Homeಕರ್ನಾಟಕಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

ಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

- Advertisement -
- Advertisement -

ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಕೆಲವು ದಿನಗಳಿಂದ ಮುಂಬೈಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರನ್ನು ಮನವೊಲಿಸಲು ಟ್ರಬಲ್ ಶೂಟರ್ ಎಂದು ಕರೆಯಲ್ಪಡುವ ಡಿ.ಕೆ ಶಿವಕುಮಾರ್ ಸಹ ಮುಂಬೈ ತೆರಳಿದ್ದು, ಅಲ್ಲಿ ಅವರನ್ನು ಹೋಟೆಲ್ ಒಳಗೆ ಬಿಡದೇ ತಡೆದುದ್ದು, ಡಿ.ಕೆ.ಶಿ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಡಿ.ಕೆ.ಶಿಯನ್ನು ವಶಕ್ಕೆ ಪಡೆದಿದ್ದಾರೆ. ಇವೆಲ್ಲಾ ನಿಮಗೆ ಗೊತ್ತಿರುವ ವಿಷಯಗಳು.

ಡಿ.ಕೆ ಶಿವಕುಮಾರ್ ಹೋಟೆಲ್ ಮುಂಭಾಗದಿಂದ ಕದಲುವುದಿಲ್ಲ ಎಂದು ಹಠ ಹಿಡಿದು ನಿಂತಿರುವಾಗ, ಅವರನ್ನು ಪೊಲೀಸರು ವಶಕ್ಕೆ ಪಡೆದಾಗ ಯೂಸ್‍ಲೆಸ್ ಮುಂಬೈ ಕಾಂಗ್ರೆಸ್ ಘಟಕ ಏಕೆ ಅವರನ್ನು ಬೆಂಬಲಿಸುತ್ತಿಲ್ಲ? ರಾಷ್ಟ್ರೀಯ ಕಾಂಗ್ರೆಸ್ ನಿಮಗೆ ಕರ್ನಾಟಕ ಸರ್ಕಾರ ಉಳಿಯುವುದು ಬೇಡವೇ? ಎಂದು ಸ್ವಾತಿ ಚರ್ತುವೇದಿ ಸರಣಿ ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆಯಾಗಿರುವ ಸ್ವಾತಿ ಚತುರ್ವೇದಿಯವರನ್ನು ಈ ಹಿಂದೆ ಬಿಜೆಪಿಯ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಟ್ರೋಲ್ ಮಾಡಿದ್ದರು. ವ್ಯಕ್ತಿಗತ ನಿಂದನೆ ಮಾಡಿದ್ದರು. ಆಗ ಅವರು “ಐ ಆಮ್ ಎ ಟ್ರೋಲ್” ಎಂಬ ಪುಸ್ತಕ ಬರೆದಿದ್ದು ಅದು ಸಾಕಷ್ಟು ಪ್ರಸಿದ್ದಿಯಾಗಿತ್ತು.

ಇನ್ನು ಮೂರು ತಿಂಗಳಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಿದೆ. ಆದರೂ ಮಹಾರಾಷ್ಟ್ರ ಕಾಂಗ್ರೆಸ್ ಇಲ್ಲಿ ಡಿ.ಕೆ ಶಿವಕುಮಾರ್ ನೆರವಿಗೆ ಬಂದಿಲ್ಲ. ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಇದಿಯೋ ಇಲ್ಲವೋ? ಪ್ರಿಯ ರಾಹುಲ್ ಗಾಂಧಿಯವರೆ ದಯವಿಟ್ಟು ಗಮನಕೊಡಿ ಎಂದಿದ್ದಾರೆ.

ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಡಿ.ಕೆ ಶಿವಕುಮಾರ್‍ರನ್ನು ಆನಂತರ ಭೇಟಿಯಾಗಿದ್ದಾರೆ. ಈ ಮೊದಲು ಪೋನ್ ಮಾಡಿ ಮಾತಾಡಿದ್ದೇನೆ ಎಂದು ಟ್ವೀಟ್ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿರುವ ಸ್ವಾತಿಯವರು ನೀವೇನಾ ಕಾಂಗ್ರೆಸ್ ನ ಭಾವಿ ಅಧ್ಯಕ್ಷ ಎಂದು ವ್ಯಂಗ್ಯವಾಡಿದ್ದಾರೆ.

ನಂತರ ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿಮ್ಮ ಕೆಲವು ನಾಯಕರು ಡಿ.ಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಉಳಿದವರೆಲ್ಲಿ ಎಂದು ಟ್ವೀಟ್ ಮಾಡಿದ ಸ್ವಾತಿಯವರು ರಾಹುಲ್ ಗಾಂಧಿಯವರೆ ನೀವೇ ಖುದ್ದಾಗಿ ಡಿ.ಕೆ ಶಿವಕುಮಾರ್ ರವರ ಜೊತೆಗಿರಬೇಕು. ನಿಮ್ಮ ಪಕ್ಷದ ಮುಖಂಡರು ಪರಸ್ಪರ ಜಗಳವಾಡುತ್ತಿದ್ದಾರೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...