Homeಅಂತರಾಷ್ಟ್ರೀಯಸಿರಿಯಾ | ಭಾರತದ 75 ನಾಗರಿಕರ ಸ್ಥಳಾಂತರ - ಕೇಂದ್ರ ಸರ್ಕಾರ ಪ್ರತಿಪಾದನೆ

ಸಿರಿಯಾ | ಭಾರತದ 75 ನಾಗರಿಕರ ಸ್ಥಳಾಂತರ – ಕೇಂದ್ರ ಸರ್ಕಾರ ಪ್ರತಿಪಾದನೆ

- Advertisement -
- Advertisement -

ಮಾಜಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಸರ್ಕಾರವನ್ನು ಪತನಗೊಳಿಸಿದ ನಂತರ ಸಿರಿಯಾದಲ್ಲಿನ ಅಶಾಂತಿಯ ನಡುವೆ ಜಮ್ಮು ಕಾಶ್ಮೀರದ 44 ಯಾತ್ರಿಕರು ಸೇರಿದಂತೆ ಸಿರಿಯಾದಿಂದ ಭಾರತವು ತನ್ನ 75 ನಾಗರಿಕರನ್ನು ಬುಧವಾರ ಸ್ಥಳಾಂತರಿಸಿದೆ ಎಮದು ವರದಿಯಾಗಿದೆ. ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್ ಅನ್ನು ದಾಟಿದ್ದಾರೆ ಮತ್ತು ವಾಣಿಜ್ಯ ವಿಮಾನಗಳ ಮೂಲಕ ಭಾರತಕ್ಕೆ ಮರಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ. ಸಿರಿಯಾ 

ಡಮಾಸ್ಕಸ್ ಮತ್ತು ಬೈರುತ್‌ನಲ್ಲಿರುವ ಭಾರತದ ರಾಯಭಾರ ಕಚೇರಿಗಳು “ಭದ್ರತಾ ಪರಿಸ್ಥಿತಿಯ ಮೌಲ್ಯಮಾಪನ ಮತ್ತು ಸಿರಿಯಾದಲ್ಲಿನ ಭಾರತೀಯ ಪ್ರಜೆಗಳ ವಿನಂತಿಗಳ ನಂತರ” ಸ್ಥಳಾಂತರಿಸುವಿಕೆಯನ್ನು ಸಂಘಟಿಸಲಾಗಿದೆ ಎಂದು ತಿಳಿಸಿದೆ. “ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಕೇಂದ್ರವು ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ” ಎಂದು ಸರ್ಕಾರದ ಹೇಳಿಕೆಯು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಿರಿಯಾದಲ್ಲಿರುವ ಭಾರತೀಯ ಪ್ರಜೆಗಳು ತುರ್ತು ಸಹಾಯವಾಣಿ ಸಂಖ್ಯೆ ಮತ್ತು ಇಮೇಲ್ ವಿಳಾಸದ ಮೂಲಕ ಡಮಾಸ್ಕಸ್‌ನಲ್ಲಿರುವ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಒತ್ತಾಯಿಸಲಾಗಿತ್ತು. “ಸರ್ಕಾರವು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತದೆ” ಎಂದು ಸಚಿವಾಲಯ ಹೇಳಿದೆ.

ಭಾನುವಾರ, ಹಯಾತ್ ತಹ್ರೀರ್ ಅಲ್-ಶಾಮ್ ಮುಖ್ಯಸ್ಥ ಅಬು ಮೊಹಮ್ಮದ್ ಅಲ್-ಜೋಲಾನಿ ನೇತೃತ್ವದ ಸಶಸ್ತ್ರ ಬಂಡಾಯ ಪಡೆಗಳು ಸಿರಿಯಾದ ರಾಜಧಾನಿ ಡಮಾಸ್ಕಸ್ ಅನ್ನು ಅವಿರೋಧವಾಗಿ ಪ್ರವೇಶಿಸಿ ಅಸ್ಸಾದ್ ಸರ್ಕಾರವನ್ನು ಉರುಳಿಸಿ, ದೇಶದಲ್ಲಿ ಅವರ ಕುಟುಂಬದ 50 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು. ಅಸ್ಸಾದ್ ತನ್ನ ಕುಟುಂಬದೊಂದಿಗೆ ರಷ್ಯಾಕ್ಕೆ ಓಡಿಹೋಗಿದ್ದು, ಅಲ್ಲಿ ಅವರಿಗೆ ಮಾನವೀಯ ಆಧಾರದ ಮೇಲೆ ಮಾಸ್ಕೋ ಆಶ್ರಯ ನೀಡಿದೆ.

ರಷ್ಯಾವು ಇರಾನ್ ಜೊತೆಗೆ, ದೇಶದ 13 ವರ್ಷಗಳ ಅಸ್ಸಾದ್ ಆಡಳಿತವನ್ನು ಬೆಂಬಲಿಸಿತ್ತು. ಸರ್ವಾಧಿಕಾರಿಯ ಆಡಳಿತದ ಪತನವು ಈ ಎರಡೂ ರಾಷ್ಟ್ರಗಳಿಗೆ ಹೊಡೆತವಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ. 1971 ರಿಂದ ದೇಶದ ಅಧ್ಯಕ್ಷರಾಗಿದ್ದ ಅವರ ತಂದೆ ಹಫೀಜ್ ಅಲ್-ಅಸ್ಸಾದ್ ಅವರ ಮರಣದ ನಂತರ ಜುಲೈ 2000 ರಲ್ಲಿ ಪ್ರಾರಂಭವಾದ ಸುಮಾರು 25 ವರ್ಷಗಳ ಕಾಲ ಅಸ್ಸಾದ್ ಸಿರಿಯಾ ಸರ್ಕಾರದ ಮುಖ್ಯಸ್ಥರಾಗಿದ್ದರು.

ಅಸ್ಸಾದ್ ಸರ್ಕಾರವನ್ನು ಉರುಳಿಸಿದ ಸಶಸ್ತ್ರ ಬಂಡುಕೋರ ಪಡೆಗಳು ಮೊಹಮ್ಮದ್ ಅಲ್-ಬಶೀರ್ ಅವರನ್ನು ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ನೇಮಿಸಿವೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಇಡ್ಲಿಬ್‌ನಲ್ಲಿ ಹಯಾತ್ ತಹ್ರೀರ್ ಅಲ್-ಶಾಮ್ ನೇತೃತ್ವದ ಸರ್ಕಾರದ ನಾಯಕ ಬಶೀರ್ ಅವರು ಮಾರ್ಚ್ 1, 2025 ರವರೆಗೆ ಮಧ್ಯಂತರ ಸರ್ಕಾರವನ್ನು ಮುನ್ನಡೆಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಸಿರಿಯನ್ನರು “ಸ್ಥಿರತೆ ಮತ್ತು ಶಾಂತತೆಗೆ” ಅರ್ಹರಾಗಿದ್ದು, ಸಾರ್ವಜನಿಕ ಸೇವೆಗಳು ಮತ್ತು ಸಂಸ್ಥೆಗಳನ್ನು ಪುನಃಸ್ಥಾಪಿಸಲು ಅಸ್ಸಾದ್ ಆಡಳಿತದ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿರುವುದಾಗಿ ಬುಧವಾರ ಬಶೀರ್ ಅವರು ಹೇಳಿದ್ದಾರೆ. ಅಸ್ಸಾದ್ ಸರ್ಕಾರದ ಪತನದ ಮೂರು ದಿನಗಳ ನಂತರ ಬುಧವಾರ ಡಮಾಸ್ಕಸ್‌ನಲ್ಲಿ ಬ್ಯಾಂಕುಗಳು ಮತ್ತು ಅಂಗಡಿಗಳು ಪುನಃ ತೆರೆಯಲ್ಪಟ್ಟವು.

ಈ ನಡುವೆ, ಕಳೆದ 48 ಗಂಟೆಗಳಲ್ಲಿ ಸಿರಿಯಾದ ಮೇಲೆ 480 ದಾಳಿಗಳನ್ನು ನಡೆಸಲಾಗಿದೆ ಎಂದು ಇಸ್ರೇಲ್‌ನ ಮಿಲಿಟರಿ ಬುಧವಾರ ತಿಳಿಸಿದೆ. ಈ ದಾಳಿಯಲ್ಲಿ ಹಲವಾರು ನಗರಗಳ 15 ನೌಕಾ ಹಡಗುಗಳು, ವಿಮಾನ ವಿರೋಧಿ ಬ್ಯಾಟರಿಗಳು ಮತ್ತು ಶಸ್ತ್ರಾಸ್ತ್ರ ಉತ್ಪಾದನಾ ತಾಣಗಳನ್ನು ನಾಶಪಡಿಸಲಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು : ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರು ವಜಾ

ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು : ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...