Homeರಾಷ್ಟ್ರೀಯಸ್ವಿಸ್‌ ಬ್ಯಾಂಕ್‌: 30,849 ಕೋಟಿ ರೂ.ಗೆ ಏರಿಕೆಯಾದ ಭಾರತೀಯರ ಹಣ; 14 ವರ್ಷಗಳಲ್ಲೇ ಹೆಚ್ಚು!

ಸ್ವಿಸ್‌ ಬ್ಯಾಂಕ್‌: 30,849 ಕೋಟಿ ರೂ.ಗೆ ಏರಿಕೆಯಾದ ಭಾರತೀಯರ ಹಣ; 14 ವರ್ಷಗಳಲ್ಲೇ ಹೆಚ್ಚು!

- Advertisement -
- Advertisement -

2021 ರಲ್ಲಿ ಭಾರತೀಯರು ಸ್ವಿಸ್ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಹಣದ ಮೊತ್ತವೂ 30,849 ಕೋಟಿ ರೂ.ಗಳಿಗಿಂತ ಹೆಚ್ಚಾಗಿದ್ದು, ಇದು ಕಳೆದ 14 ವರ್ಷಗಳಲ್ಲೇ ಗರಿಷ್ಠ ಏರಿಕೆಯಾಗಿದೆ ಎಂದು ಗುರುವಾರ ಸ್ವಿಟ್ಜರ್ಲೆಂಡ್‌ನ ಸೆಂಟ್ರಲ್ ಬ್ಯಾಂಕ್ ಬಿಡುಗಡೆ ಮಾಡಿದ ವಾರ್ಷಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

2014 ರ ಲೋಕಸಭಾ ಚುನಾವಣೆಯ ವೇಳೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಹಣದ ಬಗ್ಗೆ ಭಾರೀ ಚರ್ಚೆಯಾಗಿತ್ತು. ಬಿಜೆಪಿಯು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಭಾರತೀಯ ಹಣವನ್ನು ಭಾರತಕ್ಕೆ ತರುವುದಾಗಿ ಭರವಸೆಗಳನ್ನು ನೀಡಿತ್ತು. ಆದರೆ, ಇದೀಗ ಬಿಜೆಪಿಯ ಮೋದಿ ನೇತೃತ್ವವು ಎರಡನೆ ಬಾರಿಗೆ ಆಡಳಿತ ನಡೆಸುತ್ತಿದೆ. ಆದರೂ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯ ಜನರ, ಸಂಘ-ಸಂಸ್ಥೆಗಳು ಇರಿಸಿರುವ ಹಣದ ಮೊತ್ತ ಏರಿಕೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2018 ಮತ್ತು 2019 ರಲ್ಲಿ ಭಾರತೀಯರು ಸ್ವಿಸ್‌ ಬ್ಯಾಂಕಿನಲ್ಲಿ ಇಟ್ಟಿದ್ದ ಹಣವು ಕುಸಿದಿತ್ತು, ಆದರೆ ಇದೀಗ ಸತತ ಎರಡು ವರ್ಷಗಳಿಂದ ಮತ್ತೆ ಏರಿಕೆಯಾಗಿವೆ. 2020 ರಲ್ಲಿ ಭಾರತೀಯರ ಒಟ್ಟು ನಿಧಿಗಳು 20,700 ಕೋಟಿ ರೂ. ಹೆಚ್ಚಾಗಿತ್ತು.

ಭಾರತ ಮತ್ತು ಸ್ವಿಟ್ಜರ್ಲೆಂಡ್, ಹಣಕಾಸು ಖಾತೆ ಮಾಹಿತಿಯ ಸ್ವಯಂಚಾಲಿತ ಹಂಚಿಕೆಗಾಗಿ, ಎರಡು ರಾಷ್ಟ್ರಗಳ ನಡುವಿನ ತೆರಿಗೆ ವಿಷಯಗಳಲ್ಲಿ ‘ಹಣಕಾಸು ಖಾತೆ ಮಾಹಿತಿಯ ಸ್ವಯಂಚಾಲಿತ ವಿನಿಮಯ’(AEOI)ವನ್ನು ಸಕ್ರಿಯಗೊಳಿಸಲು 2016ರ ನವೆಂಬರ್ 22 ರಂದು ಜಂಟಿ ಘೋಷಣೆಗೆ ಸಹಿ ಹಾಕಿದ್ದವು. ಸ್ವೀಕರಿಸಿದ ಮಾಹಿತಿಯ ಬಳಕೆ ಮತ್ತು ಬಹಿರಂಗಪಡಿಸುವಿಕೆಯು ಭಾರತ-ಸ್ವಿಟ್ಜರ್ಲೆಂಡ್ ‘ತೆರಿಗೆ ಒಪ್ಪಂದದ ಗೌಪ್ಯತೆಯ ನಿಬಂಧನೆ’ಗಳ ಮೂಲಕ ನಿಯಂತ್ರಿಸಲ್ಪಡುತ್ತದೆ.

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

239 ಬ್ಯಾಂಕ್‌ಗಳನ್ನು ಒಳಗೊಂಡಿರುವ ಸ್ವಿಸ್ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಒಟ್ಟು ಗ್ರಾಹಕರ ಠೇವಣಿಗಳು 2021 ರಲ್ಲಿ ಸುಮಾರು 2.25 ಟ್ರಿಲಿಯನ್‌ ಸ್ವಿಸ್ ಫ್ರಾಂಕ್‌ಗೆ ಏರಿದೆ. ವಿದೇಶಿ ಗ್ರಾಹಕರು ಹಾಗೂ ಸಂಸ್ಥೆಗಳು ಸೇರಿದಂತೆ ಒಟ್ಟಾರೆ ನಿಧಿಗಳು ಸುಮಾರು 1.5 ಟ್ರಿಲಿಯನ್‌ ಸ್ವಿಸ್‌ ಫ್ರಾಂಕ್‌ಗೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...