Homeಕರ್ನಾಟಕಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ...

ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

- Advertisement -
- Advertisement -

ಈದ್ ಮೀಲಾದ್‌‌ ಕಾರ್ಯಕ್ರಮದ ವೇಳೆ ಕತ್ತಿ ಪ್ರದರ್ಶಿಸಿದ ಆರೋಪದಲ್ಲಿ ಐವರು ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಕ್ಟೋಬರ್ 9ರ  ಭಾನುವಾರದಂದು ಬೆಂಗಳೂರು ದಕ್ಷಿಣದ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೊಗಳ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.

ಪುರಾವೆಗಳ ಆಧಾರದ ಮೇಲೆ ಕ್ರಮಕೈಗೊಂಡಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದರೂ, ಇದೇ ರೀತಿಯ ಮೆರವಣಿಗೆಯಲ್ಲಿ ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಶಸ್ತ್ರಾಸ್ತ್ರಗಳನ್ನು ಝಳಪಿಸುತ್ತಿರುವ ಇತರ ಪ್ರಕರಣಗಳ ಬಗ್ಗೆ ಪೊಲೀಸರು ಏಕೆ ಕ್ರಮ ಕೈಗೊಂಡಿಲ್ಲ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಕ್ಟೋಬರ್ 9 ರಂದು ಸಂಜೆ 5:45 ರ ಸುಮಾರಿಗೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಮಾರಂಭದಲ್ಲಿ ಕೆಲವು ಕತ್ತಿಗಳು ಮತ್ತು ಮಾರಕಾಸ್ತ್ರಗಳನ್ನು ಬಳಸಲಾಯಿತು. ಅಲ್ಲಿ ಒಟ್ಟು 24 ಜನರಿದ್ದರು, ಅದರಲ್ಲಿ 18 ಮಂದಿಯನ್ನು ನಾವು ಬಂಧಿಸಿದ್ದೇವೆ” ಎಂದು ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತ ಪಿ. ಕೃಷ್ಣಕಾಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

“ನಾವು ಇನ್ನೂ ಐದು ಜನರನ್ನು ಹುಡುಕುತ್ತಿದ್ದೇವೆ. ಮೆರವಣಿಗೆ ಪ್ರಾರಂಭವಾದ ನಂತರ ಕೆಲವು ಜನರು ಒಟ್ಟುಗೂಡಿ ಕತ್ತಿಗಳೊಂದಿಗೆ ನೃತ್ಯ ಮಾಡಿದ್ದಾರೆ. ಬಂಧಿತರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಐವರು ಅಪ್ರಾಪ್ತರನ್ನು ಬಾಲಾಪರಾಧಿಗಳೆಂದು ಪರಿಗಣಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಸೇರಿದಂತೆ ಇತರ ಹಿಂದೂ ಬಲಪಂಥೀಯ ಸಂಘಟನೆಗಳು ಮೆರವಣಿಗೆಯಲ್ಲಿ ಆಯುಧಗಳನ್ನು ಬಳಸಿದ ಇದೇ ರೀತಿಯ ಪ್ರಕರಣಗಳಲ್ಲಿ ಮೌನವಾಗಿದ್ದ ಪೊಲೀಸರು, ಮುಸ್ಲಿಮರ ವಿಚಾರದಲ್ಲಿ ಬೇಗನೇ ಕಾರ್ಯಪ್ರವೃತ್ತರಾಗುತ್ತಾರೆ, ಇದು ಪೊಲೀಸರ ಬೂಟಾಟಿಕೆ ಅಲ್ಲದೆ ಎಂಬ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಎತ್ತಿದ್ದಾರೆ.

ತೀರಾ ಇತ್ತೀಚಿಗೆ ಉಡುಪಿಯಲ್ಲಿ ಅಕ್ಟೋಬರ್ 2ರಂದು ದುರ್ಗಾ ದೌಡ್ ಮೆರವಣಿಗೆಯಲ್ಲಿ ಕೂಡಾ ಮಾರಕಾಸ್ತ್ರಗಳು ಕಂಡುಬಂದಿತ್ತು. ಹಿಂದೂ ಜಾಗರಣ ವೇದಿಕೆಯು 10 ಸಾವಿರಕ್ಕೂ ಹೆಚ್ಚು ಜನರನ್ನು ಸಂಘಟಿಸಿ ಹಿಂದೂ ರಾಷ್ಟ್ರಕ್ಕಾಗಿ ಘೋಷಣೆಗಳನ್ನು ಕೂಗಿತ್ತು. ಮೆರವಣಿಗೆಯನ್ನು ಮುನ್ನಡೆಸುತ್ತಿರುವ ಕೆಲವರು ಕತ್ತಿಗಳನ್ನು ಝಳಪಿಸುತ್ತಿರುವುದು ಕೂಡಾ ಕಂಡುಬಂದಿತು. ಈ ರ್‍ಯಾಲಿಯಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್‌ ಸೇರಿದಂತೆ ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ಮುಸ್ಲಿಮರ ವಿಚಾರದಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಪಿ, ಬೆಂಗಳೂರಿನಲ್ಲಿ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡು, ಮಾಹಿತಿ ಬಂದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

“ಬೆಂಗಳೂರಿನ ಪುಟ್ಟೇನಹಳ್ಳಿಯ ಗಣೇಶ ಮೆರವಣಿಗೆ ವೇಳೆ ಇಂತಹದ್ದೇ ಘಟನೆ ನಡೆದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಶಸ್ತ್ರಾಸ್ತ್ರ ಕಾಯ್ದೆಯ ಇದೇ ರೀತಿಯ ಸೆಕ್ಷನ್‌ಗಳ ಅಡಿಯಲ್ಲಿ ನಾವು ಅವರ ಮೇಲೆ ಕೂಡಾ ಪ್ರಕರಣ ದಾಖಲಿಸಿದ್ದೇವೆ. ಇದು ನಿರ್ದಿಷ್ಟ ಪ್ರಕರಣಕ್ಕೆ ಸೀಮಿತವಾಗಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...