ್ಮದೇ ಮರ್ಯಾದೆ ಉಳಿಸಿಕೊಳ್ಳಲಾದರೂ ಕೂಡಲೇ ಬಿಡುಗಡೆ ಮಾಡಿ ಎಂದು ಪತ್ರಕರ್ತರಾದ  ದಿನೇಶ್ ಕುಮಾರ್ ದಿನೂರವರು ಒತ್ತಾಯಿಸಿದ್ದಾರೆ.

“ಸರಕಾರ ಬಡವರಿಗಾಗಿ ರೂಪಿಸಿದ ಯೋಜನೆಗಳು ಬಡವರನ್ನು ತಲುಪುತ್ತಿಲ್ಲ” ಎಂದು ಹೇಳುವುದು ಐಪಿಸಿಯ ಯಾವುದೋ ಕಲಂ ಪ್ರಕಾರ ಗಂಭೀರ ಅಪರಾಧವಂತೆ. ಎಷ್ಟು ಯೋಚಿಸಿದರೂ ಅದು ಯಾವ ಕಲಂ ಎಂಬುದು ನೆನಪಿಗೆ ಬರುತ್ತಿಲ್ಲ. ಯಾರಿಗಾದರೂ ಗೊತ್ತಿದ್ದರೆ ಹೇಳಿ” ಎಂದು ಹಿರಿಯರಾದ ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರನ್ನು ಕಳೆದ ೨೦ ವರ್ಷಗಳಿಂದ ‘ ತಲೆಮರೆಸಿಕೊಂಡಿದ್ದರೆಂದು’ ಹೇಳಿ, ರಾಯಚೂರು ಪೋಲೀಸರು ಬಂಧಿಸಿರುವುದು ಆಘಾತಕಾರಿಯಾಗಿದೆ. ಇದು ಈಗಾಗಲೇ ದೇಶದಾದ್ಯಂತ ನಡೆಯುತ್ತಿರುವ ಇಂಥದ್ದೇ ಹಲವು ಘಟನೆಗಳಿಗೆ ಪೂರಕವಾಗಿದೆ ಮಾತ್ರವಲ್ಲ ದೇಶಕ್ಕೊಂದು ಸಂದೇಶವನ್ನೂ ರವಾನೆ ಮಾಡುತ್ತಿದೆ. ಇಂಥ ಘಟನೆಗಳು ಸಾಮಾಜಿಕ ಚಿಂತ‌ನಾ ಕ್ರಮಗಳನ್ನೇ ಅಳಿಸಿ ಹಾಕುವ ಪ್ರಯತ್ನಗಳಾಗಿವೆ.
ನಾವೆಲ್ಲ ದಿನಾ ಪೋಲಿಸ್ ಸ್ಟೇಷನ್ ಗೆ ಹೋಗಿ ಸಹಿಹಾಕಿ ಬಂದರೆ ಮಾತ್ರ ‘ ತಲೆಮರೆಸಿಕೊಂಡಿಲ್ಲ’ ಎಂಬರ್ಥ ಹೊರಡುವ ಕ್ರಿಯೆಗಳಿವು.
ನಾವೆಲ್ಲರೂ ದೊಡ್ಡಿಪಾಳ್ಯರ ಬೆಂಬಲಕ್ಕೆ ನಿಲ್ಲುವುದರ ಮೂಲಕ ನಮ್ಮ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳೋಣ.
ಯಾರಿಗೂ ಜೀವಂತ ಆತ್ಮಗಳನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ದೆಹಲಿಯ ಜೆ.ಎನ್‌.ಯು ಪ್ರಾಧ್ಯಪಾಕರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ತಿಳಿಸಿದ್ದಾರೆ.

ಈಗ ಕಡಿಮೆಯೆಂದರೂ 15-20 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿ ಚಳವಳಿಗಳಲ್ಲಿ, ಪತ್ರಕರ್ತರಾಗಿ, ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ನಾಯಕರಾಗಿ ಇಡೀ ರಾಜ್ಯಕ್ಕೇ ಚಿರಪರಿಚಿತರಾಗಿರುವ ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಏಕಾಏಕಿಯಾಗಿ ಪೊಲೀಸರು ಬಂಧಿಸಿದ್ದಾರೆ. 20 ವರ್ಷಗಳ ಹಿಂದೆ ಅವರು ನಕ್ಸಲೀಯ ಚಳುವಳಿಯಲ್ಲಿದ್ದರಂತೆ ಹೀಗಾಗಿ ಬಂಧಿಸಿದ್ದಾರಂತೆ. ಈ 20 ವರ್ಷಗಳ ಹಿಂದೆ ರಾಯಚೂರಿನಲ್ಲಿ ಇದ್ದ ಯಾರೋ ವಿನೋದ್ ಎಂಬ ನಕ್ಸಲೀಯರ ಹೆಸರಿಗೂ ದೊಡ್ಡಿಪಾಳ್ಯ ಮೂರ್ತಿಯವರಿಗೂ ಸಂಬಂಧ ಕಲ್ಪಿಸಿ ಈಗ ಬಂಧಿಸಿರುವುದು ಎಷ್ಟು ಸರಿ? ದೊಡ್ಡಿಪಾಳ್ಯ ನರಸಿಂಹ ಮೂರ್ತಿ ನನಗೆ ಪರಿಚಯವಾಗಿ ಈಗ ಸುಮಾರು 15 ವರ್ಷಗಳಾಯಿತು. ಅಂದಿನಿಂದಲೂ ಬೆಂಗಳೂರಿನಲ್ಲಿ ಅವರು ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದು, ನಮಗೆಲ್ಲ ಆತ್ಮೀಯ ಗೆಳೆಯರಾಗಿಯೂ ಇದ್ದಾರೆ.

2011ರಿಂದ ಕೆಲವು ವರ್ಷಗಳ ಕಾಲ ನಾವು ದ ಸಂಡೆ ಇಂಡಿಯನ್ ಪತ್ರಿಕೆಯಲ್ಲಿ ಸಹೋದ್ಯೋಗಿಗಳಾಗಿಯೂ ಕೆಲಸ ಮಾಡಿದ್ದೆವು. ನಂತರ ಅವರು ಗೌರಿ ಲಂಕೇಶ್ ಪತ್ರಿಕೆಯಲ್ಲಿ ಸಕ್ರಿಯವಾಗಿದ್ದರು. ಕಾನೂನುಬದ್ಧವಾಗಿ ದಶಕಗಳಿಂದಲೂ ಚಳವಳಿಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಸುಳ್ಳುಕೇಸು ಹಾಕಿ ಜೈಲಿಗೆ ಕಳಿಸುವ ಕೆಲಸ ಶುರುವಾಗಿದೆಯೇ?  ಹೀಗೆ ಹಸಿ ಸುಳ್ಳಿನ ಮೇಲೆ ರಾಜಕೀಯ ಕಾರ್ಯಕರ್ತರೊಬ್ಬರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಯಾವುದೋ ರಾಜಕೀಯ ಒತ್ತಡದಿಂದಲೇ ಪೊಲೀಸರು ಹೀಗೆ ಮಾಡಿರಬಹುದೇ? ಏನೇ ಆಗಲಿ ಇದು ಖಂಡಿನೀಯ. ಕೂಡಲೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ಅಭಿಪ್ರಾಯಪಟ್ಟಿದ್ದಾರೆ.

KVS ಆಯೋಜಿಸಿದ ಭಗತ್ ಸಿಂಗ್ ಹುತಾತ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಹೋರಾಟಗಾರ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸ್ಥಳೀಯ ಪೋಲಿಸ್ ಇನ್ಸ್ಪೆಕ್ಟರ್ ಅವರ ಜೊತೆಗೂಡಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ್ದ ಚಿತ್ರಗಳಿವು. ಇಂತಹ ನೂರಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಮತ್ತು ಭಾಗವಹಿಸಿದ್ದಾರೆ. ಜನಪರವಾದ ಹೋರಾಟಗಳಲ್ಲಿ ಸದಾ ಸಕ್ರಿಯವಾಗಿ ದುಡಿಯುವ ವರ್ಗದವರ ಪರ ಶ್ರಮಿಸುತ್ತಿರುವ ನಮ್ಮ ಮೂರ್ತಿ ಅಣ್ಣ ಬದ್ಧತೆವುಳ್ಳ ಪತ್ರಕರ್ತರೂ ಹೌದು ಎಂದು ನಿಮಗೆಲ್ಲಾ ಗೊತ್ತೇಯಿದೆ ಆದರೂ ಸುಳ್ಳು ಹೇಳುವುದನ್ನು ಪೋಲಿಸರಿಂದ ಕಲಿಯಿರಿ ಎಂದು ಸರೋವರ್ ಬೆಂಕಿಕೆರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...