Homeಕರ್ನಾಟಕರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ತುಟ್ಟಿಭತ್ಯೆ ಹೆಚ್ಚಿಸಿ ಅಧಿಕೃತ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ; ತುಟ್ಟಿಭತ್ಯೆ ಹೆಚ್ಚಿಸಿ ಅಧಿಕೃತ ಆದೇಶ

- Advertisement -
- Advertisement -

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಬಂದಿದೆ. “2023 ಜನವರಿ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 31ರಿಂದ 35ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರದೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಮೊದಲ ಸಿಹಿ ಸುದ್ದಿ ನೀಡಿತ್ತು. ಕಳೆದ ಒಂದು ತಿಂಗಳಿನಿಂದ ರಾಜ್ಯ ನೌಕರರು ತುಟ್ಟಿ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದರು. ಕೇಂದ್ರ ಸರ್ಕಾರದಂತೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಹಿ ಹಾಕಿದ್ದರು. ಆರ್ಥಿಕ ಇಲಾಖೆಯು ಅಧಿಕೃತ ಆದೇಶವನ್ನು ಹೊರಡಿಸುವುದು ಬಾಕಿ ಇತ್ತು.

ಏಪ್ರಿಲ್ 3ರಂದು ಕೇಂದ್ರ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು. ಕೇಂದ್ರ ಸರ್ಕಾರ ಹೆಚ್ಚಳ ಮಾಡುತ್ತಿದ್ದಂತೆಯೇ ರಾಜ್ಯ ಸರ್ಕಾರ ಕೂಡ ಹೆಚ್ಚಳ ಮಾಡುವುದು ವಾಡಿಕೆಯಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.

ಜನವರಿ 1ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ. 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ ನೂತನ ಸರ್ಕಾರವನ್ನೂ ಕೋರಿದ್ದರು. ಬುಧವಾರ ಈ ಸಂಬಂಧದ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದರು.

ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಧನ್ಯವಾದ ತಿಳಿಸಿದ್ದಾರೆ. “ಶೇ. 4 ಬಾಕಿ ತುಟ್ಟಿಭತ್ಯೆ ಆದೇಶವನ್ನು ದಿನಾಂಕ 01-01- 2023 ರಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆಯು ಆದೇಶ ಹೊರಡಿಸಲಿದೆ” ಎಂದು ಷಡಕ್ಷರಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಸಂಸತ್ ಉದ್ಘಾಟನೆಯಲ್ಲಿ ನಡೆಸಿದ ಆಚರಣೆಗಳು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿವೆ: ಶರದ್ ಪವಾರ್ ಆಕ್ರೋಶ

7ನೇ ವೇತನ ಆಯೋಗದ ಮಧ್ಯಂತರ ಪರಹಾರವಾಗಿ ಶೇ.17 ವೇತನ ಹೆಚ್ಚಳ ಮಾಡಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹೆಚ್ಚಳವನ್ನು ಏಪ್ರಿಲ್ ತಿಂಗಳ ವೇತನದಲ್ಲಿಯೇ ಜಾರಿಗೆ ತರಲಾಗಿದೆ.

ರಾಜ್ಯ ಸರ್ಕಾರವು ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದು 2022ರ ಜುಲೈ1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಿತ್ತು. ಅದಕ್ಕೂ ಮೊದಲು ಏಪ್ರಿಲ್‌ನಲ್ಲಿ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಜನವರಿ 1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...