Homeಕರ್ನಾಟಕಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ - ಸಿದ್ದರಾಮಯ್ಯ

ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ?...

- Advertisement -
- Advertisement -

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನಿನ್ನೆ ವಿಧಾನಸಭೆಯಲ್ಲಿ ಮಂಡಿಸಿದ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರ್ಯಾಲೋಚಿಸುವಂತೆ ಸೂಚಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧರಣಿಯನ್ನು ಮುಂದುವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದರು.

ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, “1964ರಿಂದಲೂ ನಮ್ಮ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈಗ ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುತ್ತಿದ್ದೇವೆ ಅಷ್ಟೇ. ಅಂತರ್‌ ರಾಜ್ಯ ನಿರ್ಬಂಧ, ಜಾನುವಾರುಗಳ ಖರೀದಿಗೆ ಪರವಾನಿಗೆ ಪಡೆಯುವುದು, ಅಕ್ರಮವಾಗಿ ಸಾಗಾಟ ಮಾಡಿದರೆ ಅದನ್ನು ಅಪರಾಧವೆಂದು ಪರಿಗಣಿಸುವುದು, ಶಿಕ್ಷೆ ಹಾಗೂ ದಂಡಕ್ಕೆ ಅವಕಾಶ ಕಲ್ಪಿಸಿದ್ದೇವೆ” ಎಂದರು.

ಕೊನೆಗೂ ಗದ್ದಲದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತು.


ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...