Homeಕರ್ನಾಟಕಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣಭಟ್‌ ಸೇರಿ ಐವರಿಗೆ ಮುರುಘಾಶ್ರೀ ಪ್ರಶಸ್ತಿ

ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣಭಟ್‌ ಸೇರಿ ಐವರಿಗೆ ಮುರುಘಾಶ್ರೀ ಪ್ರಶಸ್ತಿ

ಅಕ್ಟೋಬರ್ 24 ರಂದು ನಡೆಯುವ 'ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠವು ನೀಡುವ ಮುರುಘಾಶ್ರೀ ಪ್ರಶಸ್ತಿಗೆ ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣಭಟ್‌, ನಟ ‘ಮುಖ್ಯಮಂತ್ರಿ’ ಚಂದ್ರು ಸೇರಿ ಐವರು ಆಯ್ಕೆಯಾಗಿದ್ದಾರೆ.

ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ ಮತ್ತು ಎಸ್, ಷಣ್ಮುಖಪ್ಪನವರು ಸಹ ಈ ಭಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು ಅಕ್ಟೋಬರ್ 24 ರಂದು ನಡೆಯುವ ‘ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮದ್ಯಪಾನ ವಿರೋಧಿ ಮತ್ತು ಮಹಿಳೆಯರ ಪರವಾಗಿನ ಹೋರಾಟಕ್ಕಾಗಿ ಸ್ವರ್ಣ ಭಟ್, ರಂಗಭೂಮಿ ಕ್ಷೇತ್ರದ ಕೊಡುಗೆಗಾಗಿ ಮುಖ್ಯಮಂತ್ರಿ ಚಂದ್ರುರವರು, ನ್ಯಾಯಾಂಗದ ಸೇವೆಗಾಗಿ ಎಚ್.ಬಿಲ್ಲಪ್ಪ, ಬಸವತತ್ವದ ಪ್ರಚಾರಕ್ಕಾಗಿ ಶಿವಾನಂದ ಸ್ವಾಮೀಜಿ ಮತ್ತು ಧರ್ಮದರ್ಶಿ ಎಸ್.ಷಣ್ಮುಖಪ್ಪನವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿಯಾಗಿ ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಹತ್ತು ಭಾಷೆ ಮಾತಾಡಬಲ್ಲ 17 ವರ್ಷದ ಹರಿಯಾಣದ ಜಾಹ್ನವಿ ಪನ್ವಾರ್‌ರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರು ತಲಾ 25 ಸಾವಿರ ನಗದು ಮತ್ತು ಫಲಕ ಪಡೆಯಲಿದ್ದಾರೆ ಎಂದರು.


ಇದನ್ನೂ ಓದಿ: ಮಹಿಳೆಯರ ಈ ಮಹತ್ವದ ಆಂದೋಲನದ ಜೊತೆ ನಾನಿದ್ದೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...